Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 21:15 - ಪರಿಶುದ್ದ ಬೈಬಲ್‌

15 ಅವರು ತಮ್ಮನ್ನು ಸಾಯಿಸಲಿಕ್ಕಿದ್ದ ಕತ್ತಿಯಿಂದ ತಪ್ಪಿಸಿಕೊಂಡು ಬಂದವರು. ಅವರು ತಮ್ಮನ್ನು ಹೊಡೆಯಲು ಸಿದ್ಧವಾಗಿದ್ದ ಬಾಣಗಳಿಂದ ಪಾರಾಗಿ ಬಂದವರು. ಅವರು ಘೋರ ರಣರಂಗದಿಂದ ಓಡಿಬಂದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಏಕೆಂದರೆ ಹಿರಿದ ಕತ್ತಿ, ಬಾಗಿದ ಬಿಲ್ಲು, ಯುದ್ಧದ ಬಾಧೆ ಇವುಗಳಿಂದ ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವರೆಲ್ಲರು ಖಡ್ಗದಿಂದ, ಹಿರಿದ ಕತ್ತಿಯಿಂದ, ಹೂಡಿದ ಬಿಲ್ಲಿನಿಂದ, ಯುದ್ಧದ ಬಾಧೆಯಿಂದ ತಪ್ಪಿಸಿಕೊಂಡು ಓಡಿಬಂದಿರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕತ್ತಿ, ಹಿರಿದ ಕತ್ತಿ, ಬಾಗಿದ ಬಿಲ್ಲು, ಯುದ್ಧದ ಬಾಧೆ, ಇವುಗಳ ಕಡೆಯಿಂದ ಓಡಿಹೋಗುತ್ತಿದ್ದಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಏಕೆಂದರೆ ಹಿರಿದ ಖಡ್ಗ, ಬಾಗಿದ ಬಿಲ್ಲು, ಕಠಿಣ ಯುದ್ಧ ಇವುಗಳಿಂದ ತಪ್ಪಿಸಿಕೊಂಡು ಓಡಿ ಬಂದಿದ್ದಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 21:15
7 ತಿಳಿವುಗಳ ಹೋಲಿಕೆ  

ಆಗ ಗಾಯಗೊಂಡ ಜಿಂಕೆಯಂತೆ ಬಾಬಿಲೋನು ಓಡಿಹೋಗುವದು. ಅವರು ಕುರುಬನಿಲ್ಲದ ಕುರಿಗಳಂತೆ ಚದರಿ ಹೋಗುವರು. ಪ್ರತಿಯೊಬ್ಬನು ಹಿಂದಿರುಗಿ ತನ್ನ ದೇಶಕ್ಕೂ ತನ್ನ ಜನರ ಬಳಿಗೂ ಓಡುವನು.


ಆದರೆ ಶತ್ರುವು ಬಾಬಿಲೋನಿನವರನ್ನು ಹಿಂದಟ್ಟಿಕೊಂಡು ಹೋಗುವನು. ಶತ್ರುವು ಅವನನ್ನು ಹಿಡಿದು ತನ್ನ ಕತ್ತಿಯಿಂದ ಕೊಲ್ಲುವನು.


ದೇವರು ಗದರಿಸಿದಾಗ ಜನರು ಓಡಿಹೋಗುವರು. ಆ ಜನರು ಗಾಳಿಯಲ್ಲಿ ಹಾರಿಹೋಗುವ ಹೊಟ್ಟಿನಂತಿರುವರು; ಬಿರುಗಾಳಿಯು ಬಹುದೂರಕ್ಕೆ ಕೊಂಡೊಯ್ಯುವ ಬೇರಿಲ್ಲದ ಹಣಜಿಗಳಂತಿರುವರು.


ಅಧಿಪತಿಗಳೆಲ್ಲಾ ಒಟ್ಟಾಗಿ ಪಲಾಯನಗೈದರು. ಆದರೆ ಅವರೆಲ್ಲಾ ಬಿಲ್ಲುಗಳಿಲ್ಲದೆ ಹಿಡಿಯಲ್ಪಟ್ಟರು. ನಿಮ್ಮ ಎಲ್ಲಾ ಅಧಿಕಾರಿಗಳು ಒಟ್ಟಾಗಿ ಬಹು ದೂರಪ್ರದೇಶಗಳಿಗೆ ಓಡಿದರು. ಆದರೆ ಅವರೆಲ್ಲಾ ಹಿಡಿಯಲ್ಪಟ್ಟರು.


ಅಶ್ಶೂರವು ಕತ್ತಿಯಿಂದ ನಾಶವಾಗುವದು ಖಂಡಿತ. ಆದರೆ ಆ ಕತ್ತಿಯು ಮನುಷ್ಯನ ಕತ್ತಿಯಲ್ಲ. ಖಡ್ಗವು ಅವರನ್ನು ನುಂಗುವುದು, ಆದರೆ ಅದು ಮನುಷ್ಯನ ಖಡ್ಗವಲ್ಲ. ಅಶ್ಶೂರವು ದೇವರ ಖಡ್ಗದಿಂದ ಓಡಿಹೋಗುವದು. ಅದರ ಯೌವನಸ್ಥರು ಸೆರೆಹಿಡಿಯಲ್ಪಟ್ಟು ಗುಲಾಮರನ್ನಾಗಿ ಮಾಡಲ್ಪಡುವರು.


ನಿನ್ನ ಬಲಯುತವಾದ ಸ್ವರವು ಜನರಿಗೆ ಹೆದರಿಕೆಯನ್ನು ಉಂಟುಮಾಡುತ್ತದೆ, ಅವರು ನಿನ್ನಿಂದ ಓಡಿಹೋಗುವರು. ನಿನ್ನ ಮಹೋನ್ನತೆಯು ಜನಾಂಗಗಳನ್ನು ದಿಕ್ಕಾಪಾಲಾಗಿ ಮಾಡುತ್ತದೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು