ಯೆಶಾಯ 19:19 - ಪರಿಶುದ್ದ ಬೈಬಲ್19 ಆ ಸಮಯದಲ್ಲಿ ಈಜಿಪ್ಟಿನ ಮಧ್ಯದಲ್ಲಿ ಯೆಹೋವನಿಗಾಗಿ ಒಂದು ವೇದಿಕೆ ಇರುವದು. ಈಜಿಪ್ಟಿನ ಗಡಿಯಲ್ಲಿ ಯೆಹೋವನ ಗೌರವಾರ್ಥವಾಗಿ ಸ್ಮಾರಕಸ್ತಂಭ ಇರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅ ದಿನದಲ್ಲಿ ಐಗುಪ್ತ ದೇಶದ ಮಧ್ಯದಲ್ಲಿ ಯೆಹೋವನಿಗೆ ಒಂದು ಯಜ್ಞಪೀಠವು, ದೇಶದ ಮೇರೆಯಲ್ಲಿ ಯೆಹೋವನಿಗೆ ಒಂದು ಸ್ತಂಭವೂ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆ ದಿನದಂದು ಈಜಿಪ್ಟಿನ ನಡುವೆ ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವಿರುವುದು ಮತ್ತು ನಾಡಿನ ಗಡಿಯಲ್ಲಿ ಸ್ವಾಮಿಯ ಸ್ಥಂಭ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆ ದಿನದಲ್ಲಿ ಐಗುಪ್ತದೇಶದ ಮಧ್ಯೆ ಯೆಹೋವನಿಗೆ ಒಂದು ಯಜ್ಞಪೀಠವೂ ದೇಶದ ಎಲ್ಲೆಯಲ್ಲಿ ಯೆಹೋವನಿಗೆ ಒಂದು ಸ್ತಂಭವೂ ಇರುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆ ದಿನದಲ್ಲಿ ಈಜಿಪ್ಟ್ ದೇಶದ ಮಧ್ಯದಲ್ಲಿ ಯೆಹೋವ ದೇವರಿಗೆ ಬಲಿಪೀಠವು ದೇಶದ ಎಲ್ಲೆಯಲ್ಲಿ ಯೆಹೋವ ದೇವರಿಗೆ ಒಂದು ಸ್ತಂಭವು ಇರುವುದು. ಅಧ್ಯಾಯವನ್ನು ನೋಡಿ |
ನೀವು ಆರಾಧಿಸುವ ದೇವರನ್ನೇ ನಾವೂ ಆರಾಧಿಸುತ್ತೇವೆಂಬುದನ್ನು ನಮ್ಮ ಜನರಿಗೆ ತೋರಿಸಿಕೊಡುವುದೇ ಈ ಯಜ್ಞವೇದಿಕೆಯ ನಿಜವಾದ ಉದ್ದೇಶವಾಗಿದೆ. ನಾವು ಯೆಹೋವನನ್ನು ಆರಾಧಿಸುತ್ತೇವೆ. ನಾವು ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನು ಯೆಹೋವನ ಸಾನ್ನಿಧ್ಯದಲ್ಲಿ ಸಮರ್ಪಿಸುತ್ತೇವೆ ಎಂಬುದಕ್ಕೆ ಈ ಯಜ್ಞವೇದಿಕೆಯು ನಿಮಗೂ ನಮಗೂ ಮತ್ತು ನಮ್ಮ ಮುಂದಿನ ಪೀಳಿಗೆಗಳಿಗೂ ಸಾಕ್ಷಿಯಾಗಿರುತ್ತದೆ. ನಾವು ಸಹ ನಿಮ್ಮಂತೆಯೇ ಇಸ್ರೇಲಿನ ಜನರೆಂಬುದನ್ನು ದೊಡ್ಡವರಾದ ಮೇಲೆ ನಿಮ್ಮ ಮಕ್ಕಳಿಗೆ ತಿಳಿದಿರಲಿ ಎಂಬುದು ನಮ್ಮ ಇಚ್ಛೆ.
ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳಿಗೆ ‘ನೀವು ಇಸ್ರೇಲಿಗೆ ಸಂಬಂಧಪಟ್ಟವರಲ್ಲ’ ಎಂದು ಹೇಳಿದರೆ, ನಮ್ಮ ಮಕ್ಕಳು ‘ಇಲ್ಲಿ ನೋಡಿ! ಗತಿಸಿಹೋದ ನಮ್ಮ ಪೂರ್ವಿಕರು ಒಂದು ಯಜ್ಞವೇದಿಕೆಯನ್ನು ಕಟ್ಟಿದ್ದಾರೆ. ಆ ಯಜ್ಞವೇದಿಕೆಯು ಪವಿತ್ರ ಗುಡಾರದಲ್ಲಿರುವ ಯಜ್ಞವೇದಿಕೆಯಂತಿದೆ. ನಾವು ಈ ಯಜ್ಞವೇದಿಕೆಯನ್ನು ಸರ್ವಾಂಗಹೋಮಗಳಿಗಾಗಲಿ ಯಜ್ಞಗಳಿಗಾಗಲಿ ಬಳಸುವುದಿಲ್ಲ. ನಾವು ಇಸ್ರೇಲಿಗೆ ಸೇರಿದವರೆಂಬುದಕ್ಕೆ ಈ ಯಜ್ಞವೇದಿಕೆ ಸಾಕ್ಷಿಯಾಗಿದೆ’ ಎಂದು ಹೇಳುವರು.
ಈ ಸಂದೇಶವು ಈಜಿಪ್ಟ್ ಜನಾಂಗದ ಬಗ್ಗೆ ಇದೆ. ಈ ಸಂದೇಶವು ಫರೋಹನೆಕೋವಿನ ಸೈನ್ಯದ ಬಗ್ಗೆ ಇದೆ. ಫರೋಹನೆಕೋವು ಈಜಿಪ್ಟಿನ ರಾಜನಾಗಿದ್ದನು. ಅವನ ಸೈನ್ಯವನ್ನು ಕರ್ಕೆಮೀಷ್ ಪಟ್ಟಣದಲ್ಲಿ ಸೋಲಿಸಲಾಯಿತು. ಕರ್ಕೆಮೀಷ್ ಪಟ್ಟಣವು ಯೂಫ್ರೇಟೀಸ್ ನದಿಯ ದಂಡೆಯ ಮೇಲಿದೆ. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದದಲ್ಲಿ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಫರೋಹನೆಕೋವಿನ ಸೈನ್ಯವನ್ನು ಕರ್ಕೆಮೀಷಿನಲ್ಲಿ ಸೋಲಿಸಿದನು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಈಜಿಪ್ಟಿಗೆ ಯೆಹೋವನ ಸಂದೇಶ ಹೀಗಿತ್ತು: