ಯೆಶಾಯ 2:11 - ಪರಿಶುದ್ದ ಬೈಬಲ್11 ಗರ್ವಿಷ್ಠರ ಗರ್ವವು ಕುಗ್ಗಿಸಲ್ಪಡುವುದು; ಅಹಂಕಾರಿಗಳ ಅಹಂಕಾರವು ತಗ್ಗಿಸಲ್ಪಡುವುದು. ಆ ಸಮಯದಲ್ಲಿ ಯೆಹೋವನೊಬ್ಬನೇ ಉನ್ನತೋನ್ನತವಾಗಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಜನಸಾಮಾನ್ಯರ ಅಟ್ಟಹಾಸವನ್ನು ಅಡಗಿಸಲಾಗುವುದು, ಪ್ರಮುಖರ ಗರ್ವ ಕಮರಿಹೋಗುವುದು, ಸ್ವಾಮಿ ಮಾತ್ರ ಅಂದು ಉನ್ನತೋನ್ನತವಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸಾಮಾನ್ಯರ ಗರ್ವದೃಷ್ಟಿಯು ತಗ್ಗಿಹೋಗುವದು, ಮುಖಂಡರ ಅಹಂಕಾರವು ಕುಗ್ಗಿಹೋಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಮನುಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವುದು. ಮನುಷ್ಯರ ಗರ್ವವು ತಗ್ಗುವುದು. ಆಗ ಯೆಹೋವ ದೇವರೊಬ್ಬರೇ ಆ ದಿನದಲ್ಲಿ ಉನ್ನತವಾಗಿರುವರು. ಅಧ್ಯಾಯವನ್ನು ನೋಡಿ |
ದೇವರು ಹೇಳಿದ್ದೇನೆಂದರೆ, “ಆ ಸಮಯದಲ್ಲಿ ಗೋಗನನ್ನು ಹೂಣಿಡಲು ನಾನು ಇಸ್ರೇಲಿನಲ್ಲಿ ಸ್ಥಳವನ್ನು ಆರಿಸುತ್ತೇನೆ. ಇವನನ್ನು ಮೃತ್ಯುಸಮುದ್ರದ ಪೂರ್ವದಲ್ಲಿರುವ ‘ಪ್ರಯಾಣಿಕರ ಕಣಿವೆ’ ಯಲ್ಲಿ ಸಮಾಧಿ ಮಾಡಲಾಗುವುದು. ಅದು ಪ್ರವಾಸಿಗಳಿಗೆ ಅಡ್ಡಿಯಾಗುವದು. ಯಾಕೆಂದರೆ ಗೋಗನೂ ಅವನ ಸೈನ್ಯವೂ ಅಲ್ಲಿ ಹೂಣಿಡಲ್ಪಡುವವು. ಆ ಸ್ಥಳ ‘ಗೋಗ್ ಸೈನ್ಯದ ತಗ್ಗು’ ಎಂಬ ಹೊಸ ಹೆಸರಿನಿಂದ ಕರೆಯಲ್ಪಡುವದು.
ಯಾವನಾದರೂ ಜಂಬಕೊಚ್ಚಿಕೊಳ್ಳಬೇಕಾದರೆ, ಅವನು ನನ್ನನ್ನು ಅರಿತಿರುವುದಾಗಿಯೂ ನನ್ನನ್ನು ತಿಳಿದುಕೊಂಡಿರುವುದಾಗಿಯೂ ಜಂಬಪಡಲಿ. ನಾನೇ ಯೆಹೋವನೆಂದು ತಿಳಿದುಕೊಂಡಿರುವುದಕ್ಕಾಗಿ ಅವನು ಜಂಬಪಡಲಿ. ನಾನು ದಯಾವಂತನೂ ನ್ಯಾಯವಂತನೂ ಆಗಿರುವೆ, ನಾನು ಭೂಲೋಕದಲ್ಲಿ ಒಳ್ಳೆಯದನ್ನು ಮಾಡುತ್ತೇನೆ ಎಂದು ತಿಳಿದುಕೊಂಡಿರುವವನು ಹೆಮ್ಮೆಪಡಲಿ. ಆಗ ನನಗೆ ಸಂತೋಷವಾಗುವುದು.” ಇದು ಯೆಹೋವನ ನುಡಿ.
ಆ ಸಮಯದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಗಂಡಸನ್ನು ಹಿಡಿದುಕೊಂಡು, “ನಮ್ಮ ಆಹಾರವನ್ನು ನಾವೇ ಸಂಪಾದಿಸಿಕೊಳ್ಳುತ್ತೇವೆ. ನಮ್ಮ ಬಟ್ಟೆಬರೆಗಳನ್ನು ನಾವೇ ಮಾಡಿಕೊಳ್ಳುತ್ತೇವೆ, ನಮ್ಮ ಕೆಲಸಗಳನ್ನೆಲ್ಲಾ ನಾವೇ ಮಾಡಿಕೊಳ್ಳುತ್ತೇವೆ. ನೀನು ನಮ್ಮನ್ನು ಮದುವೆಯಾಗು, ನಿನ್ನ ಹೆಸರನ್ನು ನಾವು ಇಟ್ಟುಕೊಳ್ಳುವಂತೆ ಮಾಡು. ದಯಮಾಡಿ ನಮ್ಮ ನಾಚಿಕೆಯನ್ನು ನಮ್ಮಿಂದ ತೊಲಗಿಸು” ಎಂದು ಹೇಳುವರು.