Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:6 - ಪರಿಶುದ್ದ ಬೈಬಲ್‌

6 ಎಲ್ಲಾ ನದಿಗಳಿಂದ ದುರ್ವಾಸನೆ ಹೊರಡುವದು. ಈಜಿಪ್ಟಿನ ಕಾಲಿವೆಗಳು ಬತ್ತಿಹೋಗುತ್ತವೆ; ಜಲಸಸ್ಯಗಳೆಲ್ಲ ಒಣಗಿಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕಾಲುವೆಗಳು ನಾರುವವು. ಐಗುಪ್ತದ ಹೊಳೆಗಳು ಇಳಿದು, ನೀರಿಲ್ಲದೆ ಒಣಗಿ ಹೋಗುವವು. ಆಪು ಮತ್ತು ಜಂಬುಹುಲ್ಲುಗಳು ಬಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಕಾಲುವೆಗಳು ನಾರುವುವು. ಈಜಿಪ್ಟಿನ ಉಪನದಿಗಳು ಇಳಿದು ಇಂಗಿಹೋಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಪ್ರವಾಹವು ಇಂಗಿ ಒಣಗುವದು, ಕಾಲುವೆಗಳು ನಾರುವವು, ಐಗುಪ್ತದ ಹೊಳೆಗಳು ಇಳಿದು ನೀರಿಲ್ಲದೆ ಹೋಗುವವು, ಆಪೂ ಜಂಬುಹುಲ್ಲೂ ಬಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಕಾಲುವೆಗಳು ನಾರುವುವು. ಈಜಿಪ್ಟನ ಉಪನದಿಗಳು ದೂರಕ್ಕೆ ಇಳಿದು ನೀರಿಲ್ಲದೆ ಹೋಗುವುವು. ಜಂಬು ಹುಲ್ಲು ಬಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:6
10 ತಿಳಿವುಗಳ ಹೋಲಿಕೆ  

ನಾನು ಬಾವಿಗಳನ್ನು ತೋಡಿ ಹೊಸಹೊಸ ಸ್ಥಳದ ನೀರು ಕುಡಿದಿರುವೆನು. ಈಜಿಪ್ಟಿನ ನದಿಗಳನ್ನು ಬತ್ತಿಸಿ ದೇಶದಲ್ಲೆಲ್ಲಾ ಸಂಚರಿಸಿದೆನು” ಎಂದು ನೀನು ಹೇಳಿದೆ.’


“ಜಂಬುಗಿಡವು ಜವುಗುಮಣ್ಣಿಲ್ಲದೆ ಎತ್ತರವಾಗಿ ಬೆಳೆಯಬಲ್ಲದೇ? ಜವುಗುಸಸ್ಯವು ನೀರಿಲ್ಲದೆ ಬೆಳೆಯಬಲ್ಲದೇ?


ನಾನು ಬಾವಿಗಳನ್ನು ತೋಡಿ ಹೊಸ ಸ್ಥಳಗಳಲ್ಲಿ ನೀರು ಕುಡಿದೆನು. ನಾನು ಈಜಿಪ್ಟಿನ ನದಿಗಳನ್ನು ಬತ್ತಿಸಿದ್ದೇನೆ; ಆ ದೇಶದ ಮೇಲೆಲ್ಲಾ ನಡೆದಾಡಿದ್ದೇನೆ’ ಎಂದು ನೀನು ಹೇಳಿದೆ.


ನದಿಯಲ್ಲಿರುವ ಮೀನುಗಳು ಸಾಯುವವು; ನದಿಯು ಹೊಲಸಾಗುವುದು; ಈಜಿಪ್ಟಿನವರು ನದಿಯ ನೀರನ್ನು ಕುಡಿಯಲಾಗುವುದಿಲ್ಲ’ ಎಂದು ಹೇಳಬೇಕು” ಅಂದನು.


ಇನ್ನೂ ಹೆಚ್ಚು ಕಾಲ ಬಚ್ಚಿಡಲಾಗದೆ ಆಕೆ ಒಂದು ಬುಟ್ಟಿಯನ್ನು ಮಾಡಿ ಅದಕ್ಕೆ ರಾಳವನ್ನು ಹಚ್ಚಿದಳು. ಆಕೆ ಮಗುವನ್ನು ಬುಟ್ಟಿಯಲ್ಲಿಟ್ಟು ಆ ಬುಟ್ಟಿಯನ್ನು ನೀರಿನಲ್ಲಿ ಎತ್ತರವಾಗಿ ಬೆಳೆದ ಹುಲ್ಲಿನಲ್ಲಿ ಇಟ್ಟಳು.


ಆ ದೇಶದವರು ಬೆಂಡಿನ ದೋಣಿಗಳಲ್ಲಿ ಜನರನ್ನು ಸಮುದ್ರದಾಚೆ ಕಳುಹಿಸುವರು. ವೇಗವುಳ್ಳ ದೂತರೇ, ಉನ್ನತವಾಗಿಯೂ ಬಲಶಾಲಿಗಳಾಗಿಯೂ ಇರುವ ಜನರ ಬಳಿಗೆ ಹೋಗಿರಿ. ಎಲ್ಲಾ ದೇಶಗಳವರು ಉನ್ನತರಾದ ಬಲಶಾಲಿಗಳಾದ ಜನರಿಗೆ ಭಯಪಡುತ್ತಾರೆ. ಅವರು ಬಲಾಢ್ಯ ಜನಾಂಗ. ಅವರ ಜನಾಂಗವು ಬೇರೆ ಜನಾಂಗಗಳನ್ನು ಸೋಲಿಸಿಬಿಡುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿರುತ್ತದೆ. ಆ ಜನರಿಗೆ ಕೇಡು ಸಂಭವಿಸಲಿದೆ ಎಂಬ ಎಚ್ಚರಿಕೆಯನ್ನು ಕೊಡು. ಪ್ರಪಂಚದ ಎಲ್ಲಾ ಜನರು ಆ ದೇಶಕ್ಕೆ ಸಂಭವಿಸುವದನ್ನು ನೋಡುವರು.


ಆದರೆ ನಿಮ್ರೀಮ್ ಹಳ್ಳವು ಒಣಗಿಹೋಗಿ ಮರುಭೂಮಿಗೆ ಸಮಾನವಾಗಿದೆ. ಹಸಿಹುಲ್ಲುಗಳೆಲ್ಲಾ ಬಾಡಿವೆ; ಸಸಿಗಳೆಲ್ಲಾ ಸತ್ತಿವೆ; ಎಲ್ಲಿಯೂ ಹಸಿರು ಕಾಣಿಸುವದಿಲ್ಲ.


ಆಗ ಕೊಬ್ಬಿದ ಮತ್ತು ಲಕ್ಷಣವಾಗಿದ್ದ ಏಳು ಹಸುಗಳು ನದಿಯೊಳಗಿಂದ ಬಂದು ಹುಲ್ಲನ್ನು ಮೇಯುತ್ತಿದ್ದವು.


ನಿನೆವೆಯೇ, ನೀನು ನೈಲ್ ನದಿಯ ದಡದಲ್ಲಿರುವ ತೆಬೆಸ್ ಗಿಂತಲೂ ಉತ್ತಮಳೋ? ಇಲ್ಲ. ತೆಬೆಸಿನ ಸುತ್ತಲೂ ನೀರು ಇತ್ತು. ಆ ನೀರು ಆಕೆಯನ್ನು ತನ್ನ ವೈರಿಗಳಿಂದ ಕಾಪಾಡಲು ಶಕ್ತವಾಯಿತು. ಆ ನೀರನ್ನು ಆಕೆಯು ಗೋಡೆಯಂತೆ ಉಪಯೋಗಿಸಿದಳು.


ನೀರು ಬತ್ತಿಹೋದರೆ ಅವು ಸಹ ಒಣಗಿಹೋಗುತ್ತವೆ. ಅವು ತುಂಬ ಎಳೆಯದಾಗಿರುವುದರಿಂದ ಕತ್ತರಿಸಿ ಉಪಯೋಗಿಸಲಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು