ಯೆಶಾಯ 19:20 - ಪರಿಶುದ್ದ ಬೈಬಲ್20 ಇದು ಸರ್ವಶಕ್ತನಾದ ಯೆಹೋವನು ಅದ್ಭುತವನ್ನು ನಡಿಸುತ್ತಾನೆಂಬುದಕ್ಕೆ ಗುರುತಾಗಿದೆ. ಜನರು ಯಾವಾಗಲಾದರೂ ಸರಿಯೇ ಸಹಾಯಕ್ಕಾಗಿ ಮೊರೆಯಿಟ್ಟರೆ ಆತನು ಸಹಾಯವನ್ನು ಕಳುಹಿಸುವನು. ಯೆಹೋವನು ಅವರನ್ನು ರಕ್ಷಿಸಲೂ ಕಾಪಾಡಲೂ ಒಬ್ಬನನ್ನು ಕಳುಹಿಸುವನು. ಆ ಮನುಷ್ಯನು ಬೇರೆಯವರಿಂದ ಶೋಷಿತರಾದವರನ್ನು ಸಂರಕ್ಷಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವು ಐಗುಪ್ತ ದೇಶದಲ್ಲಿ ಸೇನಾಧೀಶ್ವರನಾದ ಯೆಹೋವನ ಗುರುತಾಗಿಯೂ, ಸಾಕ್ಷಿಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಯೆಹೋವನನ್ನು ಕೂಗಿಕೊಳ್ಳಲು ಆತನು ಅವರಿಗಾಗಿ ಹೋರಾಡುವ ಶೂರನಾದ ರಕ್ಷಕನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇವು ಈಜಿಪ್ಟ್ ದೇಶಕ್ಕೆ ಸರ್ವೇಶ್ವರ ಸ್ವಾಮಿಯ ಸಂಕೇತವಾಗಿಯೂ ಸಾಕ್ಷಿಯಾಗಿಯೂ ಇರುವುವು. ಅವರು ತಮ್ಮನ್ನು ಬಾಧಿಸುವವರ ವಿರುದ್ಧ ಸರ್ವೇಶ್ವರ ಸ್ವಾಮಿಗೆ ಮೊರೆಯಿಟ್ಟಾಗ, ಸ್ವಾಮಿಯು ವೀರನಾದ ರಕ್ಷಕನೊಬ್ಬನನ್ನು ಕಳುಹಿಸುವರು. ಆತನು ಆ ಜನರನ್ನು ಬಿಡುಗಡೆಮಾಡಿ ಉದ್ಧರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವು ಐಗುಪ್ತದೇಶದಲ್ಲಿ ಸೇನಾಧೀಶ್ವರನಾದ ಯೆಹೋವನ ಗುರುತಾಗಿಯೂ ಸಾಕ್ಷಿಯಾಗಿಯೂ ಇರುವವು; ಹಿಂಸಕರ ದೆಸೆಯಿಂದ ಯೆಹೋವನನ್ನು ಕೂಗಿಕೊಳ್ಳಲು ಆತನು ಅವರಿಗಾಗಿ ಹೋರಾಡುವ ಶೂರನಾದ ರಕ್ಷಕನನ್ನು ಕಳುಹಿಸಿ ಅವರನ್ನುದ್ಧರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅದು ಸೇನಾಧೀಶ್ವರ ಯೆಹೋವ ದೇವರಿಗೆ ಈಜಿಪ್ಟ್ ದೇಶದಲ್ಲಿ ಗುರುತಾಗಿ ಸಾಕ್ಷಿಯಾಗಿರುವುದು. ಏಕೆಂದರೆ ಹಿಂಸಕರ ದೆಸೆಯಿಂದ ಯೆಹೋವ ದೇವರನ್ನು ಕೂಗಿಕೊಳ್ಳಲು, ದೇವರು ಅವರಿಗೆ ಒಬ್ಬ ಶೂರನಾದ ರಕ್ಷಕನನ್ನು ಕಳುಹಿಸಿ, ಅವರನ್ನು ಬಿಡುಗಡೆ ಮಾಡುವರು. ಅಧ್ಯಾಯವನ್ನು ನೋಡಿ |