Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 22:3 - ಪರಿಶುದ್ದ ಬೈಬಲ್‌

3 ಅಧಿಪತಿಗಳೆಲ್ಲಾ ಒಟ್ಟಾಗಿ ಪಲಾಯನಗೈದರು. ಆದರೆ ಅವರೆಲ್ಲಾ ಬಿಲ್ಲುಗಳಿಲ್ಲದೆ ಹಿಡಿಯಲ್ಪಟ್ಟರು. ನಿಮ್ಮ ಎಲ್ಲಾ ಅಧಿಕಾರಿಗಳು ಒಟ್ಟಾಗಿ ಬಹು ದೂರಪ್ರದೇಶಗಳಿಗೆ ಓಡಿದರು. ಆದರೆ ಅವರೆಲ್ಲಾ ಹಿಡಿಯಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿನ್ನ ಅಧಿಕಾರಿಗಳು ಒಟ್ಟಿಗೆ ಓಡಿ ಬಿಲ್ಲುಗಾರರಿಲ್ಲದೆ ಸೆರೆಯಾಗಿದ್ದಾರೆ; ದೂರದಿಂದ ಓಡುತ್ತಾ ಶತ್ರುವಿಗೆ ಸಿಕ್ಕಿದ ನಿನ್ನ ಜನರೆಲ್ಲರೊಂದಿಗೆ ಕಟ್ಟುಬಿದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿಮ್ಮ ಮುಖಂಡರೆಲ್ಲ ಒಟ್ಟಿಗೆ ಪಲಾಯನಗೈದರು; ಒಂದೇ ಒಂದು ಬಾಣವನ್ನು ಬಿಡುವುದಕ್ಕೆ ಮುಂಚೆ ಸೆರೆಹೋದರು. ದೂರಕ್ಕೆ ಪಲಾಯನಗೈದಿದ್ದರೂ ಅವರೆಲ್ಲರೂ ಶತ್ರುವಿನ ಕೈಗೆ ಸಿಕ್ಕಿಬಿದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿನ್ನ ಅಧಿಕಾರಿಗಳು ಒಟ್ಟಿಗೆ ಓಡಿ ಬಿಲ್ಲಿಲ್ಲದೆ ಸೆರೆಯಾಗಿದ್ದಾರೆ; ದೂರ ಓಡುತ್ತಾ [ಶತ್ರುವಿಗೆ] ಸಿಕ್ಕಿದ ನಿನ್ನ ಜನರೆಲ್ಲರೂ ಒಂದಿಗೆ ಕಟ್ಟುಬಿದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿನ್ನ ಅಧಿಕಾರಸ್ಥರೆಲ್ಲ ಒಟ್ಟಿಗೆ ಓಡಿದರೂ ಬಿಲ್ಲುಗಾರರಿಲ್ಲದೆಯೇ ಸೆರೆಯಾಗಿದ್ದಾರೆ. ದೂರದಿಂದ ಓಡಿಬಂದರೂ ನಿನ್ನ ಜನರು ಶತ್ರುವಿನ ಕೈಗೆ ಸಿಕ್ಕಿಬಿದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 22:3
7 ತಿಳಿವುಗಳ ಹೋಲಿಕೆ  

ಅವರು ತಮ್ಮನ್ನು ಸಾಯಿಸಲಿಕ್ಕಿದ್ದ ಕತ್ತಿಯಿಂದ ತಪ್ಪಿಸಿಕೊಂಡು ಬಂದವರು. ಅವರು ತಮ್ಮನ್ನು ಹೊಡೆಯಲು ಸಿದ್ಧವಾಗಿದ್ದ ಬಾಣಗಳಿಂದ ಪಾರಾಗಿ ಬಂದವರು. ಅವರು ಘೋರ ರಣರಂಗದಿಂದ ಓಡಿಬಂದವರು.


ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ರಾಜನು ಮತ್ತು ನಾಯಕರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು. ಯಾಜಕರು ಭಯಪಡುವರು; ಪ್ರವಾದಿಗಳು ಬೆರಗಾಗುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು