ಯೆಶಾಯ 20:6 - ಪರಿಶುದ್ದ ಬೈಬಲ್6 ಸಮುದ್ರ ತೀರದಲ್ಲಿ ವಾಸಿಸುವವರು ಹೀಗೆ ಹೇಳುವರು: “ಆ ದೇಶದವರು ನಮಗೆ ಸಹಾಯ ಮಾಡುವರೆಂದು ಅವರನ್ನು ನಂಬಿದೆವು. ಅಶ್ಶೂರದ ಅರಸನಿಂದ ನಮ್ಮನ್ನು ಕಾಪಾಡುವಂತೆ ನಾವು ಅವರ ಬಳಿಗೆ ಓಡಿಹೋದೆವು. ಆದರೆ ಈಗ ನೋಡಿ, ಆ ದೇಶದವರು ಸೋತು ಹೋಗಿ ವೈರಿವಶವಾಗಿದ್ದಾರೆ. ಈಗ ನಾವು ಪಾರಾಗಲು ಹೇಗೆ ಸಾಧ್ಯ?” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆ ದಿನದಲ್ಲಿ ಈ ತೀರದಲ್ಲಿ ವಾಸಿಸುವವರು ಹೇಳುವುದೇನೆಂದರೆ, “ಇಗೋ, ಅಶ್ಶೂರದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?” ಎಂದು ಅಂದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆ ದಿನದಂದು (ಫಿಲಿಷ್ಟಿಯದ) ಕರಾವಳಿಯಲ್ಲಿ ವಾಸಿಸುವರು. ‘ಅಯ್ಯೋ ಅಸ್ಸೀರಿಯರ ಅರಸನಿಂದ ನಾವು ಬಿಡುಗಡೆಯಾಗಬೇಕೆಂದು ಯಾರ ಆಶ್ರಯವನ್ನು ನಿರೀಕ್ಷಿಸಿಕೊಂಡಿದ್ದೇವೋ ಅವರಿಗೇ ಈ ಗತಿ ಬಂತಲ್ಲಾ; ಇನ್ನು ನಮ್ಮಂಥವರು ಉದ್ಧಾರವಾಗುವುದು ಹೇಗೆ?’ ಎಂದುಕೊಳ್ಳುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆ ದಿನದಲ್ಲಿ ಈ ಕರಾವಳಿಯಲ್ಲಿ ವಾಸಿಸುವವರು - ಹಾ, ಅಶ್ಶೂರದ ಅರಸನಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೆವೋ ಅವರಿಗೇ ಈ ಗತಿ ಬಂತಲ್ಲಾ; ನಮ್ಮಂಥವರಿಗೆ ಹೇಗೆ ರಕ್ಷಣೆಯಾದೀತು ಎಂದು ಅಂದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆ ದಿನದಲ್ಲಿ ಕರಾವಳಿಯ ನಿವಾಸಿಗಳು, ‘ಇಗೋ, ಅಸ್ಸೀರಿಯದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ, ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?’ ಎಂದುಕೊಳ್ಳುವರು.” ಅಧ್ಯಾಯವನ್ನು ನೋಡಿ |
“ಗೋಡೆಯು ನೆಟ್ಟಗಿದೆಯೆಂದು ನೋಡಲು ಜನರು ಗುಂಡನ್ನೂ ನೂಲನ್ನೂ ಉಪಯೋಗಿಸುತ್ತಾರೆ. ಅದೇ ರೀತಿಯಲ್ಲಿ ನಾನು ನ್ಯಾಯವನ್ನು ನೂಲನ್ನಾಗಿಯೂ ಕರುಣೆಯನ್ನು ಗುಂಡನ್ನಾಗಿಯೂ ಉಪಯೋಗಿಸುವೆನು. ನೀವು ದುಷ್ಟಜನರು. ನೀವು ನಿಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತಿದ್ದೀರಿ. ಆದರೆ ನೀವು ಶಿಕ್ಷಿಸಲ್ಪಡುವಿರಿ. ನೀವು ಅಡಗಿಕೊಂಡಿರುವ ಸ್ಥಳವನ್ನು ನಾಶಮಾಡುವ ಬಿರುಗಾಳಿಯಂತೆಯೂ ಪ್ರವಾಹದಂತೆಯೂ ಅದಿರುವುದು.
ಹಾಳಾಗಿಹೋದ ಯೆಹೂದವೇ, ನೀನು ಮಾಡುತ್ತಿರುವುದೇನು? ಅತ್ಯುತ್ತಮವಾದ ಕೆಂಪುಬಣ್ಣದ ಪೋಷಾಕನ್ನು ನೀನು ಧರಿಸಿಕೊಳ್ಳುತ್ತಿರುವುದೇಕೆ? ಸುವರ್ಣಾಭರಣಗಳಿಂದ ನಿನ್ನನ್ನು ಏಕೆ ಅಲಂಕರಿಸಿಕೊಳ್ಳುತ್ತಿರುವೆ? ಕಣ್ಣಿಗೆ ಕಾಡಿಗೆಯನ್ನು ಏಕೆ ಹಚ್ಚುತ್ತಿರುವೆ? ನೀನು ಅಲಂಕಾರ ಮಾಡಿಕೊಳ್ಳುವದೆಲ್ಲ ವ್ಯರ್ಥ. ನಿನ್ನ ಪ್ರಿಯತಮರು ನಿನ್ನನ್ನು ತಿರಸ್ಕರಿಸುತ್ತಾರೆ. ಅವರು ನಿನ್ನನ್ನು ಕೊಲೆಮಾಡುವ ಪ್ರಯತ್ನದಲ್ಲಿದ್ದಾರೆ.