ಯೆಶಾಯ 19:23 - ಪರಿಶುದ್ದ ಬೈಬಲ್23 ಆ ಸಮಯದಲ್ಲಿ ಈಜಿಪ್ಟಿನಿಂದ ಅಶ್ಶೂರದವರೆಗೆ ಹೆದ್ದಾರಿ ಇರುವುದು. ಆಗ ಅಶ್ಶೂರದವರು ಈಜಿಪ್ಟಿಗೂ, ಈಜಿಪ್ಟಿನವರು ಅಶ್ಶೂರಕ್ಕೂ ಪ್ರಯಾಣ ಮಾಡುವರು. ಈಜಿಪ್ಟಿನವರು ಅಶ್ಶೂರದವರೊಟ್ಟಿಗೆ ಕೆಲಸ ಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆ ದಿನದಲ್ಲಿ, ಐಗುಪ್ತದಿಂದ ಅಶ್ಶೂರಕ್ಕೆ ಹೋಗಲು ರಾಜಮಾರ್ಗವಿರುವುದು. ಅಶ್ಶೂರ್ಯರು ಐಗುಪ್ತಕ್ಕೂ, ಐಗುಪ್ತರು ಅಶ್ಶೂರಕ್ಕೂ ಹೋಗಿ ಬರುವರು. ಐಗುಪ್ತರು ಅಶ್ಶೂರ್ಯರೊಂದಿಗೆ ಯೆಹೋವನನ್ನು ಆರಾಧಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆ ದಿನದಂದು ಈಜಿಪ್ಟ್ ಮತ್ತು ಅಸ್ಸೀರಿಯರ ನಡುವೆ ಹೆದ್ದಾರಿ ಇರುವುದು. ಅಸ್ಸೀರಿಯದವರು ಈಜಿಪ್ಟಿಗೂ ಈಜಿಪ್ಟಿನವರು ಅಸ್ಸೀರಿಯಕ್ಕೂ ಸಂಚಾರಮಾಡುವರು. ಈಜಿಪ್ಟಿನವರು ಅಸ್ಸೀರಿಯದವರೊಡನೆ ಸೇರಿ ಸರ್ವೇಶ್ವರ ಸ್ವಾಮಿಯನ್ನು ಆರಾಧಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆ ದಿನದಲ್ಲಿ ಐಗುಪ್ತದಿಂದ ಅಶ್ಶೂರಕ್ಕೆ ಹೋಗುವ ರಾಜಮಾರ್ಗವಿರುವದು; ಅಶ್ಶೂರ್ಯರು ಐಗುಪ್ತಕ್ಕೂ ಐಗುಪ್ತ್ಯರು ಅಶ್ಶೂರಕ್ಕೂ ಹೋಗಿಬರುತ್ತಿರುವರು; ಐಗುಪ್ತ್ಯರು ಅಶ್ಶೂರ್ಯರೊಂದಿಗೆ [ಯೆಹೋವನನ್ನು] ಸೇವಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆ ದಿವಸದಲ್ಲಿ ಈಜಿಪ್ಟಿನಿಂದ ಅಸ್ಸೀರಿಯಕ್ಕೆ ಹೋಗುವ ಒಂದು ರಾಜ ಮಾರ್ಗವಿರುವುದು. ಅಸ್ಸೀರಿಯದವರು ಈಜಿಪ್ಟಿಗೂ, ಈಜಿಪ್ಟಿನವರು ಅಸ್ಸೀರಿಯಕ್ಕೂ ಹೋಗಿ ಬರುವರು. ಈಜಿಪ್ಟಿನವರು, ಅಸ್ಸೀರಿಯರೊಂದಿಗೆ ಯೆಹೋವ ದೇವರನ್ನು ಆರಾಧಿಸುವರು. ಅಧ್ಯಾಯವನ್ನು ನೋಡಿ |
ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವುದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.
ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.