ಯೆಶಾಯ 2:16 - ಪರಿಶುದ್ದ ಬೈಬಲ್16 ಆ ಅಹಂಕಾರಿಗಳು ತಾರ್ಷೀಷಿನ ದೊಡ್ಡ ಹಡಗುಗಳಂತಿದ್ದಾರೆ. ಈ ಹಡಗುಗಳಲ್ಲಿ ಶ್ರೇಷ್ಠವಾದ ವಸ್ತುಗಳು ತುಂಬಿವೆ. ಆದರೆ ದೇವರು ಆ ಅಹಂಕಾರಿಗಳನ್ನು ಶಿಕ್ಷಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಎಲ್ಲಾ ದೊಡ್ಡ ದೊಡ್ಡ ತಾರ್ಷೀಷ್ ನ ಹಡಗುಗಳ ಮೇಲೆಯೂ, ಅಂತೂ ನೋಡತಕ್ಕ ಮನೋಹರವಾದ ಪ್ರತಿಯೊಂದು ವಸ್ತುವಿನ ಮೇಲೆಯೂ ಆ ದಿನವೂ ತಪ್ಪದೇ ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಎಲ್ಲಾ ದೊಡ್ಡ ದೊಡ್ಡ ಹಡಗುಗಳಿಗೆ, ಎಲ್ಲಾ ಸುಂದರವಾದ ನೌಕೆಗಳಿಗೆ, ಆ ದಿನವು ತಪ್ಪದೆ ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಎಲ್ಲಾ ದೊಡ್ಡ ದೊಡ್ಡ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಪ್ರತಿಯೊಂದು ವಸ್ತುವಿಗೂ ಆ ದಿನವು ತಪ್ಪದೆ ಬರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಎಲ್ಲಾ ತಾರ್ಷೀಷಿನ ಹಡಗುಗಳು ನೋಡತಕ್ಕ ಮನೋಹರವಾದ ಪ್ರತಿಯೊಂದು ನೌಕೆಗಳ ಮೇಲೆಯೂ ಆ ದಿನವು ತಪ್ಪದೇ ಬರುವುದು. ಅಧ್ಯಾಯವನ್ನು ನೋಡಿ |
ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.