Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 21:13 - ಪರಿಶುದ್ದ ಬೈಬಲ್‌

13 ಅರೇಬಿಯದ ಬಗ್ಗೆ ದುಃಖಕರವಾದ ಸಂದೇಶ: ದೇದಾನಿನಿಂದ ಬಂದ ಪ್ರಯಾಣಿಕರು ಅರೇಬಿಯ ಮರುಭೂಮಿಯಲ್ಲಿನ ಪೊದೆಗಳಲ್ಲಿ ರಾತ್ರಿ ತಂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅರಬಿಯ ವಿಷಯವಾದ ದೈವೋಕ್ತಿ. ಓ ದೇದಾನ್ಯರೇ, ಅರಬಿಯದ ಮರುಭೂಮಿಯಲ್ಲಿ ಇಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅರೇಬಿಯ ವಿಷಯವಾದ ದೈವೋಕ್ತಿ : ದೇದಾದಿನ ಜನರೇ, ಒಂಟೆ ಸವಾರರೇ, ಅರೇಬಿಯದ ಮರುಭೂಮಿಯಲ್ಲಿ ಬೀಡು ಬಿಡುವವರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅರಬಿಯ ವಿಷಯವಾದ ದೈವೋಕ್ತಿ. ಸಾರ್ಥವಾಹರಾದ ದೇದಾನ್ಯರೇ, ಮರುಭೂವಿುಯ ಪೊದೆಗಳಲ್ಲಿ ಇಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅರೇಬಿಯದ ವಿಷಯವಾದ ಪ್ರವಾದನೆ: ಓ ದೇದಾನ್ಯರ ವ್ಯಾಪಾರಿಗಳ ಗುಂಪಿನವರೇ ಅರೇಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 21:13
14 ತಿಳಿವುಗಳ ಹೋಲಿಕೆ  

ರೋಧೆ ದ್ವೀಪದ ಜನರು ನಿನ್ನೊಂದಿಗೆ ವ್ಯಾಪಾರ ಮಾಡಿದರು. ನೀನು ಅನೇಕ ಕಡೆಗಳಲ್ಲಿ ವ್ಯಾಪಾರ ಮಾಡಿದಿ. ಜನರು ದಂತವನ್ನೂ ಬೀಟೆ ಮರಗಳನ್ನೂ ತಂದು ನಿನ್ನೊಂದಿಗೆ ವ್ಯಾಪಾರ ಮಾಡಿದರು.


ಕೆಟೂರಳು ಅಬ್ರಹಾಮನ ದಾಸಿಯಾಗಿದ್ದಳು. ಆಕೆಗೆ ಅಬ್ರಹಾಮನಲ್ಲಿ ಹುಟ್ಟಿದ ಗಂಡುಮಕ್ಕಳು ಯಾರೆಂದರೆ: ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್ ಮತ್ತು ಶೂಹ. ಯೊಕ್ಷಾನನ ಮಕ್ಕಳು ಯಾರೆಂದರೆ: ಶೆಬ ಮತ್ತು ದೆದಾನ್.


ಯೊಕ್ಷಾನನು ಶೆಬಾ ಮತ್ತು ದೆದಾನ್ ಎಂಬವರ ತಂದೆ. ದೆದಾನನ ಸಂತತಿಯವರು: ಅಶ್ಶೂರ್ಯರು ಲೆಟೂಶ್ಯರು ಮತ್ತು ಲೆಯುಮ್ಯರು.


ಆದ್ದರಿಂದ ಹಾಗರಳು ಅರೇಬಿಯಾದಲ್ಲಿರುವ ಸೀನಾಯಿ ಪರ್ವತದಂತಿದ್ದಾಳೆ. ಯೆಹೂದ್ಯರ ನಗರವಾದ ಜೆರುಸಲೇಮಿಗೆ ಆಕೆಯು ಅನುರೂಪವಾಗಿದ್ದಾಳೆ. ಈ ನಗರವು ಗುಲಾಮಗಿರಿಯಲ್ಲಿದೆ ಮತ್ತು ಅದರ ಜನರೆಲ್ಲರೂ ಧರ್ಮಶಾಸ್ತ್ರಕ್ಕೆ ಗುಲಾಮರಾಗಿದ್ದಾರೆ.


ಆದರೆ ಬಾಬಿಲೋನ್ ಇನ್ನು ಮುಂದೆ ಸುಂದರವಾಗಿರದು. ಮುಂದಿನ ದಿವಸಗಳಲ್ಲಿ, ಜನರು ಅಲ್ಲಿ ವಾಸಿಸರು. ಅರಬ್ಬಿಯರು ತಮ್ಮ ಗುಡಾರಗಳನ್ನು ಅಲ್ಲಿ ಹಾಕುವದಿಲ್ಲ. ಕುರುಬರು ತಮ್ಮ ಮಂದೆಯನ್ನು ಮೇಯಿಸಲು ಅಲ್ಲಿಗೆ ಬರುವದಿಲ್ಲ.


ಆಮೋಚನ ಮಗನಾದ ಯೆಶಾಯನಿಗೆ ಬಾಬಿಲೋನಿನ ಬಗ್ಗೆ ದೊರೆತ ದೈವಸಂದೇಶ:


ಕೂಷನ ಸಂತತಿಯವರು: ಸೆಬ, ಹವೀಲ, ಸಬ್ತ, ರಮ್ಮ ಮತ್ತು ಸಬ್ತೆಕ. ರಮ್ಮನ ಸಂತತಿಯವರು: ಶೆಬ ಮತ್ತು ದೆದಾನ್.


ಹಡಗುಗಳಿಂದ ಸಿಗುತ್ತಿದ್ದ ಬಂಗಾರವಲ್ಲದೆ ವ್ಯಾಪಾರಿಗಳಿಂದಲೂ ಅರೇಬಿಯಾದ ರಾಜರಿಂದಲೂ ರಾಜ್ಯಪಾಲರುಗಳಿಂದಲೂ ಬಂಗಾರವನ್ನು ಅವನು ಪಡೆಯುತ್ತಿದ್ದನು.


ಕೂಷನ ಗಂಡುಮಕ್ಕಳು: ಸೆಬಾ, ಹವೀಲ, ಸಬ್ತಾ, ರಗ್ಮ ಮತ್ತು ಸಬ್ತಕಾ. ರಗ್ಮನ ಗಂಡುಮಕ್ಕಳು: ಶೆಬಾ ಮತ್ತು ದೆದಾನ್.


ಅದಕ್ಕೆ ಕಾವಲುಗಾರ, “ಮುಂಜಾನೆ ಬರುತ್ತಿದೆ. ಆದರೆ ರಾತ್ರಿ ತಿರುಗಿ ಬರುತ್ತಿದೆ. ನೀನೇನಾದರೋ ಕೇಳಬೇಕಿದ್ದರೆ ಮತ್ತೆ ಬಂದು ವಿಚಾರಿಸು” ಎಂದು ಉತ್ತರಿಸಿದನು.


ದೆದಾನಿನ ನಿವಾಸಿಗಳೇ, ಓಡಿಹೋಗಿರಿ, ಅಡಗಿಕೊಳ್ಳಿರಿ; ಏಕೆಂದರೆ ಏಸಾವನು ಮಾಡಿದ ತಪ್ಪಿಗಾಗಿ ನಾನು ಅವನನ್ನು ದಂಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು