ಯೆಶಾಯ 21:16 - ಪರಿಶುದ್ದ ಬೈಬಲ್16 ನನ್ನ ಒಡೆಯನಾದ ಯೆಹೋವನು ಈ ವಿಷಯಗಳು ಸಂಭವಿಸುವವೆಂದು ಹೇಳಿದನು. ಆತನು ಹೇಳಿದ್ದೇನೆಂದರೆ: “ಇನ್ನೊಂದು ವರ್ಷದಲ್ಲಿ ಕೂಲಿಗಾರನು ತನ್ನ ಸಮಯವನ್ನು ಲೆಕ್ಕಿಸುವಂತೆ ಕೇದಾರಿನ ಘನತೆಯೆಲ್ಲವೂ ಹೋಗಿ ಬಿಡುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಕರ್ತನು ನನಗೆ ಹೇಳುವುದೇನೆಂದರೆ, “ಕೂಲಿಯವನ ವರ್ಷಗಳಂತೆ ಒಂದು ವರ್ಷದೊಳಗೆ ಕೇದಾರಿನ ಸಕಲ ವೈಭವವು ಇಲ್ಲವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸರ್ವೇಶ್ವರ ನನಗೆ ಹೀಗೆಂದರು : “ಗುಲಾಮಗಿರಿಯ ವಾಯಿದೆಯ ಪ್ರಕಾರ, ಒಂದು ವರ್ಷದೊಳಗೆ ಕೇದಾರಿನ ಸಕಲ ವೈಭವ ಗತಿಸಿಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಕರ್ತನು ನನಗೆ ಹೇಳಿರುವದೇನಂದರೆ - ಆಳಿನ ವರುಷ ವಾಯಿದೆಗೆ ಸರಿಯಾದ ಒಂದು ವರುಷಕ್ಕೇ ಕೇದಾರಿನ ಸಕಲ ವೈಭವವು ಇಲ್ಲವಾಗುವದು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಏಕೆಂದರೆ ಕರ್ತರು ನನಗೆ ಹೀಗೆ ಹೇಳುತ್ತಾರೆ: “ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವುದು. ಅಧ್ಯಾಯವನ್ನು ನೋಡಿ |