ಯೆಶಾಯ 2:13 - ಪರಿಶುದ್ದ ಬೈಬಲ್13 ಆ ಅಹಂಕಾರದ ಜನರು ಲೆಬನೋನಿನ ದೇವದಾರು ಮರಗಳಂತಿರುವರು. ಬಾಷಾನಿನ ಮಹಾದೇವದಾರು ಮರಗಳಂತಿರುವರು. ಆದರೆ ಯೆಹೋವನು ಅವರನ್ನು ಶಿಕ್ಷಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಅಲ್ಲೋನ ಮರಗಳ ಮೇಲೆಯೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲ ದೇವದಾರು ವೃಕ್ಷಗಳಿಗೆ, ಬಾಷಾನಿನ ಎಲ್ಲಾ ಅಲ್ಲೋನ್ ಮರಗಳಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಎತ್ತರವಾಗಿ ಬೆಳೆದಿರುವ ಲೆಬನೋನಿನ ಸರ್ವದೇವದಾರು ವೃಕ್ಷಗಳು, ಬಾಷಾನಿನ ಎಲ್ಲಾ ಅಲ್ಲೋನ್ ಮರಗಳು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳೂ ಹಾಗೂ ಬಾಷಾನಿನ ಎಲ್ಲಾ ಏಲಾ ಮರಗಳ ಮೇಲೆಯೂ ಅಧ್ಯಾಯವನ್ನು ನೋಡಿ |
ನನ್ನ ಒಡೆಯನಾದ ಯೆಹೋವನನ್ನು ತುಚ್ಛೀಕರಿಸಲಿಕ್ಕೆ ನೀನು ನಿನ್ನ ಅಧಿಕಾರಿಯನ್ನು ಕಳುಹಿಸಿದೆ. “ನನ್ನಲ್ಲಿ ಬಲ ಸಾಮರ್ಥ್ಯಗಳಿವೆ; ನನ್ನಲ್ಲಿ ಅನೇಕಾನೇಕ ರಥಗಳಿವೆ. ನನ್ನ ಬಲದಿಂದ ನಾನು ಲೆಬನೋನನ್ನು ಸೋಲಿಸಿದೆ. ಲೆಬನೋನಿನ ಉನ್ನತ ಶಿಖರಗಳನ್ನು ನಾನು ಏರಿದೆನು. ಲೆಬನೋನಿನ ಎತ್ತರವಾದ ದೇವದಾರು ಮರಗಳನ್ನೂ ಶ್ರೇಷ್ಠವಾದ ತುರಾಯಿ ಮರಗಳನ್ನೂ (ಸೈನ್ಯ) ನಾನು ಕಡಿದುಹಾಕಿದೆನು. ನಾನು ಅತ್ಯುನ್ನತ ಶಿಖರಕ್ಕೂ ದಟ್ಟವಾದ ಕಾಡಿನೊಳಗೂ ಹೋಗಿದ್ದೇನೆ.