Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 22:14 - ಪರಿಶುದ್ದ ಬೈಬಲ್‌

14 ಸರ್ವಶಕ್ತನಾದ ಯೆಹೋವನು ನನಗೆ ತಿಳಿಸಿದ ಈ ಮಾತುಗಳನ್ನು ಕಿವಿಯಾರೆ ಕೇಳಿದೆನು: “ನೀವು ಕೆಟ್ಟಕಾರ್ಯಗಳನ್ನು ನಡೆಸಿ ಅಪರಾಧಿಗಳಾಗಿರುವಿರಿ. ನಿಮ್ಮ ದುಷ್ಟತ್ವವು ಕ್ಷಮಿಸಲ್ಪಡುವ ಮುಂಚೆ ನೀವು ಸಾಯುವಿರಿ ಎಂದು ಖಂಡಿತವಾಗಿ ಹೇಳುತ್ತೇನೆ” ಇದು ನನ್ನ ಒಡೆಯನಾದ ಸರ್ವಶಕ್ತನ ನುಡಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗಿರಲು, ಸೇನಾಧೀಶ್ವರನಾದ ಯೆಹೋವನು ನನ್ನ ಕಿವಿಗಳಲ್ಲಿ ಪ್ರಕಟಿಸಿದ್ದೇನೆಂದರೆ, “ನೀವು ಸಾಯುವ ತನಕ ಈ ಅಧರ್ಮಕ್ಕೆ ಪ್ರಾಯಶ್ಚಿತ್ತವು ಇಲ್ಲವೇ ಇಲ್ಲ ಎಂದು ಸೇನಾಧೀಶ್ವರನಾಗಿರುವ ಯೆಹೋವನೆಂಬ ಕರ್ತನಾದ ನಾನು ನುಡಿದಿದ್ದೇನೆ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇಂತಿರಲು, ಸೇನಾಧೀಶ್ವರ ಸರ್ವೇಶ್ವರ ನನ್ನ ಕಿವಿಯಲ್ಲಿ ಉಸುರಿದ್ದೇನೆಂದರೆ : “ಇವರು ಸಾಯುವತನಕ ಇವರಿಗೆ ಪಾಪಕ್ಷಮೆ ದೊರಕುವುದಿಲ್ಲ. ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನ್ನ ಕಿವಿಗೆ ಗೋಚರಪಡಿಸಿದ್ದೇನಂದರೆ - ನೀವು ಸಾಯುವ ತನಕ ಈ ಅಧರ್ಮಕ್ಕೆ ಪ್ರಾಯಶ್ಚಿತ್ತವು ಇಲ್ಲವೇ ಇಲ್ಲ ಎಂದು ಸೇನಾಧೀಶ್ವರನಾಗಿರುವ ಯೆಹೋವನೆಂಬ ಕರ್ತನಾದ ನಾನು ನುಡಿದಿದ್ದೇನೆ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದು ಏನೆಂದರೆ: “ನಿಶ್ಚಯವಾಗಿ ಈ ದುಷ್ಕೃತ್ಯಗಳನ್ನು ನೀವು ಸಾಯುವ ತನಕ ಮನ್ನಿಸುವುದೇ ಇಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 22:14
17 ತಿಳಿವುಗಳ ಹೋಲಿಕೆ  

“‘ನಿನ್ನ ವಿರುದ್ಧ ನನಗಿರುವ ಕೋಪ ತೃಪ್ತಿಗೊಳ್ಳುವ ತನಕ ನೀನು ಮತ್ತೆಂದಿಗೂ ಶುದ್ಧಳಾಗುವುದಿಲ್ಲ. ನಿನ್ನನ್ನು ತೊಳೆದು ಕಲೆಗಳನ್ನು ತೆಗೆಯಲು ನನಗೆ ಮನಸ್ಸಿತ್ತು. ಆದರೆ ಕಲೆಗಳು ಹೋಗಲಿಲ್ಲ. ಆದ್ದರಿಂದ ನಿನ್ನ ಮೇಲಿನ ನನ್ನ ಕೋಪವು ತಣ್ಣಗಾಗುವ ತನಕ ನಾನು ನಿನ್ನನ್ನು ತೊಳೆಯುವುದೇ ಇಲ್ಲ.


ಸರ್ವಶಕ್ತನಾದ ಯೆಹೋವನ ನುಡಿಗಳಿವು. ನಾನು ಈ ಮಾತುಗಳನ್ನು ಕಿವಿಯಾರೆ ಕೇಳಿದೆನು: “ಈಗ ಅನೇಕ ಮನೆಗಳಿವೆ, ಆದರೆ ನಾನು ಖಂಡಿತವಾಗಿ ಹೇಳುವುದೇನೆಂದರೆ ಎಲ್ಲಾ ಮನೆಗಳು ಕೆಡವಲ್ಪಡುವವು. ಈಗ ಭವ್ಯವಾದ ಬಂಗಲೆಗಳಿವೆ, ಆದರೆ ಅವುಗಳೆಲ್ಲಾ ಬರಿದಾಗುವವು.


ಆದಕಾರಣವೇ, ಏಲಿಯ ಕುಟುಂಬವು ಅರ್ಪಿಸುವ ಯಜ್ಞವಾಗಲಿ ಧಾನ್ಯನೈವೇದ್ಯವಾಗಲಿ ಅವರ ಪಾಪಗಳಿಗೆ ಪ್ರಾಯಶ್ಚಿತ್ತವಾಗುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.


ನನ್ನ ಒಡೆಯನಾದ ಯೆಹೋವನು ಒಂದು ಕಾರ್ಯವನ್ನು ಮಾಡಲು ನಿರ್ಧರಿಸಬಹುದು. ಆದರೆ ಆತನು ಹಾಗೆ ಮಾಡುವ ಮುಂಚಿತವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ಮುಂತಿಳಿಸುವನು.


ನೀವು ತಪ್ಪಿತಸ್ಥರಾಗಿದ್ದೀರಿ. ನೀವು ಬಿರುಕು ಬಿಟ್ಟಿರುವ ಎತ್ತರದ ಗೋಡೆಯಂತಿದ್ದೀರಿ. ಆ ಗೋಡೆಯು ಇದ್ದಕ್ಕಿದ್ದಂತೆ ನೆಲಕ್ಕುರುಳಿ ಚೂರುಚೂರಾಗುವದು. ಒಳ್ಳೆಯ ಸಮಯವು ಬರುತ್ತಿದೆ.


ಇಗೋ, ಈ ಲೋಕದ ಜನರು ಮಾಡಿದ ಪಾಪಕೃತ್ಯಗಳಿಗೆ ನ್ಯಾಯತೀರಿಸಲು ಯೆಹೋವನು ತನ್ನ ಸ್ಥಳದಿಂದ ಎದ್ದಿದ್ದಾನೆ. ಭೂಮಿಯು ತನ್ನಲ್ಲಿರುವ ರಕ್ತವನ್ನು ತೋರಿಸುವದು. ಭೂಮಿಯು ಇನ್ನುಮುಂದೆ ಸತ್ತವರನ್ನು ಮರೆಮಾಡುವುದಿಲ್ಲ.


ದೇವರು ಹೇಳುವುದೇನೆಂದರೆ: “ಈ ಲೋಕಕ್ಕೆ ನಾನು ಕೆಡುಕನ್ನು ಉಂಟುಮಾಡುವೆನು. ದುಷ್ಟಜನರನ್ನು ಅವರ ಪಾಪಗಳಿಗಾಗಿ ನಾನು ಶಿಕ್ಷಿಸುವೆನು. ಅಹಂಕಾರಿಗಳು ಗರ್ವವನ್ನು ಕಳೆದುಕೊಳ್ಳುವಂತೆ ಮಾಡುವೆನು; ಕೀಳುಜನರ ಹೊಗಳಿಕೆಗಳನ್ನು ನಿಲ್ಲಿಸುವೆನು.


ಹಿಂದಿನ ದಿನ, ಯೆಹೋವನು ಸಮುವೇಲನಿಗೆ,


ಆದರೆ ಯೆಹೋವನು ಜ್ಞಾನವಂತನಾಗಿದ್ದಾನೆ. ಆತನೇ ಅವರಿಗೆ ವಿರುದ್ಧವಾಗಿ ಸಂಕಟಗಳನ್ನು ಬರಮಾಡುವನು. ದೇವರ ಆಜ್ಞೆಯನ್ನು ಜನರು ಬದಲಾಯಿಸಲಾಗುವದಿಲ್ಲ. ಯೆಹೋವನು ಎದ್ದು ದುಷ್ಟಜನರ (ಯೆಹೂದ) ವಿರುದ್ಧ ಯುದ್ಧ ಮಾಡುವನು. ಅವರಿಗೆ ಸಹಾಯ ಕೊಡುವವರ (ಈಜಿಪ್ಟ್) ವಿರುದ್ಧವಾಗಿಯೂ ಯುದ್ಧ ಮಾಡುವನು.


ನಿಮ್ಮ ಪಾಪಗಳೂ ನಿಮ್ಮ ಪಿತೃಗಳ ಪಾಪಗಳೂ ಒಂದೇಯಾಗಿವೆ. ಇದು ಯೆಹೋವನ ನುಡಿ. ನಿಮ್ಮ ಪೂರ್ವಿಕರು ಬೆಟ್ಟಗಳ ಮೇಲೆ ಧೂಪಸುಟ್ಟು ಪಾಪಮಾಡಿದರು. ಅವರು ಆ ಬೆಟ್ಟಗಳ ಮೇಲೆ ನನ್ನನ್ನು ಅವಮಾನಪಡಿಸಿದರು. ಆದರೆ ನಾನು ಅವರನ್ನು ಮೊದಲು ಶಿಕ್ಷಿಸಿದೆನು. ಅವರಿಗೆ ತಕ್ಕ ಶಿಕ್ಷೆಯನ್ನು ಕೊಟ್ಟೆನು.”


ಆ ಪಟ್ಟಣದಲ್ಲಿ ಹುಟ್ಟಿದ ಶಿಶುಗಳೆಲ್ಲಾ ಜೀವಿಸುವವು. ಯಾವ ಮಗುವೇ ಆಗಲಿ ಹುಟ್ಟಿದ ಕೂಡಲೇ ಸಾಯುವದಿಲ್ಲ. ಆ ಪಟ್ಟಣದ ನಿವಾಸಿಗಳಲ್ಲಿ ಯಾರೂ ಕಡಿಮೆ ಆಯುಷ್ಯದಿಂದ ಸಾಯುವದಿಲ್ಲ. ಪ್ರತಿಯೊಂದು ಮಗುವೂ ದೀರ್ಘಾಯುಷ್ಯವನ್ನು ಹೊಂದುವದು. ಪ್ರತಿಯೊಬ್ಬ ಯುವಕನೂ ಬಹಳ ಕಾಲ ಜೀವಿಸುವನು. ಆಗ ನೂರು ವರ್ಷ ಪ್ರಾಯದವನು ಸಹ ಯೌವನಸ್ಥನೆಂದು ಕರೆಯಲ್ಪಡುವನು. ಒಬ್ಬನು ನೂರು ವರ್ಷವಾದರೂ ಬಾಳದಿದ್ದರೆ, ಜನರು ಅವನನ್ನು ಶಾಪ ಹೊಂದಿದವನೆಂದು ಹೇಳುವರು.


ಸೌಲನ ಮಗಳಾದ ಮೀಕಲಳು ಬಂಜೆಯಾಗಿ ಉಳಿದಳು. ಅವಳು ಮಕ್ಕಳೇ ಇಲ್ಲದೆ ಸತ್ತುಹೋದಳು.


ಯೆಹೋವನು “ಯಾಕೋಬನ ಮಹಿಮೆ” ಎಂಬ ತನ್ನ ಹೆಸರಿನ ಮೇಲೆ ಆಣೆಯಿಟ್ಟು ವಾಗ್ದಾನ ಮಾಡಿದ್ದಾನೆ. “ಆ ಜನರು ಮಾಡಿದ ಕೃತ್ಯಗಳನ್ನು ನಾನು ಎಂದಿಗೂ ಮರೆಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು