ಸಹಾಯಕ್ಕಾಗಿ ಈಜಿಪ್ಟಿಗೆ ಹೋಗುವ ಜನರನ್ನು ನೋಡಿರಿ. ಆ ಜನರು ಕುದುರೆಗಳಿಗಾಗಿ ಕೇಳುತ್ತಿದ್ದಾರೆ. ಕುದುರೆಗಳು ಅವರನ್ನು ರಕ್ಷಿಸುತ್ತವೆ ಎಂದು ಅವರು ಭಾವಿಸುತ್ತಾರೆ. ಈಜಿಪ್ಟಿನ ಬಹಳ ರಥಗಳು ಮತ್ತು ಬಹಳ ಕುದುರೆಗಳು ಅವರನ್ನು ಕಾಪಾಡುವವು ಎಂದು ಜನರು ತಿಳಿದುಕೊಳ್ಳುತ್ತಾರೆ. ಸೈನ್ಯವು ದೊಡ್ಡದಾಗಿರುವದರಿಂದ ಯಾವ ಅಪಾಯವೂ ಬಾರದು ಎಂದು ಅವರು ತಿಳಿದುಕೊಳ್ಳುತ್ತಾರೆ. ಜನರು ಇಸ್ರೇಲಿನ ಪರಿಶುದ್ಧನನ್ನು ನಂಬುವದಿಲ್ಲ. ಅವರು ಯೆಹೋವನ ಸಹಾಯವನ್ನು ಕೋರುವದಿಲ್ಲ.
ನೀವು, “ನಮಗೆ ಸಹಾಯ ಬೇಡ. ಓಡಿಹೋಗಲು ಕುದುರೆಗಳು ಬೇಕು” ಎಂದು ಹೇಳುವಿರಿ. ಅದು ಸರಿಯಾದ ಮಾತು. ನೀವು ಕುದುರೆಗಳ ಮೂಲಕವೇ ಓಡುವಿರಿ. ಆದರೆ ಶತ್ರುಗಳು ನಿಮ್ಮನ್ನು ಹಿಂದಟ್ಟುವರು. ಅವರು ನಿಮ್ಮ ಕುದುರೆಗಳಿಗಿಂತ ವೇಗಶಾಲಿಗಳಾಗಿದ್ದಾರೆ.
ದೇವರ ಕೋಪವೆಂಬ ಮತ್ತು ಅವಳ ಲೈಂಗಿಕ ಪಾಪವೆಂಬ ದ್ರಾಕ್ಷಾರಸವನ್ನು ಲೋಕದ ಜನರೆಲ್ಲರೂ ಕುಡಿದು ಮತ್ತರಾದರು. ಭೂಲೋಕದ ರಾಜರುಗಳೆಲ್ಲ ಅವಳೊಂದಿಗೆ ಲೈಂಗಿಕ ಪಾಪ ಮಾಡಿದರು. ಭೂಲೋಕದ ವರ್ತಕರು ಅವಳ ಅತಿಯಾದ ಸುಖದಿಂದ ಶ್ರೀಮಂತರಾದರು.
ಅಶ್ಶೂರವು ನಮ್ಮನ್ನು ರಕ್ಷಿಸಲಾರದು. ನಾವು ಕುದುರೆ ಮೇಲೆ ಸವಾರಿ ಮಾಡುವದಿಲ್ಲ. ನಮ್ಮ ಕೈಗಳು ತಯಾರಿಸಿದ ಬೊಂಬೆಗಳಿಗೆ ನಾವು ಇನ್ನು ‘ನಮ್ಮ ದೇವರು’ ಎಂದು ಹೇಳುವದಿಲ್ಲ. ಯಾಕೆಂದರೆ ಅನಾಥರಿಗೆ ಕರುಣೆಯನ್ನು ತೋರಿಸುವವನು ನೀನೇ.”
ಈ ಜನರು ದುಷ್ಕೃತ್ಯಗಳನ್ನು ನಡಿಸಿ ನನಗೆ ಕೋಪವನ್ನೆಬ್ಬಿಸಿದರು. ಆದ್ದರಿಂದ ನಾನು ಇಸ್ರೇಲನ್ನು ಶಿಕ್ಷಿಸಿದೆನು. ನಾನು ಕೋಪಗೊಂಡು ಅವರಿಗೆ ವಿಮುಖನಾದೆನು. ಇಸ್ರೇಲ್ ನನ್ನನ್ನು ತೊರೆದು ತನಗಿಷ್ಟವಾದ ಸ್ಥಳಕ್ಕೆ ಹೋದನು.