Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 2:1 - ಪರಿಶುದ್ದ ಬೈಬಲ್‌

1 ಆಮೋಚನ ಮಗನಾದ ಯೆಶಾಯನು ಯೆಹೂದ ಮತ್ತು ಜೆರುಸಲೇಮಿನ ಬಗ್ಗೆ ನೋಡಿದ ದರ್ಶನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಕಂಡು ಬಂದ ದೈವೋಕ್ತಿ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜುದೇಯ ಮತ್ತು ಜೆರುಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನು ಕಂಡ ದರ್ಶನದಲ್ಲಿ ಕೇಳಿಬಂದ ದೈವೋಕ್ತಿ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೂದದ ಮತ್ತು ಯೆರೂಸಲೇವಿುನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಕಂಡು ಬಂದ ದೈವೋಕ್ತಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಮೋಚನ ಮಗ ಯೆಶಾಯನಿಗೆ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಕಂಡು ಬಂದ ದೈವೋಕ್ತಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 2:1
8 ತಿಳಿವುಗಳ ಹೋಲಿಕೆ  

ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ. ಯೆಹೂದ ಮತ್ತು ಜೆರುಸಲೇಮಿನಲ್ಲಿ ನಡೆಯಲಿದ್ದ ಘಟನೆಗಳ ಬಗ್ಗೆ ದೇವರು ಯೆಶಾಯನಿಗೆ ಈ ದರ್ಶನ ನೀಡಿದನು; ಯೆಹೂದದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ ಮತ್ತು ಹಿಜ್ಕೀಯರ ಕಾಲದಲ್ಲಿ ಯೆಶಾಯನಿಗೆ ಈ ದರ್ಶನವಾಯಿತು.


ಆಮೋಚನ ಮಗನಾದ ಯೆಶಾಯನಿಗೆ ಬಾಬಿಲೋನಿನ ಬಗ್ಗೆ ದೊರೆತ ದೈವಸಂದೇಶ:


ಪ್ರವಾದಿಯಾದ ಹಬಕ್ಕೂಕನಿಗೆ ಕೊಡಲ್ಪಟ್ಟ ಸಂದೇಶ.


ಯೆಹೋವನ ಸ್ವರವು ಪಟ್ಟಣದಲ್ಲಿ ಗಟ್ಟಿಯಾಗಿ ಕೇಳಿಸುತ್ತದೆ. “ಬುದ್ಧಿವಂತನು ಯೆಹೋವನ ನಾಮವನ್ನು ಗೌರವಿಸುವನು. ಆದ್ದರಿಂದ ಶಿಕ್ಷೆಯ ಬೆತ್ತದ ಕಡೆಗೆ ಲಕ್ಷ್ಯವಿಡು. ಆ ಬೆತ್ತವನ್ನು ಹಿಡುಕೊಂಡವನನ್ನೂ ಗೌರವಿಸು.


ಯೆಹೋವನ ಮಾತುಗಳು ಮೀಕನಿಗೆ ಬಂದವು. ಅರಸರಾದ ಯೋಥಾಮ, ಅಹಾಜ ಮತ್ತು ಹಿಜ್ಕೀಯರ ಆಳ್ವಿಕೆಯ ಸಮಯದಲ್ಲಿ ಇದು ನಡೆಯಿತು. ಇವರು ಯೆಹೂದ ರಾಜ್ಯದ ಅರಸರು. ಮೀಕನು ಮೋರೆಷೆತ್‌ನವನು. ಇವನು ಸಮಾರ್ಯ ಮತ್ತು ಜೆರುಸಲೇಮಿನ ವಿಷಯವಾಗಿ ದೇವದರ್ಶನವನ್ನು ಹೊಂದಿದನು.


ಇದು ಆಮೋಸನ ಸಂದೇಶ. ಇವನು ತೆಕೋವ ಎಂಬ ಪಟ್ಟಣದ ಕುರುಬರಲ್ಲೊಬ್ಬನು. ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಸಮಯದಲ್ಲಿ ಮತ್ತು ಅದೇ ಸಮಯದಲ್ಲಿ ಯೋವಾಷನ ಮಗನಾದ ಯಾರೊಬ್ಬಾಮನು ಇಸ್ರೇಲನ್ನು ಆಳುತ್ತಿರುವಾಗ ಆಮೋಸನಿಗೆ ದೈವದರ್ಶನಗಳುಂಟಾದವು. ಭೂಕಂಪವಾಗುವುದಕ್ಕಿಂತ ಎರಡು ವರ್ಷಗಳಿಗೆ ಮೊದಲು ಈ ದರ್ಶನಗಳಾದವು.


ಹಿಜ್ಕೀಯನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ ಮತ್ತು ಹಿರಿಯರಾದ ಯಾಜಕರನ್ನು ಆಮೋಚನ ಮಗನೂ ಪ್ರವಾದಿಯೂ ಆಗಿದ್ದ ಯೆಶಾಯನ ಬಳಿಗೆ ಕಳುಹಿಸಿದನು. ಅವರು ತಮ್ಮ ದುಃಖವನ್ನೂ ಕಳವಳವನ್ನೂ ತೋರ್ಪಡಿಸುವಂತೆ ಗೋಣಿತಟ್ಟನ್ನು ಧರಿಸಿದ್ದರು.


ಅಂತ್ಯದ ದಿವಸಗಳಲ್ಲಿ ಯೆಹೋವನ ಆಲಯದ ಪರ್ವತವು ಎಲ್ಲಾ ಪರ್ವತಗಳಿಗಿಂತಲೂ ಅತ್ಯುನ್ನತವಾಗಿರುವುದು. ಅದು ಬೆಟ್ಟಗಳಿಗಿಂತಲೂ ಉನ್ನತವಾಗಿರುವದು. ಅಲ್ಲಿಗೆ ಜನರು ಗುಂಪುಗುಂಪಾಗಿ ಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು