ಯೆಶಾಯ 21:8 - ಪರಿಶುದ್ದ ಬೈಬಲ್8 ಒಂದು ದಿವಸ ಆ ಕಾವಲುಗಾರನು, “ನನ್ನ ಒಡೆಯನೇ, ಪ್ರತಿ ದಿನವೂ ನಾನು ಹಗಲಿರುಳು ಕಾವಲಿನ ಬುರುಜಿನಲ್ಲಿ ನಿಂತುಕೊಂಡು ಕಾವಲು ಕಾಯುತ್ತಿದ್ದೇನೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಬಳಿಕ ಅವನು ಸಿಂಹದಂತೆ ಕೂಗಿ, “ಕರ್ತನೇ, ಪ್ರತಿ ದಿನವು ನಾನು ಕಾವಲಿನ ಬುರುಜಿನ ಮೇಲೆ ನಿಂತಿದ್ದೇನೆ, ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಬಳಿಕ ಪಹರೆಯವನು ಸಿಂಹಧ್ವನಿಯಿಂದ : “ಸ್ವಾಮಿ, ಹಗಲೆಲ್ಲಾ ಕಾವಲು ಗೋಪುರದಲ್ಲಿ ನಿಂತಿದ್ದೇನೆ. ರಾತ್ರಿಯಲ್ಲೂ ಕಾವಲುಗೈದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಬಳಿಕ ಅವನು ಸಿಂಹಧ್ವನಿಯಿಂದ - ಕರ್ತನೇ, ಹಗಲೆಲ್ಲಾ ಕೋವರದಲ್ಲಿ ನಿಂತಿದ್ದೇನೆ, ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಬಳಿಕ ಅವನು ಸಿಂಹದಂತೆ ಕೂಗಿ ಹೀಗೆ ಹೇಳಿದನು, “ನನ್ನ ಒಡೆಯನೇ, ನಾನು ಹಗಲೆಲ್ಲಾ ಕಾವಲಿನ ಬುರುಜಿನ ಮೇಲೆ ನಿಂತಿದ್ದೇನೆ. ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆನ್ನುತ್ತಾನೆ: “ಜೋರ್ಡನ್ ನದಿಯ ಸಮೀಪದ ದಟ್ಟವಾದ ಅರಣ್ಯದಿಂದ ಒಮ್ಮೆ ಒಂದು ಸಿಂಹವು ಬರುವುದು. ಆ ಸಿಂಹವು ಜನರ ಸಾಕುಪ್ರಾಣಿಗಳಿದ್ದ ಹೊಲಗಳಿಗೆ ನುಗ್ಗುವುದು. ಆ ಪ್ರಾಣಿಗಳೆಲ್ಲ ಓಡಿಹೋಗುವವು. ನಾನು ಆ ಸಿಂಹದಂತಾಗುವೆನು. ನಾನು ಬಾಬಿಲೋನನ್ನು ಅದರ ಪ್ರದೇಶದಿಂದ ಓಡಿಸಿಬಿಡುವೆನು. ಈ ಕಾರ್ಯ ಮಾಡಲು ನಾನು ಯಾರನ್ನು ಆರಿಸಲಿ? ನನ್ನತೆ ಯಾರೂ ಇಲ್ಲ. ನನ್ನನ್ನು ಪ್ರತಿಭಟಿಸುವವರು ಯಾರೂ ಇಲ್ಲ. ಆದ್ದರಿಂದ ನಾನೇ ಅದನ್ನು ಮಾಡುತ್ತೇನೆ. ನನ್ನನ್ನು ಓಡಿಸಲು ಯಾವ ಕುರುಬನೂ ಬರಲಾರನು. ನಾನು ಬಾಬಿಲೋನಿನ ಜನರನ್ನು ಓಡಿಸಿಬಿಡುವೆನು.”
“ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿನಿಂದ ಫಕ್ಕನೆ ಒಂದು ಸಿಂಹ ಬರುವದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಹಟ್ಟಿಗಳಿಗೆ ನುಗ್ಗುವುದು. ನಾನು ಆ ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಆ ಜನರನ್ನು ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನ್ನನ್ನು ತಡೆಯಲಾರರು. ನನ್ನತೆ ಯಾರೂ ಇಲ್ಲ. ಯಾರೂ ನನ್ನನ್ನು ಪ್ರತಿಭಟಿಸುವದಿಲ್ಲ. ಅವರ ನಾಯಕರಲ್ಲಿ ಯಾರೂ ನನ್ನ ವಿರುದ್ಧ ನಿಲ್ಲುವದಿಲ್ಲ.”