Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 22:24 - ಪರಿಶುದ್ದ ಬೈಬಲ್‌

24 ಅವನ ತಂದೆಯ ಮನೆಯ ಎಲ್ಲಾ ವಿಶೇಷ ಸಂಗತಿಗಳನ್ನು, ವಸ್ತುಗಳನ್ನು ಅವನಿಗೆ ತೂಗುಹಾಕುವರು. ಎಲ್ಲಾ ಹಿರಿಕಿರಿಯರು ಅವನ ಮೇಲೆ ಆತುಕೊಂಡಿರುವರು. ಅವರು ಅವನಿಗೆ ತೂಗುಹಾಕಲ್ಪಟ್ಟ ಚಿಕ್ಕಚಿಕ್ಕ ಪಾತ್ರೆಗಳಂತೆಯೂ ನೀರಿನ ದೊಡ್ಡ ಸೀಸೆಗಳಂತೆಯೂ ಇರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ವೈಭವವನ್ನು ಅವರು ಆ ದಿನದಲ್ಲಿ ಅವನಿಗೆ ವಹಿಸುವರು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ಬಟ್ಟಲು, ಬಿಂದಿಗೆ ಮುಂತಾದ ಪಾತ್ರೆಗಳನ್ನು ಮೊಳೆಗೆ ತಗಲುಹಾಕುವಂತೆ, ತಂದೆಯ ಮಕ್ಕಳು, ಮೊಮ್ಮಕ್ಕಳೆಲ್ಲರು ಅವನಿಗೆ ನೇತುಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣಪಾತ್ರೆಗಳನ್ನು ಅಂದರೆ ತಂದೆಯ ಸಂತಾನ ಸಂತತಿಯಾದ ಅವನ ವಂಶದ ಭಾರವನ್ನೆಲ್ಲಾ ಅವನಿಗೆ ತಗಲುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಬಟ್ಟಲು ಮೊದಲುಗೊಂಡು ಕೊಡದ ತನಕ, ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ಎಲ್ಲಾ ವೈಭವವನ್ನು ಅವರು ಅವನಿಗೆ ವಹಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 22:24
12 ತಿಳಿವುಗಳ ಹೋಲಿಕೆ  

ಆದ್ದರಿಂದ ಯೇಸು ಅವರ ಬಳಿಗೆ ಬಂದು, “ಪರಲೋಕದ ಮತ್ತು ಈ ಲೋಕದ ಅಧಿಕಾರವೆಲ್ಲವನ್ನು ನನಗೆ ಕೊಡಲಾಗಿದೆ.


ದ್ರಾಕ್ಷಾಬಳ್ಳಿಯ ಕಟ್ಟಿಗೆಯಿಂದ ಏನನ್ನಾದರೂ ತಯಾರಿಸಬಹುದೋ? ಇಲ್ಲ. ಅದನ್ನು ಗೂಟವನ್ನಾಗಿ ಮಾಡಿ ಅದರಲ್ಲಿ ಪಾತ್ರೆಗಳನ್ನು ತೂಗುಹಾಕಬಹುದೋ? ಇಲ್ಲ.


ಒಂದು ಗಟ್ಟಿಯಾದ ಹಲಗೆಯಲ್ಲಿ ಮೊಳೆಯನ್ನು ಹೊಡೆದು ಗಟ್ಟಿಯಾಗಿರಿಸುವಂತೆ ಅವನನ್ನು ನಾನು ಬಲಪಡಿಸುವೆನು. ಆ ಸೇವಕನು ತನ್ನ ಕುಟುಂಬದವರಿಗೆ ಗೌರವಪೀಠದಂತಿರುವನು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ಹಲಗೆಗೆ ಬಲವಾಗಿ ಹೊಡೆಯಲ್ಪಟ್ಟ ಆ ಮೊಳೆಯು (ಶೆಬ್ನ) ಬಲಹೀನವಾಗಿ ತುಂಡಾಗುವದು. ಆ ಮೊಳೆಯು ನೆಲಕ್ಕೆ ಬಿದ್ದು ನಾಶವಾಗುವದು. ಆಗ ಆ ಮೊಳೆಗೆ ತೂಗುಹಾಕಿದ್ದೆಲ್ಲವೂ ಅದರೊಂದಿಗೆ ನೆಲಕ್ಕೆ ಬೀಳುವದು. ಆಗ ನಾನು ಈ ಸಂದೇಶದಲ್ಲಿ ಹೇಳಿದ್ದೆಲ್ಲವೂ ಸಂಭವಿಸುವದು. ಅವುಗಳು ನೆರವೇರುತ್ತವೆ ಯಾಕೆಂದರೆ ಅವುಗಳನ್ನು ಹೇಳಿದಾತನು ಯೆಹೋವನೇ.”


ಆತನು ದೇವಾಲಯವನ್ನು ಕಟ್ಟುವನು ಮತ್ತು ಗೌರವವನ್ನು ಹೊಂದುವನು. ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ರಾಜ್ಯವನ್ನು ಆಳುವನು. ಒಬ್ಬ ಯಾಜಕನು ಆತನ ಸಿಂಹಾಸನದ ಬಳಿಯಲ್ಲಿ ನಿಂತುಕೊಂಡಿರುವನು. ಅವರಿಬ್ಬರೂ ಸಮಾಧಾನದಿಂದ ಕೆಲಸ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು