Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 20:4 - ಪರಿಶುದ್ದ ಬೈಬಲ್‌

4 ಅಶ್ಶೂರದ ಅರಸನು ಈಜಿಪ್ಟನ್ನೂ ಇಥಿಯೋಪ್ಯವನ್ನೂ ಸೋಲಿಸುವನು. ಅಶ್ಶೂರವು ಜನರನ್ನು ಸೆರೆಹಿಡಿದು ಅವರ ರಾಜ್ಯಗಳಿಂದ ಹೊರಗೆ ಕೊಂಡುಹೋಗುವದು. ವೃದ್ಧರೂ ಬಾಲಕರೂ ಬಟ್ಟೆಯಿಲ್ಲದೆಯೂ ಪಾದರಕ್ಷೆಗಳಿಲ್ಲದೆಯೂ ಇರುವರು. ಅವರು ಪೂರ್ಣ ಬೆತ್ತಲೆಯಾಗಿರುವರು. ಈಜಿಪ್ಟಿನ ಜನರು ನಾಚಿಕೆಗೆ ತುತ್ತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಈ ರೀತಿಯಾಗಿ ಅಶ್ಶೂರದ ಅರಸನು ಐಗುಪ್ತದ ಸೆರೆಯವರನ್ನೂ, ಕೂಷಿನ ಕೈದಿಗಳನ್ನೂ ಅವರು ದೊಡ್ಡವರಾಗಲಿ, ಚಿಕ್ಕವರಾಗಲಿ ಬಟ್ಟೆ, ಪಾದರಕ್ಷೆಗಳಿಲ್ಲದೆ ಬೆತ್ತಲೆಯಾಗಿ ಐಗುಪ್ತದ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದೇ ಪ್ರಕಾರ ಅಸ್ಸೀರಿಯದ ಅರಸನು ಈಜಿಪ್ಟಿನ ಸೆರೆಯಾಳುಗಳನ್ನೂ ಸುಡಾನಿನ ಕೈದಿಗಳನ್ನೂ - ದೊಡ್ಡವರು ಚಿಕ್ಕವರು ಎನ್ನದೆ ಎಲ್ಲರನ್ನೂ ಬಟ್ಟೆಯಿಲ್ಲದೆ ಬೆತ್ತಲೆಯಾಗಿಸಿ, ಬರಿಗಾಲಿನಲ್ಲೇ ಸೆರೆಮನೆಗೆ ನಡೆಯುವಂತೆ ಮಾಡುವನು. ಹೀಗೆ ಈಜಿಪ್ಟಿನ ನಿವಾಸಿಗಳನ್ನು ಮಾನಭಂಗಕ್ಕೆ ಗುರಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅಶ್ಶೂರದ ಅರಸನು ಐಗುಪ್ತದ ಸೆರೆಯವರನ್ನೂ ಕೂಷಿನ ಕೈದಿಗಳನ್ನೂ ಅವರು ದೊಡ್ಡವರಾಗಲಿ ಚಿಕ್ಕವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹಾಗೆಯೇ ಅಸ್ಸೀರಿಯದ ಅರಸನು ಈಜಿಪ್ಟಿನವರನ್ನು ಬಂಧಿಸಿ, ಕೂಷಿನ ಕೈದಿಗಳನ್ನು ಅವರು ದೊಡ್ಡವರಾಗಲೀ, ಸಣ್ಣವರಾಗಲೀ ಬಟ್ಟೆ, ಕೆರಗಳಿಲ್ಲದೆ ಈಜಿಪ್ಟಿನ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 20:4
18 ತಿಳಿವುಗಳ ಹೋಲಿಕೆ  

ಸರ್ವಶಕ್ತನೂ ಒಡೆಯನೂ ಆಗಿರುವ ಯೆಹೋವನು ಹೇಳುವುದೇನೆಂದರೆ: “ನಾನು ಈಜಿಪ್ಟನ್ನು ಕಠಿಣನಾದ ಒಡೆಯನಿಗೆ ಒಪ್ಪಿಸುವೆನು. ಬಲಿಷ್ಠ ಒಡೆಯನು ಅವರನ್ನು ಆಳುವನು.”


ಜೆರುಸಲೇಮ್ ನಗರವೇ, ನಾನು ನಿನ್ನ ಲಂಗವನ್ನು ನಿನ್ನ ಮುಖದವರೆಗೆ ಎತ್ತಿಬಿಡುತ್ತೇನೆ. ಎಲ್ಲರೂ ನಿನ್ನನ್ನು ನೋಡುತ್ತಾರೆ. ನಿನಗೆ ನಾಚಿಕೆಯಾಗುತ್ತದೆ.


“ಇಂಥ ಕೇಡು ನನಗೆ ಏಕೆ ಉಂಟಾಯಿತು?” ಎಂದು ನಿನ್ನನ್ನು ನೀನೇ ಕೇಳಿಕೊಳ್ಳಬಹುದು. ನೀನು ಮಾಡಿದ ಅನೇಕ ಪಾಪಗಳ ಫಲದಿಂದಲೇ ಆಯಿತು. ನಿನ್ನ ಪಾಪಗಳ ಫಲವಾಗಿ ನಿನ್ನ ಲಂಗವನ್ನು ಹರಿಯಲಾಯಿತು. ನಿನ್ನ ಪಾದರಕ್ಷೆಯನ್ನು ಕಿತ್ತುಕೊಳ್ಳಲಾಯಿತು. ನಿನ್ನನ್ನು ಕಂಗೆಡಿಸುವದಕ್ಕಾಗಿ ಅವರು ಹೀಗೆ ಮಾಡಿದರು.


ಬೆಂಕಿಯಲ್ಲಿ ಪುಟಹಾಕಿದ ಅಪ್ಪಟ ಚಿನ್ನವನ್ನು ನೀನು ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ಸಲಹೆ ನೀಡುತ್ತೇನೆ. ಆಗ ನೀನು ನಿಜವಾಗಿಯೂ ಶ್ರೀಮಂತನಾಗಲು ಸಾಧ್ಯ. ನಾನು ನಿನಗೆ ಹೇಳುವುದೇನೆಂದರೆ: ಬಿಳಿವಸ್ತ್ರಗಳನ್ನು ಕೊಂಡುಕೊ. ಆಗ ನೀನು ನಾಚಿಕೆಕರವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಸಾಧ್ಯವಾಗುವುದು. ನೀನು ನಿನ್ನ ಕಣ್ಣುಗಳಿಗೆ ಹಚ್ಚಲು ಔಷಧಿಯನ್ನು ಕೊಂಡುಕೊಳ್ಳಬೇಕೆಂತಲೂ ನಾನು ನಿನಗೆ ಹೇಳುತ್ತೇನೆ. ಆಗ ನಿನಗೆ ನಿಜವಾಗಿಯೂ ದೃಷ್ಟಿ ಬರುವುದು.


ಶಾಫೀರ್‌ನಲ್ಲಿ ವಾಸಿಸುವವರೇ, ಬೆತ್ತಲೆಯಾಗಿ ನಾಚಿಕೆಯಿಂದ ನಡೆಯಿರಿ. ಚಾನಾನ್‌ನಲ್ಲಿ ವಾಸಿಸುವವರು ಹೊರಗೆ ಬರುವದಿಲ್ಲ. ಬೇತೇಚೆಲಿನ ಜನರು ಅಳುವರು, ನಿಮಗೆ ಅವರು ನೀಡುತ್ತಿದ್ದ ಬೆಂಬಲವನ್ನು ಹಿಂತೆಗೆದುಕೊಳ್ಳುವರು.


ನಾನು ಈಜಿಪ್ಟಿನ ನೊಗವನ್ನು ಮುರಿದಾಗ ತಹಪನೇಸ್‌ನಲ್ಲಿ ಕತ್ತಲೆಯ ದಿನವಾಗಿರುವುದು. ಈಜಿಪ್ಟಿನ ಅಧಿಕಾರಕ್ಕೆ ಅಂತ್ಯ ಬರುವುದು. ಈಜಿಪ್ಟಿನ ಮೇಲೆ ಮೋಡವು ಕವಿಯುವುದು. ಅದರ ಪಟ್ಟಣಗಳ ಜನರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು.


ಆ ಜನರನ್ನೆಲ್ಲ ಅವರ ಶತ್ರುಗಳು ಸೋಲಿಸುವಂತೆ ಮಾಡುವೆನು. ಅವರ ಶತ್ರುಗಳು ಅವರನ್ನು ಕೊಲ್ಲಬಯಸುವರು. ನಾನು ಆ ಜನರನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನ ಮತ್ತು ಅವನ ಸೇವಕರ ಕೈಗೆ ಒಪ್ಪಿಸುವೆನು.” “ಬಹಳ ಹಿಂದೆ, ಈಜಿಪ್ಟ್ ದೇಶದಲ್ಲಿ ಶಾಂತಿ ನೆಲೆಸಿತ್ತು. ತೊಂದರೆಗಳ ಈ ದಿನಗಳ ತರುವಾಯ ಈಜಿಪ್ಟ್ ಪುನಃ ಶಾಂತಿಯ ಬೀಡಾಗುವುದು” ಇದು ಯೆಹೋವನ ನುಡಿ.


ಪುರುಷರು ನಿನ್ನ ಶರೀರವನ್ನು ನೋಡಿ ನಿನ್ನೊಂದಿಗೆ ಸಂಭೋಗಿಸುವರು. ನೀನು ಮಾಡಿದ ಕೆಟ್ಟಕಾರ್ಯಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ಯಾರೂ ನಿನಗೆ ಸಹಾಯಮಾಡಲು ಬರುವದಿಲ್ಲ.


ನನ್ನ ಒಡೆಯನಾದ ಯೆಹೋವನು ಚೀಯೋನಿನ ಸ್ತ್ರೀಯರ ತಲೆಯ ಮೇಲೆ ಹುಣ್ಣುಗಳನ್ನು ಬರಮಾಡಿ ಅವರ ತಲೆಕೂದಲು ಉದುರಿ ತಲೆಬೋಳಾಗುವಂತೆ ಮಾಡುವನು.


ಆದ್ದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ ಅವರ ಗಡ್ಡದ ಅರ್ಧಭಾಗವನ್ನು ಬೋಳಿಸಿದನು. ಅವರ ನಡುವಿನ ಕೆಳಭಾಗವು ಕಾಣುವಂತೆ ಅವರ ಬಟ್ಟೆಗಳನ್ನು ಮಧ್ಯಭಾಗದಲ್ಲಿ ಕತ್ತರಿಸಿದನು, ನಂತರ ಅವರನ್ನು ಕಳುಹಿಸಿದನು.


ಈಗ ನೀನು ದಾಸಿಯಾಗಿ ಕೆಲಸ ಮಾಡಬೇಕು. ನಿನ್ನ ಮನೋಹರವಾದ ಉಡುಪನ್ನು ತೆಗೆದುಹಾಕು. ಬೀಸುವ ಕಲ್ಲನ್ನು ತೆಗೆದುಕೊಂಡು ಧಾನ್ಯವನ್ನು ಬೀಸು. ಜನರು ನಿನ್ನ ತೊಡೆಗಳನ್ನು ನೋಡುವ ತನಕ ನಿನ್ನ ಉಡುಪನ್ನು ಎತ್ತಿ ಹೊಳೆಯನ್ನು ದಾಟು. ನಿನ್ನ ದೇಶವನ್ನು ಬಿಟ್ಟುಹೋಗು.


ಈಜಿಪ್ಟಿನ ಜನಗಳೇ, ನಿಮ್ಮ ವಸ್ತುಗಳನ್ನು ಕಟ್ಟಿಕೊಂಡು ಸೆರೆವಾಸಕ್ಕೆ ಸಿದ್ಧರಾಗಿರಿ. ಏಕೆಂದರೆ ನೋಫ್ ಪಟ್ಟಣವು ಹಾಳುಬಿದ್ದ ನಿರ್ಜನವಾದ ಪ್ರದೇಶವಾಗುವುದು. ನಗರಗಳನ್ನು ನಾಶಪಡಿಸಲಾಗುವುದು; ಅವುಗಳು ನಿರ್ಜನವಾಗುವವು.


ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲೇ, ನೀನು ನನಗೆ ಇಥಿಯೋಪ್ಯದವರಂತಿರುವೆ. ಇಸ್ರೇಲನ್ನು ಈಜಿಪ್ಟ್ ದೇಶದಿಂದ ನಾನು ಹೊರತಂದೆನು. ಕಪ್ತೋರಿನಿಂದ ಫಿಲಿಷ್ಟಿಯರನ್ನು ಹೊರತಂದೆನು ಮತ್ತು ಕೀರ್‌ನಿಂದ ಅರಾಮ್ಯರನ್ನು ತಂದೆನು.”


ಆದರೆ ತೆಬೆಸ್ ಸೋಲಿಸಲ್ಪಟ್ಟಿತು. ಆಕೆಯ ಪ್ರಜೆಗಳು ಬೇರೆ ದೇಶಕ್ಕೆ ಕೈದಿಗಳಾಗಿ ಒಯ್ಯಲ್ಪಟ್ಟರು. ಸೈನಿಕರು ಆಕೆಯ ಹಸುಗೂಸುಗಳನ್ನು ರಸ್ತೆಯ ಮೂಲೆಮೂಲೆಗಳಲ್ಲಿ ಹೊಡೆದು ಸಾಯಿಸಿದರು. ತಮ್ಮಲ್ಲಿ ಯಾರು ಉನ್ನತ ಅಧಿಕಾರಿಗಳನ್ನು ಗುಲಾಮರನ್ನಾಗಿ ಉಪಯೋಗಿಸಬೇಕೆಂಬದಾಗಿ ಚೀಟುಹಾಕಿದರು. ಅವರು ತೆಬೆಸಿನ ಮುಖ್ಯ ಅಧಿಕಾರಿಗಳನ್ನು ಸಂಕೋಲೆಗಳಿಂದ ಬಂಧಿಸಿದರು.


ಇಥಿಯೋಪ್ಯದ ಜನರೇ, ಇದರಲ್ಲಿ ನೀವೂ ಸೇರಿರುವಿರಿ. ಯೆಹೋವನ ಕತ್ತಿಯು ನಿಮ್ಮ ಜನರೆಲ್ಲರನ್ನು ಕೊಲ್ಲುವದು.


ಆಗ ಹಾನೂನನು ದಾವೀದನ ಸೇವಕರನ್ನು ಬಂಧಿಸಿ ಅವರ ಗಡ್ಡಗಳನ್ನು ಬೋಳಿಸಿ ಅವರ ವಸ್ತ್ರಗಳನ್ನು ಸೊಂಟದಿಂದ ಕೆಳಭಾಗದವರೆಗೆ ಕತ್ತರಿಸಿಬಿಟ್ಟು ಅವರನ್ನು ಹಿಂದಕ್ಕೆ ಕಳುಹಿಸಿದನು.


ಆದರೆ ಯೆಹೋವನು ಜ್ಞಾನವಂತನಾಗಿದ್ದಾನೆ. ಆತನೇ ಅವರಿಗೆ ವಿರುದ್ಧವಾಗಿ ಸಂಕಟಗಳನ್ನು ಬರಮಾಡುವನು. ದೇವರ ಆಜ್ಞೆಯನ್ನು ಜನರು ಬದಲಾಯಿಸಲಾಗುವದಿಲ್ಲ. ಯೆಹೋವನು ಎದ್ದು ದುಷ್ಟಜನರ (ಯೆಹೂದ) ವಿರುದ್ಧ ಯುದ್ಧ ಮಾಡುವನು. ಅವರಿಗೆ ಸಹಾಯ ಕೊಡುವವರ (ಈಜಿಪ್ಟ್) ವಿರುದ್ಧವಾಗಿಯೂ ಯುದ್ಧ ಮಾಡುವನು.


ಈಜಿಪ್ಟಿನ ಜನರು ಮನುಷ್ಯಮಾತ್ರದವರೇ. ಅವರು ದೇವರಲ್ಲ. ಈಜಿಪ್ಟಿನ ಕುದುರೆಗಳು ಪ್ರಾಣಿಗಳಾಗಿವೆ. ಅವುಗಳು ಆತ್ಮವಲ್ಲ. ಯೆಹೋವನು ತನ್ನ ಕೈಯನ್ನು ಚಾಚುವಾಗ ಸಹಾಯ ಮಾಡುವವನು (ಈಜಿಪ್ಟ್) ಸೋಲುವನು. ಸಹಾಯ ಪಡೆದವನು (ಯೆಹೂದ) ಬೀಳುವನು. ಅವರೆಲ್ಲರೂ ಒಟ್ಟಿಗೆ ನಾಶವಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು