ಯೆಶಾಯ 21:3 - ಪರಿಶುದ್ದ ಬೈಬಲ್3 ನಾನು ಆ ಭಯಂಕರ ಸಂಗತಿಗಳನ್ನು ನೋಡಿದ್ದರಿಂದ ಈಗ ಭಯಪೀಡಿತನಾಗಿದ್ದೇನೆ. ಭಯದಿಂದ ನನ್ನ ಹೊಟ್ಟೆಯು ನೋಯುತ್ತಿದೆ. ಆ ನೋವು ಪ್ರಸವವೇದನೆಯಂತಿದೆ. ನಾನು ಕೇಳುವ ವಿಷಯಗಳು ನನ್ನನ್ನು ಭಯಪಡಿಸಿವೆ; ನಾನು ನೋಡುವ ವಿಷಯಗಳು ನನ್ನನ್ನು ನಡುಗಿಸುತ್ತಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದುದ್ದರಿಂದ ನನ್ನ ಸೊಂಟದಲ್ಲಿ ನೋವು ತುಂಬಿದೆ, ಪ್ರಸವವೇದನೆಯಂತಿರುವ ವೇದನೆಯು ನನ್ನನ್ನು ಹಿಡಿದಿದೆ, ಕಿವಿ ಕಿವುಡಾಗುವಷ್ಟು ಸಂಕಟಪಡುತ್ತೇನೆ, ಕಣ್ಣು ಕುರುಡಾಗುವಷ್ಟು ತತ್ತರಗೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಾನು ಕಂಡ ಈ ಭೀಕರ ದರ್ಶನದಿಂದ ನನಗೆ ಸೊಂಟ ಮುರಿದಂತಾಗಿದೆ. ಹೆರಿಗೆಯಂಥ ಬೇನೆಯುಂಟಾಗಿದೆ. ಕಿವಿ ಕಿತ್ತುಹೋಗುವಂತಿದೆ. ಕಣ್ಣು ಕರುಡಾಗುವಂತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಈ ದರ್ಶನದಿಂದ ನನ್ನ ಸೊಂಟದಲ್ಲಿ ನೋವು ತುಂಬಿದೆ, ಪ್ರಸವವೇದನೆಯಂತಿರುವ ವೇದನೆಯು ನನ್ನನ್ನು ಹಿಡಿದಿದೆ, ಕಿವಿ ಕಿವುಡಾಗುವಷ್ಟು ಯಾತನೆಪಡುತ್ತೇನೆ, ಕಣ್ಣು ಕುರುಡಾಗುವಷ್ಟು ತತ್ತರಗೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದ್ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ. ಕಿವಿ ಕಿವುಡಾಗುವಷ್ಟು ಸಂಕಟಪಡುತ್ತೇನೆ. ಕಣ್ಣು ಕುರುಡಾಗುವಷ್ಟು ಭ್ರಾಂತನಾಗಿದ್ದೇನೆ. ಅಧ್ಯಾಯವನ್ನು ನೋಡಿ |