ಯೆಶಾಯ 21:12 - ಪರಿಶುದ್ದ ಬೈಬಲ್12 ಅದಕ್ಕೆ ಕಾವಲುಗಾರ, “ಮುಂಜಾನೆ ಬರುತ್ತಿದೆ. ಆದರೆ ರಾತ್ರಿ ತಿರುಗಿ ಬರುತ್ತಿದೆ. ನೀನೇನಾದರೋ ಕೇಳಬೇಕಿದ್ದರೆ ಮತ್ತೆ ಬಂದು ವಿಚಾರಿಸು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ಆಮೇಲೆ ಬಂದು ವಿಚಾರಿಸಿರಿ” ಎಂದು ಕಾವಲುಗಾರನು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅದಕ್ಕೆ ಪಹರೆಯವನು, “ಹಗಲು ಬರುತ್ತಿದೆ ಮತ್ತೆ ರಾತ್ರಿಯೂ ಬರುತ್ತದೆ. ಬೇಕಾದರೆ ಆಮೇಲೆ ಬಂದು ವಿಚಾರಿಸಿರಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ವಿಚಾರಿಸಿರಿ, ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಕಾವಲುಗಾರನು ಹೀಗೆ ಉತ್ತರಿಸಿದನು, “ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ. ವಿಚಾರಿಸಬೇಕಾದರೆ ವಿಚಾರಿಸಿರಿ, ತಿರುಗಿ ಬನ್ನಿರಿ.” ಅಧ್ಯಾಯವನ್ನು ನೋಡಿ |
“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’