Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 2:6 - ಪರಿಶುದ್ದ ಬೈಬಲ್‌

6 ನೀವು ನಿಮ್ಮ ಜನರನ್ನು ತೊರೆದದ್ದರಿಂದ ನಾನು ನಿಮಗೆ ಹೀಗೆ ಹೇಳಿದೆನು. ಪೂರ್ವದೇಶದ ಜನರಿಗಿರುವ ತಪ್ಪು ತಿಳುವಳಿಕೆಯು ನಿಮ್ಮ ಜನರಲ್ಲಿ ತುಂಬಿಹೋಯಿತು. ಫಿಲಿಷ್ಟಿಯರಂತೆ ನಿಮ್ಮ ಜನರು ಭವಿಷ್ಯ ಹೇಳಲು ಪ್ರಯತ್ನಿಸಿ ಆ ತಪ್ಪು ತಿಳುವಳಿಕೆಗೆ ಮಾರುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯಾಕೋಬಿನ ಮನೆತನದವರು ಪೂರ್ವದೇಶಗಳಲ್ಲಿ ಮಂತ್ರತಂತ್ರಗಳಲ್ಲಿ ಮಗ್ನರೂ, ಫಿಲಿಷ್ಟಿಯರ ಹಾಗೆ ಕಣಿ ಹೇಳುವವರೂ, ಅನ್ಯದೇಶಗಳವರ ಸಂಗಡ ಒಪ್ಪಂದ ಮಾಡುವವರೂ ಆಗಿರುವುದರಿಂದ ಯೆಹೋವನೇ ಈ ನಿನ್ನ ಜನರನ್ನು ಕೈಬಿಟ್ಟಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹೇ ಸರ್ವೇಶ್ವರಾ ಯಕೋಬ ಮನೆತನದವರನ್ನು ನೀವು ಕೈ ಬಿಟ್ಟಿದ್ದೀರಿ. ಏಕೆಂದರೆ ಅವರು ಪೌರಸ್ತ್ಯರಂತೆ ಮಾಟಮಂತ್ರ ಮಾಡುವವರು. ಫಿಲಿಷ್ಟಿಯರಂತೆ ಕಣಿಹೇಳುವವರು, ಅನ್ಯದೇಶಿಯರಂತೆ ಆಚಾರವಿಚಾರಗಳನ್ನು ಅನುಕರಿಸುವವರು ಆಗಿಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯಾಕೋಬನ ಮನೆತನದವರು ಮೂಡಣ ದೇಶಗಳ [ಮಂತ್ರತಂತ್ರಗಳಲ್ಲಿ] ಮಗ್ನರೂ ಫಿಲಿಷ್ಟಿಯರ ಹಾಗೆ ಕಣಿಹೇಳುವವರೂ ಅನ್ಯದೇಶಗಳವರ ಸಂಗಡ ಒಪ್ಪಂದಮಾಡುವವರೂ ಆಗಿರುವದರಿಂದ ಈ ನಿನ್ನ ಜನರನ್ನು ಕೈಬಿಟ್ಟಿದ್ದೀಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯಾಕೋಬಿನ ಮನೆತನದವರು ಪೂರ್ವದೇಶಗಳ ಮಂತ್ರತಂತ್ರಗಳಲ್ಲಿ ಮಗ್ನರಾಗಿ, ಫಿಲಿಷ್ಟಿಯರಂತೆ ಕಣಿ ಹೇಳುವವರಾಗಿಯೂ, ಬೇರೆ ದೇಶಗಳವರ ಮಧ್ಯದಲ್ಲಿ ಮೆಚ್ಚಿಕೆಯುಳ್ಳವರಾಗಿಯೂ ಇರುವುದರಿಂದ ಈ ನಿನ್ನ ಜನರನ್ನು ತಳ್ಳಿಬಿಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 2:6
31 ತಿಳಿವುಗಳ ಹೋಲಿಕೆ  

ಅದು ಸತ್ಯ. ಆ ಕೊಂಬೆಗಳು ಮುರಿಯಲ್ಪಟ್ಟವು. ಅದಕ್ಕೆ ಅಪನಂಬಿಕೆಯೇ ಕಾರಣ. ನೀವು ಆ ಮರದ ಒಂದು ಭಾಗವಾದದ್ದು ನಿಮ್ಮ ನಂಬಿಕೆಯಿಂದಲೇ. ಆದ್ದರಿಂದ ಗರ್ವಪಡಬೇಡ, ಭಯದಿಂದಿರು.


ಒಂದು ದಿನ, ಅಹಜ್ಯನು ಸಮಾರ್ಯದ ತನ್ನ ಮನೆಯ ಮಾಳಿಗೆಯ ಮೇಲಿದ್ದನು. ಅಹಜ್ಯನು ಮನೆಯ ಮೇಲಿನ ಮರದ ಕಂಬಗಳ ಮೂಲಕ ಕೆಳಕ್ಕೆ ಬಿದ್ದನು. ಅವನಿಗೆ ಬಹಳ ಗಾಯಗಳಾದವು. ಅಹಜ್ಯನು ಸಂದೇಶಕರನ್ನು ಕರೆದು ಅವರಿಗೆ, “ಎಕ್ರೋನಿನ ದೇವರಾದ ಬಾಳ್ಜೆಬೂಬನ ಅರ್ಚಕರ ಬಳಿಗೆ ಹೋಗಿ, ನನ್ನ ಗಾಯಗಳು ಗುಣವಾಗುತ್ತವೆಯೇ ಎಂಬುದನ್ನು ಅವರಿಂದ ತಿಳಿದುಕೊಳ್ಳಿ” ಎಂದು ಹೇಳಿದನು.


ಯೆಹೋವನೇ, ನೀನು ನಮ್ಮನ್ನು ಶಾಶ್ವತವಾಗಿ ಮರೆತಿರುವುದೇಕೆ? ನೀನು ನಮ್ಮನ್ನು ದೀರ್ಘಕಾಲದವರೆಗೆ ತೊರೆದುಬಿಟ್ಟಿರುವುದೇಕೆ?


ಯೆಹೋವನು ಹೀಗೆ ಹೇಳುತ್ತಾನೆ: “ಬೇರೆ ಜನಾಂಗಗಳಂತೆ ಜೀವಿಸಬೇಡಿ. ಆಕಾಶದಲ್ಲಿ ಕಾಣುವ ವಿಶೇಷ ಉತ್ಪಾತಗಳಿಗೆ ಹೆದರಬೇಡಿರಿ. ಆಕಾಶದಲ್ಲಿ ಕಾಣುವ ಉತ್ಪಾತಗಳಿಗೆ ಬೇರೆ ಜನಾಂಗಗಳು ಹೆದರುತ್ತವೆ. ಆದರೆ ನೀವು ಅವುಗಳಿಗೆ ಹೆದರಬಾರದು.


ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”


ನನ್ನ ಮಗನೇ, ಮತ್ತೊಬ್ಬನ ಸಾಲಕ್ಕೆ ನೀನು ಜಾಮೀನಾಗಬೇಡ. ಅವನು ಸಾಲ ತೀರಿಸಲಾಗದಿದ್ದರೆ ನಾನು ತೀರಿಸುತ್ತೇನೆ ಎಂದು ಪ್ರಮಾಣ ಮಾಡಿರುವೆಯಾ?


ಅವರು ಬೇರೆಯವರೊಂದಿಗೆ ಸೇರಿಕೊಂಡು ಅವರ ದುರಾಚಾರಗಳನ್ನೇ ಮಾಡಿದರು.


ಆ ದಿನಗಳಲ್ಲಿ ಕೆಲವು ಮಂದಿ ಯೆಹೂದ್ಯರು ಅಷ್ಡೋದ್, ಅಮ್ಮೋನ್, ಮೋವಾಬ್ ಊರುಗಳಿಂದ ಹೆಣ್ಣನ್ನು ತಂದು ಮದುವೆ ಮಾಡಿಕೊಂಡದ್ದು ನನ್ನ ನೆನಪಿಗೆ ಬಂತು.


ಜೆಕರ್ಯನ ಮೇಲೆ ದೇವರಾತ್ಮನು ಬಂದನು. ಅವನು ಯಾಜಕನಾದ ಯೆಹೋಯಾದನ ಮಗ. ಜೆಕರ್ಯನು ಜನರ ಮುಂದೆ ನಿಂತು, “ಯೆಹೋವನು ಹೀಗೆನ್ನುತ್ತಾನೆ: ‘ಯೆಹೋವನ ಆಜ್ಞೆಗಳಿಗೆ ವಿಧೇಯರಾಗಲು ನೀವು ಏಕೆ ನಿರಾಕರಿಸುತ್ತೀರಿ? ಏತಕ್ಕೆ? ನೀವು ಉದ್ಧಾರವಾಗುವುದಿಲ್ಲ. ನೀವು ಯೆಹೋವನನ್ನು ತೊರೆದದ್ದರಿಂದ ಆತನು ನಿಮ್ಮನ್ನೂ ತೊರೆದುಬಿಟ್ಟಿರುತ್ತಾನೆ’” ಎಂದು ಹೇಳಿದನು.


ಸೌಲನು ಯೆಹೋವನಿಗೆ ಅವಿಧೇಯನಾಗಿದ್ದರಿಂದ ಸತ್ತನು. ಅವನು ಯೆಹೋವನ ಮಾತನ್ನು ಕೇಳದೆ ಹೋದನು.


ಆಗ ಬಿಳಾಮನು ಹೀಗೆ ಹೇಳಿದನು: “ಮೋವಾಬ್ಯರ ಅರಸನಾದ ಬಾಲಾಕನು ನನ್ನನ್ನು ಅರಾಮಿನ ಪೂರ್ವ ದಿಕ್ಕಿನ ಬೆಟ್ಟಗಳಿಂದ ನನ್ನನ್ನು ಕರೆಸಿದನು. ‘ನೀನು ಬಂದು ನನಗೋಸ್ಕರ ಯಾಕೋಬ್ಯರನ್ನು ಶಪಿಸು; ಇಸ್ರೇಲರ ವಿರುದ್ಧ ಮಾತನಾಡು’ ಎಂದು ಬಾಲಾಕನು ಹೇಳಿದನು.


“ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಗೆ ಹೋಗುವ ಯಾವುದೇ ವ್ಯಕ್ತಿಯಾದರೂ ಸರಿಯೇ ಅವನಿಗೆ ನಾನು ವಿರುದ್ಧವಾಗಿರುವೆನು. ಆ ವ್ಯಕ್ತಿ ನನಗೆ ಅಪನಂಬಿಗಸ್ತನಾಗಿದ್ದಾನೆ. ಆದ್ದರಿಂದ ನಾನು ಅವನನ್ನು ಅವನ ಕುಲದಿಂದ ತೆಗೆದುಹಾಕುವೆನು.


“ಸಲಹೆಗಾಗಿ, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಗೆ ಹೋಗಬೇಡಿರಿ. ಅವರು ನಿಮ್ಮನ್ನು ಕೇವಲ ಅಶುದ್ಧರನ್ನಾಗಿ ಮಾಡುವರು. ನಾನೇ ನಿಮ್ಮ ದೇವರಾದ ಯೆಹೋವನು!


ನೀವು ಅವರ ಪುತ್ರಿಯರಲ್ಲಿ ಕೆಲವರನ್ನು ನಿಮ್ಮ ಪುತ್ರರಿಗೆ ಹೆಂಡತಿಯರಾಗುವುದಕ್ಕೆ ಆರಿಸಿಕೊಳ್ಳುವಿರಿ. ಅವರ ಪುತ್ರಿಯರು ಸುಳ್ಳುದೇವರುಗಳ ಸೇವೆ ಮಾಡುತ್ತಾರೆ. ನಿಮ್ಮ ಪುತ್ರರನ್ನೂ ಅವರು ಅದೇ ಸೇವೆಗೆ ನಡೆಸುತ್ತಾರೆ.


“ಮಾಟಗಾರ್ತಿಯನ್ನು ನೀವು ಜೀವಸಹಿತ ಉಳಿಸಬಾರದು.


ಫಿಲಿಷ್ಟಿಯರು ತಮ್ಮ ಅರ್ಚಕರನ್ನು ಮತ್ತು ಮಾಂತ್ರಿಕರನ್ನು ಕರೆದು, “ಯೆಹೋವನ ಪೆಟ್ಟಿಗೆಯನ್ನು ಏನು ಮಾಡೋಣ? ಇದನ್ನು ಮರಳಿ ಹಿಂದಕ್ಕೆ ಕಳುಹಿಸುವುದು ಹೇಗೆ?” ಎಂದು ಕೇಳಿದರು.


ಫಿಲಿಷ್ಟಿಯ ದೇಶವೇ, ನಿನ್ನನ್ನು ಹೊಡೆದ ಅರಸನು ಸತ್ತದ್ದಕ್ಕಾಗಿ ನೀನು ಸಂತೋಷಗೊಂಡಿರುವೆ. ಆದರೆ ನೀನು ಸಂತೋಷಗೊಳ್ಳಬಾರದು. ಅವನ ರಾಜ್ಯಭಾರವು ಅಂತ್ಯವಾಯಿತು ಎಂಬುದು ಸತ್ಯ. ಆದರೆ ಅರಸನ ಮಗನು ರಾಜ್ಯವಾಳುವನು. ಒಂದು ಹಾವು ಇನ್ನೊಂದು ಭಯಂಕರ ಹಾವನ್ನು ಹೆರುವಂತೆ ಅದು ಇರುವದು. ಈ ಹೊಸ ಅರಸನು ನಿಮಗೆ ವೇಗವಾದ ಮತ್ತು ಅಪಾಯಕರವಾದ ಹಾವಾಗುವನು.


“ನಾನು (ಯೆಹೋವನು) ನನ್ನ ಮನೆಯನ್ನು ತ್ಯಜಿಸಿದ್ದೇನೆ. ನಾನು ನನ್ನ ಆಸ್ತಿಯನ್ನು ಬಿಟ್ಟುಬಿಟ್ಟಿದ್ದೇನೆ. ನಾನು ನನ್ನ ಪ್ರಿಯತಮೆಯನ್ನು (ಯೆಹೂದ) ಅವಳ ಶತ್ರುಗಳಿಗೆ ಕೊಟ್ಟಿದ್ದೇನೆ.


ನೀನು ಮಾಟಮಂತ್ರಗಳನ್ನು ಇನ್ನು ಮುಂದೆ ಮಾಡದಿರುವೆ. ಭವಿಷ್ಯ ಮತ್ತು ಕಣಿ ಹೇಳುವ ಜನರು ಇನ್ನು ಮುಂದೆ ನಿನ್ನಲ್ಲಿ ಇರುವುದಿಲ್ಲ.


“ಯೆಹೋವನ ಯಜ್ಞದ ದಿನದಲ್ಲಿ ನಾನು ರಾಜಕುಮಾರರನ್ನೂ ಇತರ ನಾಯಕರುಗಳನ್ನೂ ಶಿಕ್ಷಿಸುವೆನು. ಪರದೇಶದ ಬಟ್ಟೆಯನ್ನು ತೊಟ್ಟುಕೊಳ್ಳುವ ಪ್ರತಿಯೊಬ್ಬರನ್ನೂ ನಾನು ಶಿಕ್ಷಿಸುವೆನು.


ಯೆಹೋವನು ಇಸ್ರೇಲಿನ ಜನರೆಲ್ಲರನ್ನೂ ತಿರಸ್ಕರಿಸಿದನು. ಅವನು ಅವರಿಗೆ ಅನೇಕ ತೊಂದರೆಗಳನ್ನು ಉಂಟುಮಾಡಿದನು. ಅವರನ್ನು ನಾಶಗೊಳಿಸಲು ನಾಶಕರಿಗೆ ಆತನು ಅವಕಾಶ ನೀಡಿದನು. ಕೊನೆಗೆ, ಆತನು ಅವರನ್ನು ದೂರತಳ್ಳಿ, ತನ್ನ ದೃಷ್ಟಿಯಿಂದ ಅವರನ್ನೂ ದೂರಮಾಡಿದನು.


ನಿನ್ನ ದೇಶದಲ್ಲಿರುವ ಪಟ್ಟಣಗಳನ್ನು ಹಾಳುಮಾಡುವೆನು. ನಿನ್ನ ಕೋಟೆಗಳನ್ನೆಲ್ಲಾ ನಾಶಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು