ಯೆಶಾಯ 19:22 - ಪರಿಶುದ್ದ ಬೈಬಲ್22 ಯೆಹೋವನು ಈಜಿಪ್ಟಿನ ಜನರನ್ನು ಶಿಕ್ಷಿಸುವನು. ಆಮೇಲೆ ಆತನು ಅವರನ್ನು ಕ್ಷಮಿಸುವನು. ಆಗ ಅವರು ಆತನ ಬಳಿಗೆ ಹಿಂದಿರುಗಿ ಬರುವರು. ಯೆಹೋವನು ಅವರ ಪ್ರಾರ್ಥನೆಯನ್ನು ಕೇಳಿ ಅವರನ್ನು ಕ್ಷಮಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಇದಲ್ಲದೆ ಯೆಹೋವನು ಐಗುಪ್ತವನ್ನು ಹೊಡೆಯುವನು. ಗಾಯಮಾಡಿ ವಾಸಿಮಾಡುವವನಾಗಿಯೇ ಹೊಡೆಯುವನು. ಅವರು ಯೆಹೋವನ ಕಡೆಗೆ ತಿರುಗಿಕೊಳ್ಳುವರು. ಆತನು ಅವರ ವಿಜ್ಞಾಪನೆಯನ್ನು ಲಾಲಿಸಿ ಅವರನ್ನು ಗುಣಪಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಇದಲ್ಲದೆ ಸರ್ವೇಶ್ವರ ಈಜಿಪ್ಟಿನವರನ್ನು ದಂಡಿಸುವರು, ಗಾಯಗೊಳಿಸಿದರೂ ಗುಣಪಡಿಸುವರು. ಈಜಿಪ್ಟಿನವರು ಸ್ವಾಮಿಯ ಕಡೆಗೆ ತಿರುಗಿಕೊಳ್ಳುವರು. ಸ್ವಾಮಿ ಅವರ ಮೊರೆಯನ್ನು ಆಲಿಸಿ ಅವರನ್ನು ಗುಣಪಡಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಇದಲ್ಲದೆ ಯೆಹೋವನು ಐಗುಪ್ತ್ಯರನ್ನು ಹೊಡೆಯುವನು, ಗಾಯಮಾಡಿ ವಾಸಿಮಾಡುವವನಾಗಿಯೇ ಹೊಡೆಯುವನು; ಅವರು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಆತನು ಅವರ ವಿಜ್ಞಾಪನೆಯನ್ನು ಲಾಲಿಸಿ ಅವರನ್ನು ಗುಣಪಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಇದಲ್ಲದೆ ಯೆಹೋವ ದೇವರು ಈಜಿಪ್ಟಿನವರನ್ನು ಹೊಡೆಯುವರು; ಗಾಯಮಾಡಿ ಸ್ವಸ್ಥ ಮಾಡುವರು. ಅವರು ಯೆಹೋವ ದೇವರ ಕಡೆಗೆ ತಿರುಗಿಕೊಳ್ಳುವರು, ದೇವರು ಅವರನ್ನು ಆಲೈಸಿ ಸ್ವಸ್ಥ ಮಾಡುವರು. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆದುಕೊಳ್ಳುವೆ. ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು. ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ. ಬೇರೆ ದೇವರುಗಳೇ ಇಲ್ಲ’” ಎಂದು ನಿಮ್ಮಲ್ಲಿ ಪ್ರಾರ್ಥಿಸುವರು.