ಯೆಶಾಯ 22:1 - ಪರಿಶುದ್ದ ಬೈಬಲ್1 ದಿವ್ಯದರ್ಶನದ ಕಣಿವೆಯ ವಿಷಯವಾಗಿ ದುಃಖದ ಸಂದೇಶ: ಜನಗಳೇ, ನಿಮಗೆ ಏನಾಯಿತು? ನಿಮ್ಮ ಮನೆ ಮಾಳಿಗೆಯ ಮೇಲೆ ಯಾಕೆ ಅಡಗಿರುತ್ತೀರಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದಿವ್ಯದರ್ಶನದ ಕಣಿವೆಯ ವಿಷಯವಾದ ದೈವೋಕ್ತಿ. ಯಾವ ಕಾರಣಕ್ಕಾಗಿ ನಿನ್ನ ಜನರೆಲ್ಲರೂ ಮಾಳಿಗೆಗಳನ್ನು ಹತ್ತಿದರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ‘ದಿವ್ಯದರ್ಶನದ ಕಣಿವೆ’ಯ ಕುರಿತ ದೈವೋಕ್ತಿ : ಏನಾಯಿತು? ಜನರೆಲ್ಲರೂ ಮನೆಮಾಳಿಗೆಗಳನ್ನು ಏರಿ ಸಡಗರದಿಂದ ಇರುವುದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದಿವ್ಯದರ್ಶನದ ತಗ್ಗಿನ ವಿಷಯವಾದ ದೈವೋಕ್ತಿ. ನಿನಗೆ ಏನಾಯಿತು? ನಿನ್ನ ಜನರೆಲ್ಲರೂ ಮಾಳಿಗೆಗಳನ್ನು ಹತ್ತಿದ್ದೇಕೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದಿವ್ಯ ದರ್ಶನದ ತಗ್ಗಿನ ವಿಷಯವಾದ ಪ್ರವಾದನೆ: ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು? ಅಧ್ಯಾಯವನ್ನು ನೋಡಿ |
ಬಾಬಿಲೋನಿನ ಸೈನ್ಯವು ಈಗಾಗಲೇ ಜೆರುಸಲೇಮ್ ನಗರದ ಮೇಲೆ ಧಾಳಿ ಮಾಡುತ್ತಿದೆ. ಸೈನಿಕರು ಬೇಗನೆ ನಗರವನ್ನು ಪ್ರವೇಶಿಸಿ ಅದಕ್ಕೆ ಬೆಂಕಿಹಚ್ಚಿ ಸುಟ್ಟುಹಾಕುವರು. ಜೆರುಸಲೇಮಿನ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರಾದ ಬಾಳನಿಗೆ ನೈವೇದ್ಯವನ್ನು ಅರ್ಪಿಸಿ ನಾನು ಕೋಪಿಸಿಕೊಳ್ಳುವಂತೆ ಮಾಡಿದ ಕೆಲವು ಮನೆಗಳು ಈ ನಗರದಲ್ಲಿವೆ. ಅದಲ್ಲದೆ ಕೆಲವು ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸಿರುವರು. ಬಾಬಿಲೋನಿನ ಸೈನ್ಯವು ಆ ಮನೆಗಳನ್ನು ಸುಟ್ಟುಹಾಕುವುದು.