ಯೆಶಾಯ 2:21 - ಪರಿಶುದ್ದ ಬೈಬಲ್21 ಜನರು ಬಿಸಾಡಿ, ಸಂದುಗೊಂದುಗಳಲ್ಲಿ ಅಡಗಿಕೊಳ್ಳುವರು. ಯೆಹೋವನಿಗೂ ಆತನ ಮಹಾಶಕ್ತಿಗೂ ಹೆದರಿ ಅವರು ಹಾಗೆ ಮಾಡುವರು. ಯೆಹೋವನು ಎದ್ದು ಭೂಮಿಯನ್ನು ಅಲುಗಾಡಿಸುವ ಸಮಯದಲ್ಲಿ ಇವೆಲ್ಲಾ ಸಂಭವಿಸುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, ಆತನ ಭಯಂಕರಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಸಂದುಗೊಂದುಗಳಲ್ಲಿಯೂ, ಚೂಪಾದ ಶಿಖರಗಳ ಕಡಿದಾದ ಸ್ಥಳಗಳಿಗೂ ನುಗ್ಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ನುಗ್ಗುವರು ಜನರು ಕಲ್ಲುಬಂಡೆಗಳ ಸಂದುಗೊಂದುಗಳಲ್ಲಿ, ಶಿಲೆಗಳ ಸೀಳುಪಾಳುಗಳಲ್ಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯೆಹೋವನು ಭೂಮಂಡಲವನ್ನು ಕಂಪನ ಮಾಡುವದಕ್ಕೆ ಏಳುವಾಗ ಆತನ ಭಯಂಕರತನಕ್ಕೂ ಅತ್ಯುನ್ನತಮಹಿಮೆಗೂ ಹೆದರಿ ಬಂಡೆಗಳ ಸಂದುಗೊಂದುಗಳಲ್ಲಿಯೂ ಚೂಪಾದ ಶಿಲೆಗಳ ಸೀಳುಗಳಲ್ಲಿಯೂ ನುಗ್ಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಯೆಹೋವ ದೇವರು ಭೂಮಿಯನ್ನು ನಡುಗಿಸಲು ಎದ್ದಾಗ, ಯೆಹೋವ ದೇವರ ಭಯಕ್ಕೂ, ಅವರ ಮಹಿಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ, ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಜನರು ನುಗ್ಗುವರು. ಅಧ್ಯಾಯವನ್ನು ನೋಡಿ |