Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:2 - ಪರಿಶುದ್ದ ಬೈಬಲ್‌

2 ದೇವರು ಹೇಳುವುದೇನೆಂದರೆ: “ನಾನು ಈಜಿಪ್ಟಿನ ಜನರಲ್ಲಿ ಒಳಜಗಳವನ್ನು ಹುಟ್ಟಿಸುವೆನು. ಜನರು ತಮ್ಮ ಸಹೋದರರೊಂದಿಗೆ ಜಗಳವಾಡುವರು. ನೆರೆಹೊರೆಯವರು ಪರಸ್ಪರ ಜಗಳವಾಡುವರು. ನಗರವು ನಗರದೊಂದಿಗೆ ಯುದ್ಧ ಮಾಡುವದು. ಒಂದು ರಾಷ್ಟ್ರವು ಇನ್ನೊಂದು ರಾಷ್ಟ್ರದೊಂದಿಗೆ ಯುದ್ಧಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಐಗುಪ್ತರನ್ನು ಐಗುಪ್ತ್ಯರ ಮೇಲೆಯೇ ಎಬ್ಬಿಸುವೆನು: ಸಹೋದರನಿಗೆ ವಿರುದ್ಧವಾಗಿ ಸಹೋದರನು, ನೆರೆಯವನಿಗೆ ವಿರುದ್ಧವಾಗಿ ನೆರೆಯವನೂ, ಪಟ್ಟಣಕ್ಕೆ ವಿರುದ್ಧವಾಗಿ ಪಟ್ಟಣವೂ, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಹೋರಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸರ್ವೇಶ್ವರ ಇಂತೆನ್ನುತ್ತಾರೆ : “ನಾನು ಈಜಿಪ್ಟಿನವರಲ್ಲಿ ಒಳಜಗಳವನ್ನು ಎಬ್ಬಿಸುವೆನು. ಅಣ್ಣತಮ್ಮಂದಿರು, ನೆರೆಹೊರೆಯವರು, ನಗರನಗರಗಳು, ರಾಜರಾಜರುಗಳು ಪರಸ್ಪರ ಕಾದಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಐಗುಪ್ತ್ಯರನ್ನು ಐಗುಪ್ತ್ಯರ ಮೇಲೆಯೇ ಎಬ್ಬಿಸುವೆನು; ಅಣ್ಣತಮ್ಮಂದಿರು, ನೆರೆಹೊರೆಯವರು, ಪಟ್ಟಣ ಪಟ್ಟಣಗಳು, ರಾಷ್ಟ್ರ ರಾಷ್ಟ್ರಗಳು ಪರಸ್ಪರವಾಗಿ ಹೋರಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ನಾನು ಈಜಿಪ್ಟಿನವನಿಗೆ ವಿರೋಧವಾಗಿ ಈಜಿಪ್ಟಿನವನನ್ನು ಎಬ್ಬಿಸುವೆನು. ಸಹೋದರನಿಗೆ ವಿರುದ್ಧವಾಗಿ ಸಹೋದರನೂ, ನೆರೆಯವನಿಗೆ ವಿರುದ್ಧವಾಗಿ ನೆರೆಯವನೂ, ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೊರಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:2
20 ತಿಳಿವುಗಳ ಹೋಲಿಕೆ  

ಗಿದ್ಯೋನನ ಮುನ್ನೂರು ಜನರು ತಮ್ಮ ತುತ್ತೂರಿಗಳನ್ನು ಊದಿದ ಕೂಡಲೆ ಮಿದ್ಯಾನ್ಯರು ತಮ್ಮತಮ್ಮಲ್ಲಿಯೇ ಒಬ್ಬರನ್ನೊಬ್ಬರು ಕತ್ತಿಯಿಂದ ಇರಿದು ಕೊಲ್ಲುವಂತೆ ಯೆಹೋವನು ಮಾಡಿದನು. ಶತ್ರುಗಳ ಸೈನ್ಯವು ಚೆರೇರದ ದಾರಿಯಲ್ಲಿರುವ ಬೇತ್‌ಷಿಟ್ಟಿನವರೆಗೂ ಓಡಿಹೋಯಿತು. ಅವರು ಟಬ್ಬಾತಿನ ಬಳಿಯಲ್ಲಿರುವ ಅಬೇಲ್ಮೆಹೋಲಾ ನಗರದವರೆಗೂ ಓಡಿಹೋದರು.


ಸೌಲನು ಸೈನಿಕರನ್ನೆಲ್ಲ ಒಟ್ಟುಗೂಡಿಸಿಕೊಂಡು ಯುದ್ಧಕ್ಕೆ ಹೋದನು. ಫಿಲಿಷ್ಟಿಯ ಸೈನಿಕರಲ್ಲಿ ನಿಜವಾಗಿಯೂ ಗಲಿಬಿಲಿಯುಂಟಾಗಿತ್ತು. ಅವರು ತಮ್ಮತಮ್ಮಲ್ಲಿಯೇ ಕತ್ತಿಗಳಿಂದ ಹೋರಾಡುತ್ತಿದ್ದರು.


ಫರಿಸಾಯರು ಆಲೋಚಿಸುತ್ತಿದ್ದ ಸಂಗತಿಗಳು ಯೇಸುವಿಗೆ ತಿಳಿದಿದ್ದವು. ಆದ್ದರಿಂದ ಯೇಸು ಅವರಿಗೆ, “ತನಗೆ ವಿರೋಧವಾಗಿ ತಾನೇ ಹೋರಾಡುವ ರಾಜ್ಯವು ನಾಶವಾಗುವುದು. ಅಂತಃಕಲಹದಿಂದ ಒಡೆದುಹೋಗಿರುವ ಪ್ರತಿಯೊಂದು ರಾಜ್ಯವು ಸ್ಥಿರವಾಗಿರುವುದಿಲ್ಲ. ಭೇದಭಾವ ಹೊಂದಿರುವ ಪ್ರತಿಯೊಂದು ಕುಟುಂಬವು ಅಭಿವೃದ್ಧಿಯಾಗುವುದಿಲ್ಲ.


“ಸಹೋದರರು ಸ್ವಂತ ಸಹೋದರರಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು. ತಂದೆಯಂದಿರು ತಮ್ಮ ಸ್ವಂತ ಮಕ್ಕಳಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು.


ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿನ ಪರ್ವತಗಳಲ್ಲಿ ಗೋಗನಿಗೆ ಭಯಂಕರ ಪರಿಸ್ಥಿತಿ ಉಂಟಾಗುವಂತೆ ಮಾಡುವೆನು. ಅವನ ಸೈನಿಕರು ಭಯಗೊಂಡು ಒಬ್ಬರನ್ನೊಬ್ಬರು ಕತ್ತಿಯಿಂದ ಕೊಲ್ಲುವರು.


ಇದರರ್ಥವೇನೆಂದರೆ ಮನಸ್ಸೆಯು ಎಫ್ರಾಯೀಮನೊಡನೆ ಯುದ್ಧ ಮಾಡುವನು ಮತ್ತು ಎಫ್ರಾಯೀಮನು ಮನಸ್ಸೆಯೊಂದಿಗೆ ಯುದ್ಧಮಾಡುವನು. ಆಮೇಲೆ ಅವರಿಬ್ಬರೂ ಸೇರಿ ಯೆಹೂದದೊಂದಿಗೆ ಯುದ್ಧ ಮಾಡುವರು. ಯೆಹೋವನು ಇಸ್ರೇಲರ ಮೇಲೆ ಇನ್ನೂ ಕೋಪದಿಂದಿದ್ದಾನೆ; ತನ್ನ ಜನರನ್ನು ಇನ್ನೂ ಶಿಕ್ಷಿಸಲು ಸಿದ್ಧನಾಗಿದ್ದಾನೆ.


ಫಿಲಿಷ್ಟಿಯ ಸೈನಿಕರು ದಿಕ್ಕುಪಾಲಾಗಿ ಚದರಿ ಓಡಿಹೋಗುತ್ತಿರುವುದನ್ನು ಬೆನ್ಯಾಮೀನ್ ಪ್ರಾಂತ್ಯದ ಗಿಬೆಯದಲ್ಲಿದ್ದ ಸೌಲನ ಕಾವಲುಗಾರರು ನೋಡಿದರು.


ಅಬೀಮೆಲೆಕನು ಯೆರುಬ್ಬಾಳನ ಎಪ್ಪತ್ತು ಮಕ್ಕಳನ್ನು ಕೊಂದಿದ್ದನು. ಅವರು ಅವನ ಸ್ವಂತ ಸಹೋದರರಾಗಿದ್ದರು. ಶೆಕೆಮಿನ ಹಿರಿಯರು ಈ ದುಷ್ಕೃತ್ಯದಲ್ಲಿ ಅವನಿಗೆ ಬೆಂಬಲ ಕೊಟ್ಟಿದ್ದರು. ಆದ್ದರಿಂದ ಯೆಹೋವನು ಅಬೀಮೆಲೆಕನ ಮತ್ತು ಶೆಕೆಮಿನ ಹಿರಿಯರ ಮಧ್ಯೆ ಮನಸ್ತಾಪ ಹುಟ್ಟುವಂತೆ ಮಾಡಿದನು. ಶೆಕೆಮಿನ ಹಿರಿಯರು ಅಬೀಮೆಲೆಕನಿಗೆ ಕಷ್ಟ ಕೊಡಲು ಯೋಚಿಸುತ್ತಿದ್ದರು.


ಜನಾಂಗಗಳು ಬೇರೆ ಜನಾಂಗಗಳಿಗೆ ವಿರೋಧವಾಗಿ ಯುದ್ದ ಮಾಡುತ್ತವೆ. ರಾಜ್ಯಗಳು ಬೇರೆಬೇರೆ ರಾಜ್ಯಗಳಿಗೆ ವಿರೋಧವಾಗಿ ಯುದ್ಧ ಮಾಡುತ್ತವೆ. ಬರಗಾಲಗಳು ಬರುತ್ತವೆ. ಬೇರೆಬೇರೆ ಸ್ಥಳಗಳಲ್ಲಿ ಭೂಕಂಪಗಳು ಆಗುತ್ತವೆ.


ಬೇರೆ ಜನಾಂಗಗಳು ನೀನು ಗೋಳಾಡುವದನ್ನು ಕೇಳಿಸಿಕೊಳ್ಳುವವು. ನಿನ್ನ ಗೋಳಾಟವು ಇಡೀ ಭೂಮಂಡಲದಲ್ಲೆಲ್ಲ ಕೇಳಿಸುವುದು. ‘ಒಬ್ಬ ಶೂರ ಸೈನಿಕನು’ ಮತ್ತೊಬ್ಬ ‘ಶೂರ ಸೈನಿಕನನ್ನು’ ಎದುರಿಸುವನು. ಆ ಶೂರ ಸೈನಿಕರಿಬ್ಬರೂ ಒಟ್ಟಿಗೆ ನೆಲಕ್ಕೆ ಬೀಳುವರು.”


“ನನ್ನ ಜನರೇ, ದುಃಖಿಸಬೇಡಿ, ಸುದ್ದಿಗಳು ಹಬ್ಬುತ್ತವೆ. ಆದರೆ ಹೆದರಬೇಡಿ. ಒಂದು ಸುದ್ದಿ ಈ ವರ್ಷ ಬರುವುದು. ಮುಂದಿನ ವರ್ಷ ಮತ್ತೊಂದು ಸುದ್ದಿ ಬರಬಹುದು. ದೇಶದಲ್ಲಿ ಭಯಂಕರವಾದ ಯುದ್ಧದ ಬಗ್ಗೆ ಸುದ್ದಿಗಳು ಕೇಳಿಬರುವವು. ರಾಜರುಗಳು ಬೇರೆ ರಾಜರುಗಳೊಂದಿಗೆ ಯುದ್ಧ ಮಾಡುತ್ತಿರುವ ವದಂತಿಗಳು ಕೇಳಿಬರುವವು.


ಇದಕ್ಕಿಂತ ಮುಂಚೆ ಜನರ ಕೈಯಲ್ಲಿ ಕೆಲಸಗಾರರಿಗೆ ಕೂಲಿ ಕೊಡುವದಕ್ಕಾಗಲಿ ಪ್ರಾಣಿಗಳ ಬಾಡಿಗೆ ಕೊಡುವದಕ್ಕಾಗಲಿ ಹಣವಿರಲಿಲ್ಲ. ಅದೇ ಸಮಯದಲ್ಲಿ ಜನರು ಹೋಗುತ್ತಾ ಬರುತ್ತಾ ಇರುವದಕ್ಕೆ ಸುರಕ್ಷತೆ ಇರಲಿಲ್ಲ. ಎಲ್ಲಾ ತೊಂದರೆಗಳು ತೊರೆಯಲ್ಪಡಲಿಲ್ಲ. ಪ್ರತಿ ಮನುಷ್ಯನು ತನ್ನ ನೆರೆಯವನ ಮೇಲೆ ಎದುರುಬೀಳುವಂತೆ ನಾನು ಮಾಡಿದ್ದೆನು.


ಇಸ್ರೇಲಿನ ಜನರಲ್ಲಿ ಎರಡು ಪಕ್ಷಗಳಾದವು. ಗೀನತನ ಮಗನಾದ ತಿಬ್ನಿಯನ್ನು ಒಂದು ಪಕ್ಷದವರು ಅನುಸರಿಸಿ, ಅವನನ್ನು ತಮ್ಮ ರಾಜನನ್ನಾಗಿ ಮಾಡಲು ಅಪೇಕ್ಷೆಪಟ್ಟರು. ಮತ್ತೊಂದು ಪಕ್ಷದವರು ಒಮ್ರಿಯನ್ನು ಅನುಸರಿಸಿದರು.


ಒಂದು ದೇಶವು ಇನ್ನೊಂದು ದೇಶವನ್ನು ನಾಶಮಾಡುತ್ತಿತ್ತು; ಒಂದು ಪಟ್ಟಣವು ಇನ್ನೊಂದು ಪಟ್ಟಣವನ್ನು ಸೂರೆಮಾಡುತ್ತಿತ್ತು. ಹೀಗೆ ದೇವರು ಎಲ್ಲಾ ಬಗೆಯ ತೊಂದರೆಗಳಿಂದ ಅವರನ್ನು ತಳಮಳಗೊಳಿಸಿದನು.


ಪ್ರಜೆಗಳು ಒಬ್ಬರಿಗೊಬ್ಬರು ವಿರೋಧಿಗಳಾಗುವರು; ಬಾಲಕರು ಹಿರಿಯರನ್ನು ಗೌರವಿಸರು. ಸಾಮಾನ್ಯರು ಗಣ್ಯವ್ಯಕ್ತಿಗಳನ್ನು ಸನ್ಮಾನಿಸರು.”


ತನ್ನ ವಿರುದ್ಧವಾಗಿ ತಾನೇ ಹೋರಾಡುವ ರಾಜ್ಯ ಉಳಿಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು