Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 22:20 - ಪರಿಶುದ್ದ ಬೈಬಲ್‌

20 ಆ ಸಮಯದಲ್ಲಿ ನನ್ನ ಸೇವಕನೂ ಹಿಲ್ಕೀಯನ ಮಗನೂ ಆದ ಎಲ್ಯಾಕೀಮನನ್ನು ನಾನು ಕರೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆ ದಿನದಲ್ಲಿ ನನ್ನ ಸೇವಕನೂ, ಹಿಲ್ಕೀಯನ ಮಗನೂ ಆದ ಎಲ್ಯಾಕೀಮನನ್ನು ಕರೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಆ ದಿನದಂದು, ನನ್ನ ದಾಸನೂ ಹಿಲ್ಕಿಯನ ಮಗನೂ ಆದ ಎಲ್ಯಾಕೀಮನನ್ನು ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆ ದಿನದಲ್ಲಿ ನನ್ನ ಸೇವಕನೂ ಹಿಲ್ಕೀಯನ ಮಗನೂ ಆದ ಎಲ್ಯಾಕೀಮನನ್ನು ಕರೆದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಆ ದಿನದಲ್ಲಿ ನನ್ನ ಸೇವಕನೂ, ಹಿಲ್ಕೀಯನ ಮಗನೂ ಆದ ಎಲ್ಯಾಕೀಮನನ್ನು ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 22:20
6 ತಿಳಿವುಗಳ ಹೋಲಿಕೆ  

ಜೆರುಸಲೇಮಿನಿಂದ ಮೂರು ಮಂದಿ ಸೇನಾದಂಡನಾಯಕನೊಂದಿಗೆ ಮಾತನಾಡಲು ಹೊರಟರು. ಅವರು ಯಾರೆಂದರೆ ಹಿಲ್ಕೀಯನ ಮಗನಾದ ಎಲ್ಯಾಕೀಮ್, ಆಸಾಫನ ಮಗನಾದ ಯೋವ ಮತ್ತು ಶೆಬ್ನ. ಎಲ್ಯಾಕೀಮನು ಅರಮನೆಯ ಆಡಳಿತಗಾರನಾಗಿದ್ದನು; ಯೋವನು ದಾಖಲೆಕಾರನಾಗಿದ್ದನು; ಶೆಬ್ನ ಅರಮನೆಯ ಕಾರ್ಯದರ್ಶಿಯಾಗಿದ್ದನು.


ಈ ಜನರು ರಾಜನನ್ನು ಕರೆದರು. ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಅದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಅವರನ್ನು ಭೇಟಿಮಾಡಲು ಹೊರಗೆ ಬಂದರು.


ಹಿಜ್ಕೀಯನು ಅರಮನೆಯ ಅಡಳಿತಗಾರನಾದ ಎಲ್ಯಾಕೀಮನನ್ನು, ಕಾರ್ಯದರ್ಶಿಯಾದ ಶೆಬ್ನನನ್ನು ಯಾಜಕರ ಹಿರಿಯರೊಂದಿಗೆ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ಬಳಿಗೆ ಕಳುಹಿಸಿದನು. ಇವರು ತಮ್ಮ ಮನಸ್ಸಿನ ದುಗುಡವನ್ನು ಪ್ರದರ್ಶಿಸುವಂತೆ ಶೋಕವಸ್ತ್ರಗಳನ್ನು ಧರಿಸಿದ್ದರು.


ಹಿಲ್ಕೀಯನ ಮಗನೂ ಅರಮನೆಯ ಆಡಳಿತಾಧಿಕಾರಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ಹ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಅಶ್ಶೂರದ ಸೇನಾದಂಡನಾಯಕ ಹೇಳಿದ್ದನ್ನೆಲ್ಲಾ ತಿಳಿಸಿದರು.


ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಅದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ ಮತ್ತು ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಹಿಜ್ಕೀಯನ ಬಳಿಗೆ ಬಂದರು. ಅವರು ದುಃಖದಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡಿದ್ದರು. ಅಶ್ಶೂರದ ಸೇನಾಧಿಪತಿಯಾದ ರಬ್ಷಾಕೆಯು ಹೇಳಿದ ಸಂಗತಿಗಳನ್ನು ಅವರು ಹಿಜ್ಕೀಯನಿಗೆ ತಿಳಿಸಿದರು.


ಆಗ ಎಲ್ಯಾಕೀಮ್, ಶೆಬ್ನ ಮತ್ತು ಯೋವ ಎಂಬವರು ಆ ಸೇನಾದಂಡನಾಯಕನಿಗೆ, “ದಯಮಾಡಿ ನಮ್ಮೊಂದಿಗೆ ಅರಮೇಯಿಕ್ ಭಾಷೆಯಲ್ಲಿ ಮಾತನಾಡು. ಆ ಭಾಷೆಯು ನಮಗೆ ಗೊತ್ತು. ಯೆಹೂದದ ಭಾಷೆಯಲ್ಲಿ ನಮ್ಮೊಂದಿಗೆ ಮಾತನಾಡಬೇಡ. ನೀವು ನಮ್ಮ ಭಾಷೆಯಲ್ಲಿ ಮಾತನಾಡಿದರೆ ಗೋಡೆಯ ಮೇಲಿರುವ ನಮ್ಮ ಜನರು ತಿಳಿದುಕೊಳ್ಳುವರು” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು