ಯೆಶಾಯ 21:5 - ಪರಿಶುದ್ದ ಬೈಬಲ್5 ಜನರಾದರೋ, “ಊಟ ಬಡಿಸಿರಿ! ತಿನ್ನೋಣ, ಕುಡಿಯೋಣ” ಎಂದು ಹೇಳುತ್ತಿದ್ದಾರೆ. ಅದೇ ಸಮಯದಲ್ಲಿ ಸೈನಿಕರು, “ಕಾವಲುಗಾರರನ್ನು ಇರಿಸಿರಿ, ಸೇನಾಪತಿಗಳೇ ಎದ್ದೇಳಿರಿ, ನಿಮ್ಮ ಗುರಾಣಿಗಳನ್ನು ಉಜ್ಜಿ ನಯಗೊಳಿಸಿರಿ” ಎಂದು ಹೇಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಔತಣಕ್ಕೆ ಸಿದ್ಧಪಡಿಸಿಕೊಂಡು, ಚಾಪೆಗಳನ್ನು ಹಾಸಿಕೊಂಡು ತಿಂದು, ಕುಡಿಯುತ್ತಾರೆ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಹಚ್ಚಿ ಸಿದ್ಧವಾಗಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಔತಣ ಸಿದ್ಧವಾಗಿದೆ, ಚಾಪೆ ಹಾಸಿದ್ದಾರೆ. ಅತಿಥಿಗಳು ಭೋಜನ ಮಾಡುತ್ತಾ ಕುಡಿಯುತ್ತಾ ಇದ್ದಾರೆ. ಇದೋ, ಇದ್ದಕ್ಕಿದ್ದಂತೆ ಕೂಗೊಂದು ಕೇಳಿಬರುತ್ತಿದೆ : “ಪ್ರಭುಗಳೇ, ಎದ್ದೇಳಿ, ಗುರಾಣಿಗಳನ್ನು ಅಣಿಗೊಳಿಸಿರಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಔತಣಕ್ಕೆ ಸಿದ್ಧಪಡಿಸಿಕೊಂಡು ಚಾಪೆಗಳನ್ನು ಹಾಸಿಕೊಂಡು ಉಂಡು ಕುಡಿಯುತ್ತಿದ್ದಾರಲ್ಲಾ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಬಳಿಯಿರಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಔತಣ ಸಿದ್ಧವಾಗಿದೆ. ಬುರುಜಿನ ಮೇಲೆ ಕಾವಲಿರು. ಉಣ್ಣು, ಕುಡಿ, ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಹಚ್ಚಿರಿ. ಅಧ್ಯಾಯವನ್ನು ನೋಡಿ |
ನಿಮ್ಮ ಬಾಣಗಳನ್ನು ಮಸೆಯಿರಿ. ನಿಮ್ಮ ಕವಚಗಳನ್ನು ಧರಿಸಿರಿ. ಯೆಹೋವನು ಮೇದ್ಯರ ರಾಜರನ್ನು ಪ್ರಚೋದಿಸಿದ್ದಾನೆ. ಬಾಬಿಲೋನನ್ನು ನಾಶಪಡಿಸಬೇಕೆಂಬ ಉದ್ದೇಶದಿಂದ ಆತನು ಅವರನ್ನು ಪ್ರಚೋದಿಸಿದ್ದಾನೆ. ಯೆಹೋವನು ಬಾಬಿಲೋನಿನ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಾನೆ. ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿದ್ದ ಯೆಹೋವನ ಪವಿತ್ರ ಆಲಯವನ್ನು ನಾಶಮಾಡಿತು. ಆದ್ದರಿಂದ ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುವನು.