3 ಈಜಿಪ್ಟಿನ ಜನರಲ್ಲಿ ಗಲಿಬಿಲಿ ಉಂಟಾಗುವದು. ಆ ಜನರು ತಮ್ಮ ಸುಳ್ಳುದೇವರುಗಳ ಬಳಿಗೂ ಪಂಡಿತರ ಬಳಿಗೂ ಓಡಿ ತಾವು ಏನು ಮಾಡಬೇಕೆಂದು ವಿಚಾರಿಸುವರು. ಮಂತ್ರವಾದಿಗಳನ್ನೂ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಕೇಳುವರು. ಆದರೆ ಅವರ ಯಾವ ಸಲಹೆಗಳೂ ಪ್ರಯೋಜನಕ್ಕೆ ಬರುವದಿಲ್ಲ.”
ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”
ಅರಸನು ತನ್ನ ಎಲ್ಲಾ ಪಂಡಿತರನ್ನು ಕರೆಸಿದನು. ಅವರು ಮಾಟಮಂತ್ರಗಳಿಂದ, ಜ್ಯೋತಿಶ್ಶಾಸ್ತ್ರದ ಸಹಾಯದಿಂದ ಅರಸನ ಕನಸಿನ ಅರ್ಥವನ್ನೂ ಭವಿಷ್ಯದಲ್ಲಿ ಸಂಭವಿಸಲಿರುವುದನ್ನೂ ತಿಳಿದುಕೊಳ್ಳಲು ಪ್ರಯತ್ನ ಮಾಡಿದರು. ರಾಜನು ತಾನು ಕಂಡ ಕನಸಿನ ಅರ್ಥವನ್ನು ತಿಳಿಯಬಯಸಿದ್ದರಿಂದ ಅವರು ಒಳಗೆ ಬಂದು ಅರಸನ ಸಮ್ಮುಖದಲ್ಲಿ ನಿಂತುಕೊಂಡರು.
ಆಗ ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ತನ್ನಲ್ಲಿಗೆ ಕರೆಸಿದನು. ಅವನು ಆ ವಿದ್ವಾಂಸರಿಗೆ, “ಈ ಬರವಣಿಗೆಯನ್ನು ಓದಿ ನನಗೆ ಅದರ ಅರ್ಥವನ್ನು ಹೇಳಬಲ್ಲ ಮನುಷ್ಯನಿಗೆ ನಾನು ಬಹುಮಾನವನ್ನು ಕೊಡುತ್ತೇನೆ. ಆ ಮನುಷ್ಯನಿಗೆ ನಾನು ಕಂದು ಬಣ್ಣದ ವಸ್ತ್ರಗಳನ್ನು ಕೊಡುತ್ತೇನೆ. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.
ಆಗ ಅವರು, ‘ನೀನು ದುಃಖದಿಂದ ಅಳುವದೇಕೆ?’ ಎಂದು ವಿಚಾರಿಸುವರು. ಆಗ ನೀನು ಹೀಗೆ ಹೇಳಬೇಕು: ‘ಭೀತಿಯನ್ನು ಉಂಟು ಮಾಡುವ ವಾರ್ತೆ ಬರುವದರಿಂದ ಎಲ್ಲರ ಹೃದಯಗಳು ಭಯದಿಂದ ಕರಗಿಹೋಗಿರುತ್ತವೆ; ಕೈಗಳು ಬಲಹೀನವಾಗುತ್ತವೆ. ಪ್ರತಿ ಮನುಷ್ಯನ ಆತ್ಮವು ಕೃಶವಾಗುವುದು. ಮೊಣಗಂಟುಗಳು ನೀರಿನಂತಿರುವವು.’ ನೋಡಿ, ಆ ಕೆಟ್ಟ ಸುದ್ದಿಯು ಬರುತ್ತಲಿದೆ. ಇವೆಲ್ಲಾ ನಡೆಯುವವು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.
ಮಾಟಮಂತ್ರಗಳನ್ನು ಕಲಿತುಕೊಳ್ಳುವುದರಲ್ಲೇ ನಿನ್ನ ಜೀವಮಾನವನ್ನು ಕಳೆದಿರುವೆ. ಸರಿ, ತಂತ್ರಮಂತ್ರಗಳನ್ನು ಮಾಡಲು ಪ್ರಾರಂಭಿಸು. ಒಂದುವೇಳೆ ಅವು ನಿನಗೆ ಸಹಾಯ ಮಾಡಬಹುದು. ಒಂದುವೇಳೆ ಕೆಲವರನ್ನು ನೀನು ಭಯಪಡಿಸಬಹುದು.
ಸುಳ್ಳುಪ್ರವಾದಿಗಳು ಸುಳ್ಳನ್ನೇ ಹೇಳುತ್ತಾರೆ. ಅವರು ಹೇಳಿದ್ದೆಲ್ಲವೂ ಸುಳ್ಳು ಎಂದು ಯೆಹೋವನು ತೋರಿಸಿಕೊಡುತ್ತಾನೆ. ಮಂತ್ರಗಾರರನ್ನು ದೇವರು ಮೂರ್ಖರನ್ನಾಗಿ ಮಾಡುತ್ತಾನೆ. ಆತನು ಜ್ಞಾನಿಗಳನ್ನು ಗಲಿಬಿಲಿಗೊಳಿಸುತ್ತಾನೆ. ಅವರು ತಮಗೆ ಎಲ್ಲವೂ ಗೊತ್ತಿದೆ ಎಂದು ತಿಳಿದುಕೊಳ್ಳುತ್ತಾರೆ. ಆದರೆ ದೇವರು ಅವರನ್ನು ಮೂಢರನ್ನಾಗಿ ಮಾಡುತ್ತಾನೆ.
ಈಜಿಪ್ಟಿನ ವಿಷಯವಾಗಿ ದುಃಖಕರವಾದ ಸಂದೇಶ: ಯೆಹೋವನು ವೇಗವಾಗಿ ಬರುವ ಮೋಡದೊಂದಿಗೆ ಬರುತ್ತಿದ್ದಾನೆ. ಆತನು ಈಜಿಪ್ಟನ್ನು ಪ್ರವೇಶಿಸುವಾಗ ಈಜಿಪ್ಟಿನ ಸುಳ್ಳುದೇವರುಗಳೆಲ್ಲಾ ಹೆದರಿ ನಡುಗುವವು. ಈಜಿಪ್ಟು ಧೈರ್ಯಶಾಲಿ ದೇಶವಾಗಿದ್ದರೂ, ಅದರ ಧೈರ್ಯ ಮೇಣದಂತೆ ಕರಗಿಹೋಗುವದು.
ಅರಸನ ಪರಿವಾರದವರು ಮತ್ತು ದೀಬೋನಿನ ಜನರು ಪೂಜಾಸ್ಥಳಕ್ಕೆ ದುಃಖಿಸಲು ಹೋಗುತ್ತಿದ್ದಾರೆ. ಮೋವಾಬಿನ ಜನರು ನೆಬೋ ಮತ್ತು ಮೇದೆಬದವರಿಗಾಗಿ ರೋಧಿಸುತ್ತಾರೆ. ಜನರು ತಮ್ಮ ಗಡ್ಡಗಳನ್ನೂ ತಲೆಗಳನ್ನೂ ಬೋಳಿಸಿ ತಮ್ಮ ದುಃಖವನ್ನು ಪ್ರದರ್ಶಿಸುತ್ತಾರೆ.
ಅಹೀತೋಫೆಲನು ತನ್ನ ಸಲಹೆಯನ್ನು ಇಸ್ರೇಲರು ಸ್ವೀಕರಿಸಲಿಲ್ಲವೆಂಬುದನ್ನು ತಿಳಿದು ತನ್ನ ಹೇಸರಕತ್ತೆಯ ಮೇಲೆ ತಡಿಯನ್ನು ಹಾಕಿ ತನ್ನ ಸ್ವಂತ ಊರಿನಲ್ಲಿದ್ದ ಮನೆಗೆ ಹೋದನು. ಅವನು ತನ್ನ ಕುಟುಂಬಕ್ಕೆ ಯೋಜನೆಗಳನ್ನು ಮಾಡಿದನು. ನಂತರ ಅವನೇ ನೇಣು ಹಾಕಿಕೊಂಡು ಸತ್ತನು. ಅಹೀತೋಫೆಲನನ್ನು ಜನರು ಅವನ ತಂದೆಯ ಸಮಾಧಿಯ ಬಳಿ ಸಮಾಧಿ ಮಾಡಿದರು.
ಅಬ್ಷಾಲೋಮನು ಮತ್ತು ಇಸ್ರೇಲರೆಲ್ಲ, “ಅರ್ಕೀಯನಾದ ಹೂಷೈಯನ ಸಲಹೆಯು ಅಹೀತೋಫೆಲನ ಸಲಹೆಗಿಂತ ಉತ್ತಮವಾಗಿದೆ” ಎಂದು ಹೇಳಿದರು. ಇದು ಯೆಹೋವನ ಯೋಜನೆಯಾಗಿದ್ದ ಕಾರಣ ಅವರು ಹಾಗೆ ಹೇಳಿದರು. ಅಹೀತೋಫೆಲನ ಒಳ್ಳೆಯ ಸಲಹೆಯನ್ನು ನಾಶಗೊಳಿಸಲು ಯೆಹೋವನು ಈ ಯೋಜನೆಯನ್ನು ಮಾಡಿದ್ದನು. ಹೀಗೆ ಯೆಹೋವನು ಅಬ್ಷಾಲೋಮನನ್ನು ದಂಡಿಸಲಿದ್ದನು.
ಒಬ್ಬನು ದಾವೀದನಿಗೆ, “ಅಬ್ಷಾಲೋಮನ ಜೊತೆಯಲ್ಲಿ ಉಪಾಯಗಳನ್ನು ಮಾಡಿದ ಜನರಲ್ಲಿ ಅಹೀತೋಫೆಲನೂ ಒಬ್ಬನು” ಎಂದು ಹೇಳಿದನು. ಆಗ ದಾವೀದನು, “ಯೆಹೋವನೇ, ಅಹೀತೋಫೆಲನ ಸಲಹೆಗಳನ್ನು ವಿಫಲಗೊಳಿಸು” ಎಂದು ಪ್ರಾರ್ಥಿಸಿದನು.
ಅರಸನು ಮಹತ್ವಪೂರ್ಣವಾದ ವಿಷಯಗಳ ಬಗ್ಗೆ ಅವರನ್ನು ಕೇಳಿದಾಗಲೆಲ್ಲ ಅವರು ಹೆಚ್ಚಿನ ಪ್ರಜ್ಞೆಯನ್ನು, ಬುದ್ಧಿಯನ್ನು ತೋರಿದರು. ಅವರು ಇಡೀ ದೇಶದ ಎಲ್ಲ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿದ್ದಾರೆಂಬುದನ್ನು ಅರಸನು ಕಂಡುಕೊಂಡನು.
ಒಂದು ದಿನ, ಅಹಜ್ಯನು ಸಮಾರ್ಯದ ತನ್ನ ಮನೆಯ ಮಾಳಿಗೆಯ ಮೇಲಿದ್ದನು. ಅಹಜ್ಯನು ಮನೆಯ ಮೇಲಿನ ಮರದ ಕಂಬಗಳ ಮೂಲಕ ಕೆಳಕ್ಕೆ ಬಿದ್ದನು. ಅವನಿಗೆ ಬಹಳ ಗಾಯಗಳಾದವು. ಅಹಜ್ಯನು ಸಂದೇಶಕರನ್ನು ಕರೆದು ಅವರಿಗೆ, “ಎಕ್ರೋನಿನ ದೇವರಾದ ಬಾಳ್ಜೆಬೂಬನ ಅರ್ಚಕರ ಬಳಿಗೆ ಹೋಗಿ, ನನ್ನ ಗಾಯಗಳು ಗುಣವಾಗುತ್ತವೆಯೇ ಎಂಬುದನ್ನು ಅವರಿಂದ ತಿಳಿದುಕೊಳ್ಳಿ” ಎಂದು ಹೇಳಿದನು.