4 ಈಗ ಎಲ್ಲಾ ದೇಶಗಳಿಗೆ ದೇವರೇ ನ್ಯಾಯಾಧೀಶನಾಗಿರುವನು. ಅನೇಕ ಜನರ ತರ್ಕಗಳನ್ನು ದೇವರು ಕೊನೆಗಾಣಿಸುವನು. ಆ ಜನರು ಯುದ್ಧಕ್ಕಾಗಿ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು; ತಮ್ಮ ಖಡ್ಗಗಳಿಂದ ಅವರು ನೇಗಿಲುಗಳನ್ನು ತಯಾರಿಸುವರು; ತಮ್ಮ ಬರ್ಜಿಗಳಿಂದ ಸಸಿಗಳನ್ನು ಕೊಯ್ಯುವ ಕುಡುಗೋಲುಗಳನ್ನು ಮಾಡುವರು. ಪರಸ್ಪರ ಹೊಡೆದಾಡಿಕೊಳ್ಳುವದನ್ನು ಜನಾಂಗಗಳು ನಿಲ್ಲಿಸುವರು. ಇನ್ನೆಂದಿಗೂ ಜನಾಂಗಗಳು ಯುದ್ಧಾಭ್ಯಾಸ ತರಬೇತಿಯನ್ನು ಹೊಂದುವುದಿಲ್ಲ.
4 ಆತನು ದೇಶದೇಶಗಳ ವ್ಯಾಜ್ಯವನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು; ಅವರೋ ತಮ್ಮ ಆಯುಧಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನು ನೇಗಿಲ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರುದ್ಧವಾಗಿ ಜನಾಂಗವು ಕತ್ತಿಯನ್ನೆತ್ತದು. ಇನ್ನು ಮೇಲೆ ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.
4 ಆತನು ದೇಶದೇಶಗಳ ವ್ಯಾಜ್ಯಗಳನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು; ಅವರೋ ತಮ್ಮ [ಆಯುಧಗಳನ್ನು] ಕುಲುಮೆಗೆ ಹಾಕಿ ಕತ್ತಿಗಳನ್ನು ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು; ಜನಾಂಗವು ಜನಾಂಗಕ್ಕೆ ವಿರುದ್ಧವಾಗಿ ಕತ್ತಿಯನ್ನೆತ್ತದು, ಇನ್ನು ಯುದ್ಧಾಭ್ಯಾಸವು ನಡೆಯುವದೇ ಇಲ್ಲ.
4 ಅವರು ಅನೇಕ ಜನಾಂಗಗಳ ಮಧ್ಯದಲ್ಲಿ ನ್ಯಾಯತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವರು. ಅವರು ತಮ್ಮ ಖಡ್ಗಗಳನ್ನು ನೇಗಿಲಿನ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರೋಧವಾಗಿ ಜನಾಂಗವು ಖಡ್ಗವನ್ನು ಪ್ರಯೋಗಿಸುವುದಿಲ್ಲ, ಇನ್ನು ಮೇಲೆ ಯುದ್ಧಾಭ್ಯಾಸದ ಅಗತ್ಯ ಇರುವುದೇ ಇಲ್ಲ.
ಆಗ ಪ್ರಪಂಚದ ಎಲ್ಲಾ ಜನಾಂಗಗಳಿಗೆ ಯೆಹೋವನೇ ನ್ಯಾಯಾಧೀಶನು. ದೂರದೇಶದಲ್ಲಿರುವ ಅನೇಕ ಜನರ ಜಗಳಗಳನ್ನು ಆತನು ನಿಲ್ಲಿಸುವನು. ಆ ಜನರು ಯುದ್ಧದ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು. ತಮ್ಮ ಖಡ್ಗಗಳಿಂದ ನೇಗಿಲ ಗುಳಗಳನ್ನು ತಯಾರಿಸುವರು. ಭರ್ಜಿಗಳಿಂದ ಕುಡುಗೋಲುಗಳನ್ನು ತಯಾರಿಸುವರು. ಜನರೊಳಗೆ ಪರಸ್ಪರ ಯುದ್ಧ ಮಾಡುವದನ್ನು ನಿಲ್ಲಿಸುವರು. ಯುದ್ಧಕ್ಕೆ ತರಬೇತಿ ಎಂದಿಗೂ ಮಾಡರು.
“ಆ ಸಮಯದಲ್ಲಿ ನಾನು ಇಸ್ರೇಲರಿಗೋಸ್ಕರವಾಗಿ ಅಡವಿಯ ಮೃಗಗಳೊಂದಿಗೂ ಆಕಾಶದ ಪಕ್ಷಿಗಳೊಂದಿಗೂ ನೆಲದ ಮೇಲೆ ಹರಿದಾಡುವ ಜಂತುಗಳೊಂದಿಗೂ ಒಡಂಬಡಿಕೆ ಮಾಡುವೆನು. ನಾನು ಯುದ್ಧದ ಆಯುಧ, ಬಿಲ್ಲು, ಖಡ್ಗಗಳನ್ನು ತುಂಡು ಮಾಡುವೆನು. ಆ ದೇಶದೊಳಗೆ ಯಾವ ಆಯುಧವೂ ಇರದು. ಆಗ ಇಸ್ರೇಲಿನ ಜನರು ನಿಶ್ಟಿಂತೆಯಿಂದ ಮಲಗುವರು.
ಅರಸನು ಹೀಗೆನ್ನುತ್ತಾನೆ: “ಎಫ್ರಾಯೀಮಿನಲ್ಲಿ ರಥಗಳನ್ನೂ ಜೆರುಸಲೇಮಿನಲ್ಲಿ ಅಶ್ವಾರೂಢರಾದ ಸೈನಿಕರನ್ನೂ ನಾಶಮಾಡಿದೆನು; ಯುದ್ಧದ ಬಿಲ್ಲುಗಳನ್ನು ತುಂಡು ಮಾಡಿದೆನು.” ಆ ಅರಸನು ಸಮಾಧಾನದ ವರ್ತಮಾನವನ್ನು ರಾಜ್ಯಗಳಿಗೆ ತರುವನು. ಸಮುದ್ರದಿಂದ ಸಮುದ್ರದ ತನಕ ಯುಫ್ರೇಟೀಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೆ ಆತನು ರಾಜ್ಯವನ್ನಾಳುವನು.
ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.
ಯೆಹೋವನು ತನ್ನ ಶತ್ರುಗಳನ್ನು ನಾಶಗೊಳಿಸುವನು. ಮಹೋನ್ನತನಾದ ದೇವರು ಪರಲೋಕದಲ್ಲಿ ಜನರಿಗೆ ವಿರುದ್ಧವಾಗಿ ಗುಡುಗುವನು. ಯೆಹೋವನು ಬಹುದೂರದ ದೇಶಗಳಿಗೂ ತೀರ್ಪನ್ನು ಕೊಡುವನು. ಆತನು ತನ್ನ ರಾಜನಿಗೆ ಶಕ್ತಿಯನ್ನು ಕೊಡುವನು. ತಾನು ಅಭಿಷೇಕಿಸಿದ ರಾಜನನ್ನು ಬಲಗೊಳಿಸುವನು.”
ನಂತರ ಪರಲೋಕವು ತೆರೆದಿರುವುದನ್ನು ನಾನು ನೋಡಿದೆನು. ನನ್ನ ಎದುರಿನಲ್ಲಿ ಒಂದು ಬಿಳಿ ಕುದುರೆಯಿತ್ತು. ಕುದುರೆಯ ಮೇಲೆ ಕುಳಿತಿದ್ದ ಸವಾರನ ಹೆಸರು ನಂಬಿಗಸ್ತ ಮತ್ತು ಸತ್ಯವಂತ. ಆತನು ತನ್ನ ತೀರ್ಪುಗಳಲ್ಲಿಯೂ ಯುದ್ಧಗಳಲ್ಲಿಯೂ ನ್ಯಾಯವಂತನಾಗಿದ್ದನು.
ಪ್ರಪಂಚದ ಜನರೆಲ್ಲರಿಗೂ ನ್ಯಾಯತೀರಿಸುವುದಕ್ಕಾಗಿ ದೇವರು ಒಂದು ದಿನವನ್ನು ಗೊತ್ತುಪಡಿಸಿದ್ದಾನೆ. ಅಂದು ನ್ಯಾಯತೀರಿಸುವುದಕ್ಕಾಗಿ ಆತನು ಒಬ್ಬ ವ್ಯಕ್ತಿಯನ್ನು ಬಹುಕಾಲದ ಹಿಂದೆಯೇ ಆರಿಸಿಕೊಂಡಿದ್ದಾನೆ. ಇದನ್ನು ಎಲ್ಲರಿಗೂ ಖಚಿತಪಡಿಸುವುದಕ್ಕಾಗಿ ಆ ವ್ಯಕ್ತಿಯನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾನೆ.”
ರಣರಂಗದಲ್ಲಿ ನಡೆಯುವ ಪ್ರತಿಯೊಂದು ಪಾದರಕ್ಷೆಯನ್ನೂ ನಾಶಮಾಡಲಾಗುವುದು; ರಕ್ತದ ಕಲೆಯಿರುವ ಪ್ರತಿಯೊಂದು ಸಮವಸ್ತ್ರವನ್ನೂ ನಾಶಮಾಡಲಾಗುವದು. ಅವುಗಳೆಲ್ಲವನ್ನು ಬೆಂಕಿಯಲ್ಲಿ ಹಾಕಲಾಗುವದು.
“ನನ್ನ ಸೇವಕನನ್ನು ನೋಡಿರಿ! ನಾನು ಆತನಿಗೆ ಬೆಂಬಲ ನೀಡುತ್ತೇನೆ. ನಾನು ಆರಿಸಿಕೊಂಡಿದ್ದು ಆತನನ್ನೇ. ನಾನು ಆತನನ್ನು ಮೆಚ್ಚಿಕೊಂಡಿದ್ದೇನೆ. ನನ್ನ ಆತ್ಮವನ್ನು ಆತನಲ್ಲಿರಿಸುವೆನು. ಆತನು ಜನಾಂಗಗಳನ್ನು ನ್ಯಾಯವಾಗಿ ತೀರ್ಪು ಮಾಡುವನು.