Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 21:6 - ಪರಿಶುದ್ದ ಬೈಬಲ್‌

6 ನನ್ನ ಒಡೆಯನು ನನಗೆ, “ಹೋಗಿ ಈ ನಗರವನ್ನು ಕಾಯಲು ಒಬ್ಬ ಮನುಷ್ಯನನ್ನು ಕಂಡುಹಿಡಿ. ಅವನು ಏನೂ ನೋಡಿದರೂ ನಮಗೆ ತಿಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕರ್ತನು ನನಗೆ ಹೇಳುವುದೇನೆಂದರೆ, “ಹೋಗು, ಕಾವಲುಗಾರನನ್ನು ನೇಮಿಸು; ಅವನು ಕಂಡದ್ದನ್ನು ತಿಳಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ (ಸರ್ವೇಶ್ವರ ಸ್ವಾಮಿ) ನನಗೆ ಹೀಗೆಂದರು : “ಹೋಗು, ಪಹರೆಯೊಬ್ಬನನ್ನು ಇಡು. ಅವನು ಕಂಡದ್ದನ್ನು ವರದಿಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕರ್ತನು ನನಗೆ ಹೇಳಿರುವದೇನಂದರೆ - ಕಾವಲುಗಾರನನ್ನು ಇಡು, ನಡೆ; ಕಂಡದ್ದನ್ನು ತಿಳಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಕರ್ತರು ನನಗೆ ಹೇಳಿದ್ದೇನೆಂದರೆ, “ಹೋಗು, ಕಾವಲುಗಾರರನ್ನು ನೇಮಿಸು. ಅವನು ಕಂಡದ್ದನ್ನು ತಿಳಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 21:6
8 ತಿಳಿವುಗಳ ಹೋಲಿಕೆ  

“ನರಪುತ್ರನೇ, ನಾನು ನಿನ್ನನ್ನು ಇಸ್ರೇಲರಿಗೆ ಕಾವಲುಗಾರನನ್ನಾಗಿ ಮಾಡಿದ್ದೇನೆ. ನಾನು ಅವರಿಗೆ ಸಂಭವಿಸುವ ಕೆಟ್ಟ ವಿಷಯಗಳನ್ನು ನಿನಗೆ ಹೇಳುತ್ತಿದ್ದೇನೆ. ಮತ್ತು ನೀನು ನನ್ನ ಪರವಾಗಿ ಅವರನ್ನು ಎಚ್ಚರಿಸು.


ಜೆರುಸಲೇಮೇ, ನಿನ್ನ ಗೋಡೆಯ ಮೇಲೆ ನಾನು ಕಾವಲುಗಾರರನ್ನು ಇಟ್ಟಿರುತ್ತೇನೆ. ಆ ಕಾವಲುಗಾರರು ಮೌನವಾಗಿರುವದಿಲ್ಲ. ಅವರು ಹಗಲಿರುಳು ಪ್ರಾರ್ಥಿಸುತ್ತಾ ಇರುವರು. ಕಾವಲುಗಾರರೇ, ನೀವು ಯೆಹೋವನಿಗೆ ಪ್ರಾರ್ಥಿಸುತ್ತಾ ಇರಬೇಕು. ಆತನ ವಾಗ್ದಾನಗಳನ್ನು ನೀವು ಆತನ ನೆನಪಿಗೆ ತರಬೇಕು. ಪ್ರಾರ್ಥಿಸುವುದನ್ನು ಎಂದಿಗೂ ನಿಲ್ಲಿಸಬೇಡಿ.


ನಗರದಲ್ಲಿ ಗಸ್ತು ತಿರುಗುವ ಕಾವಲುಗಾರರನ್ನು ಕಂಡು, “ನನ್ನ ಪ್ರಿಯನನ್ನು ನೋಡಿದಿರಾ?” ಎಂದು ಕೇಳಿದೆನು.


ರಾಜನಿಗೆ ಹೇಳುವುದಕ್ಕಾಗಿ ಕಾವಲುಗಾರನು ಜೋರಾಗಿ ಕೂಗಿದನು. ರಾಜನಾದ ದಾವೀದನು, “ಆ ಮನುಷ್ಯನು ಒಬ್ಬಂಟಿಗನಾಗಿದ್ದರೆ ಅವನು ಸುದ್ದಿಯನ್ನು ತರುತ್ತಿದ್ದಾನೆ” ಎಂದನು. ಆ ಮನುಷ್ಯನು ಓಡುತ್ತಾ ನಗರದ ಹತ್ತಿರಕ್ಕೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು