Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 22:5 - ಪರಿಶುದ್ದ ಬೈಬಲ್‌

5 ಯೆಹೋವನು ಒಂದು ವಿಶೇಷ ದಿನವನ್ನು ಆರಿಸಿರುತ್ತಾನೆ. ಆ ದಿನದಲ್ಲಿ ಗಲಭೆ ಮತ್ತು ಗಲಿಬಿಲಿಯು ಇರುವದು. ದಿವ್ಯದರ್ಶನದ ಕಣಿವೆಯಲ್ಲಿ ಜನರು ಒಬ್ಬರನ್ನೊಬ್ಬರು ತುಳಿದುಕೊಂಡು ಅವರ ಮೇಲೆಯೇ ನಡೆದುಕೊಂಡು ಹೋಗುವರು. ನಗರದ ಕೋಟೆಗೋಡೆಗಳು ಕೆಡವಲ್ಪಡುವವು. ಕಣಿವೆಯಲ್ಲಿ ವಾಸಿಸುವ ಜನರು ಬೆಟ್ಟದ ಮೇಲಿನ ನಗರದ ಜನರಿಗೆ ಚೀರಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನಿಂದ ದಿವ್ಯದರ್ಶನದ ಕಣಿವೆಗೆ ಗಲಿಬಿಲಿಯ ದಿನ, ತುಳಿದಾಟದ ದಿನ, ಭ್ರಾಂತಿಯ ದಿನ, ಕೋಟೆಯು ಒಡೆದು ಹೋಗಲು, ಕೂಗು ಬೆಟ್ಟವನ್ನು ಮುಟ್ಟುವ ದಿನ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಕಳುಹಿಸಿರುವ ದಿನವಿದು - ದಿವ್ಯದರ್ಶನದ ಕಣಿವೆಯ ದಿನ, ಗಲಿಬಿಲಿಯ ದಿನ, ತುಳಿದಾಟದ ದಿನ, ಭಯಭ್ರಾಂತಿಯ ದಿನ, ಕೋಟೆಕೊತ್ತಲಗಳನ್ನು ಹೊಡೆದುರುಳಿಸುವ ದಿನ. ಕೂಗಾಟವು ಬೆಟ್ಟದಲ್ಲಿ ಮಾರ್ದನಿಸುವ ದಿನ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನಿಂದ ದಿವ್ಯದರ್ಶನದ ತಗ್ಗಿಗೆ ಗಲಿಬಿಲಿಯ ದಿನ, ತುಳಿದಾಟದ ದಿನ, ಭ್ರಾಂತಿಯ ದಿನ, ಕೋಟೆಯು ಒಡೆದುಹೋಗಲು ಕೂಗು ಬೆಟ್ಟವನ್ನು ಮುಟ್ಟುವ ದಿನ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕರ್ತ ಆಗಿರುವವರೂ, ಸರ್ವಶಕ್ತರೂ ಆದ ಯೆಹೋವ ದೇವರು, ದರ್ಶನದ ತಗ್ಗಿನಲ್ಲಿ ಶ್ರಮೆಯ ತುಳಿದಾಟದ ಭಯಭ್ರಾಂತಿಯ ದಿನವನ್ನು ಇಟ್ಟಿದ್ದಾರೆ. ಅದು ಗೋಡೆಗಳು ಹೊಡೆದುರುಳಿಸುವ ದಿನವು. ಪರ್ವತಗಳಿಗೆ ಜನರು ಕೂಗಾಡುವ ದಿನವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 22:5
22 ತಿಳಿವುಗಳ ಹೋಲಿಕೆ  

ಆಗ ಜನರು ಬೆಟ್ಟಕ್ಕೆ, ‘ನಮ್ಮ ಮೇಲೆ ಬೀಳು!’ ಎಂತಲೂ ಗುಡ್ಡಗಳಿಗೆ, ‘ನಮ್ಮನ್ನು ಮುಚ್ಚಿಕೊಳ್ಳಿರಿ!’ ಎಂತಲೂ ಕೂಗಿಕೊಳ್ಳುವರು.


ಅವರಲ್ಲಿರುವ ಉತ್ತಮರೂ ಸಹ ಮುಳ್ಳಿನ ಪೊದೆಯಂತಿದ್ದಾರೆ. ಅವರಲ್ಲಿರುವ ಉತ್ತಮರೂ ಸಹ ಡೊಂಕುಡೊಂಕಾಗಿರುವ ಮುಳ್ಳುಪೊದೆಗಿಂತಲೂ ಡೊಂಕಾಗಿದ್ದಾರೆ. ನಿನ್ನ ಪ್ರವಾದಿಗಳು ಈ ದಿನವು ಬರುತ್ತಿದೆ ಎಂದು ಹೇಳುತ್ತಿದ್ದಾರೆ. ನಿನ್ನ ಪ್ರವಾದಿಗಳ ದಿವಸವು ಬಂದದೆ. ಈಗ ನೀನು ಶಿಕ್ಷಿಸಲ್ಪಡುವೆ. ನೀನು ಈಗ ಗಲಿಬಿಲಿಗೆ ಒಳಗಾಗುವೆ!


ಜೆರುಸಲೇಮಿನ ಶತ್ರುಗಳು ಗೆದ್ದಿದ್ದಾರೆ. ಅವಳ ಶತ್ರುಗಳು ಜಯಶೀಲರಾಗಿದ್ದಾರೆ. ಯೆಹೋವನು ಅವಳನ್ನು ದಂಡಿಸಿದ ಕಾರಣ ಹೀಗಾಯಿತು. ಅವಳ ಅನೇಕ ಪಾಪಗಳಿಗಾಗಿ ಆತನು ಜೆರುಸಲೇಮನ್ನು ದಂಡಿಸಿದನು. ಅವಳ ಮಕ್ಕಳು ದೂರಹೋಗಿದ್ದಾರೆ. ಅವರು ವೈರಿಗಳ ಸೆರೆಯಾಳುಗಳಾಗಿ ದೂರ ಹೋಗಿದ್ದಾರೆ.


ಇವರು ಯೆಶಾಯನಿಗೆ, “ಅರಸನಾದ ಹಿಜ್ಕೀಯನು ಈ ದಿವಸವನ್ನು ಶೋಕದ ದಿವಸವನ್ನಾಗಿ ಘೋಷಿಸಿದ್ದಾನೆ. ಇದು ದುಃಖದ ಸಮಯವಾಗಿದೆ. ಇದು ದಿನತುಂಬಿ ತಾಯಿಯ ಹೊಟ್ಟೆಯೊಳಗಿಂದ ಹೊರಬರಲು ಶಕ್ತವಾಗಿಲ್ಲದ ಕೂಸಿನಂತಿದೆ.


ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯುದ್ಧಮಾಡಲು ನಾನು ಅಶ್ಶೂರವನ್ನು ಕಳುಹಿಸುವೆನು. ನಾನು ಅವರ ಮೇಲೆ ಕೋಪಗೊಂಡಿರುವೆನು. ಅಶ್ಶೂರಕ್ಕೆ ಅವರ ಮೇಲೆ ಯುದ್ಧ ಮಾಡುವಂತೆ ಆಜ್ಞಾಪಿಸುವೆನು. ಅಶ್ಶೂರವು ಅವರನ್ನು ಸೋಲಿಸಿ ಅವರ ಐಶ್ವರ್ಯವನ್ನೆಲ್ಲಾ ಸೂರೆಮಾಡುವದು. ಇಸ್ರೇಲು ಅಶ್ಶೂರದವರಿಗೆ ಬೀದಿಯ ಧೂಳಿನಂತಾಗುವದು.


ಇಸ್ರೇಲ್ ಪಾಪ ಮಾಡುತ್ತಾ ಇನ್ನೂ ಹೆಚ್ಚಾಗಿ ಎತ್ತರವಾದ ಸ್ಥಳಗಳನ್ನು ಕಟ್ಟಿತು. ಆವೆನ್‌ನಲ್ಲಿರುವ ಎತ್ತರವಾದ ಸ್ಥಳ ನಾಶಮಾಡಲ್ಪಡುವದು. ಅದರ ಮೇಲೆ ಮುಳ್ಳುಗಿಡಗಳೂ ಹಣಜಿಗಳೂ ಬೆಳೆಯುವವು. ಆಗ ಅವರು ಪರ್ವತಗಳಿಗೆ, “ನಮ್ಮನ್ನು ಮುಚ್ಚಿರಿ” ಎಂದೂ ಬೆಟ್ಟಗಳಿಗೆ, “ನಮ್ಮ ಮೇಲೆ ಬೀಳಿರಿ” ಎಂದೂ ಹೇಳುವರು.


ಯೆಹೋವನು ಯಾಕೋಬನ ಮನೆಗಳನ್ನು ನಾಶಪಡಿಸಿದನು. ಆತನು ಕನಿಕರವಿಲ್ಲದೆ ಅವುಗಳನ್ನು ನುಂಗಿಬಿಟ್ಟನು. ತನ್ನ ಕೋಪದಲ್ಲಿ ಆತನು ಯೆಹೂದದ ಮಗಳ ಕೋಟೆಗಳನ್ನು ನಾಶಪಡಿಸಿದನು. ಯೆಹೋವನು ಯೆಹೂದ ರಾಜ್ಯವನ್ನೂ ಮತ್ತು ಅದರ ಅಧಿಪತಿಗಳನ್ನೂ ನೆಲಕ್ಕೆ ಅಪ್ಪಳಿಸಿದನು. ಆತನು ಯೆಹೂದ ರಾಜ್ಯಕ್ಕೆ ಅವಮಾನ ಮಾಡಿದ್ದಾನೆ.


“ಇದು ಯಾಕೋಬ್ಯರಿಗೆ ಬಹು ಮುಖ್ಯವಾದ ಸಮಯ. ಇದು ಬಹಳ ಕಷ್ಟದ ಸಮಯ. ಎಂದೂ ಇಂಥ ಕಷ್ಟದ ಸಮಯ ಬರುವದಿಲ್ಲ. ಆದರೆ ಯಾಕೋಬ್ ಇದರಿಂದ ಪಾರಾಗುವುದು.”


ದಿವ್ಯದರ್ಶನದ ಕಣಿವೆಯ ವಿಷಯವಾಗಿ ದುಃಖದ ಸಂದೇಶ: ಜನಗಳೇ, ನಿಮಗೆ ಏನಾಯಿತು? ನಿಮ್ಮ ಮನೆ ಮಾಳಿಗೆಯ ಮೇಲೆ ಯಾಕೆ ಅಡಗಿರುತ್ತೀರಿ?


ಆ ಸಮಯದಲ್ಲಿ ಜುದೇಯದಲ್ಲಿರುವ ಜನರು ಬೆಟ್ಟಗಳಿಗೆ ಓಡಿಹೋಗಲಿ.


ಏಕೆಂದರೆ ಯೆಹೋವನ ಬಲವು ಈ ಪರ್ವತದಲ್ಲಿದೆ. ಮೋವಾಬ್ ಸೋಲಿಸಲ್ಪಡುವದು. ಯೆಹೋವನು ವೈರಿಯನ್ನು ಹುಲ್ಲಿನಂತೆ ತುಳಿದುಬಿಡುವನು.


“ನಾನೀಗ ನನ್ನ ದ್ರಾಕ್ಷಿತೋಟಕ್ಕೆ ಏನು ಮಾಡುವೆನೆಂದು ತಿಳಿಸುವೆನು: ಅದರ ಸುತ್ತಲೂ ರಕ್ಷಣೆಗಾಗಿ ಹಾಕಿದ್ದ ಮುಳ್ಳಿನ ಬೇಲಿಯನ್ನು ಕಿತ್ತು ಸುಟ್ಟುಬಿಡುವೆನು. ಅದರ ಕಲ್ಲಿನ ಗೋಡೆಯನ್ನು ಕೆಡವಿ ತುಳಿದಾಟಕ್ಕೆ ಈಡುಮಾಡುವೆನು.


ರಾಜನ ಆಜ್ಞೆಯ ಪ್ರಕಾರ ಸಂದೇಶವಾಹಕರು ದೇಶದೇಶಗಳಿಗೆ ಚದರಿದರು. ರಾಜಧಾನಿಯಾದ ಶೂಷನ್ ನಗರದಲ್ಲೂ ಆ ಸಂದೇಶವನ್ನು ಪ್ರಕಟಿಸಲಾಯಿತು. ಅರಸನೂ ಹಾಮಾನನೂ ಮದ್ಯಪಾನ ಮಾಡಲು ಕುಳಿತರು. ಆದರೆ ರಾಜಧಾನಿಯಲ್ಲಿನ ಜನರು ಗಲಿಬಿಲಿಗೊಂಡಿದ್ದರು.


ನಂತರ ನೆಬೂಜರದಾನನೊಂದಿಗಿದ್ದ ಬಾಬಿಲೋನ್ ಸೈನ್ಯವು ಜೆರುಸಲೇಮಿನ ಸುತ್ತಲೂ ಇದ್ದ ಗೋಡೆಯನ್ನು ಕೆಡವಿಹಾಕಿತು.


ಅವರು ಯೆಶಾಯನಿಗೆ, “ಹಿಜ್ಕೀಯನು ಹೇಳುವುದೇನೆಂದರೆ, ಇಂದು ಮಹಾಕಷ್ಟದ ದಿನವಾಗಿದೆ. ನಾವು ಶಿಕ್ಷೆಯನ್ನೂ ನಿಂದೆಯನ್ನೂ ಅನುಭವಿಸಬೇಕಾಯಿತು. ಇದು ಪ್ರಸವವೇದನೆಯ ದಿನದಂತಿದೆ. ಆದರೆ ಹೆರಲು ಶಕ್ತಿಯೇ ಇಲ್ಲವಾಗಿದೆ.


ಅವನ ಉತ್ತರ: “ದ್ರಾಕ್ಷಿತೊಟ್ಟಿಯಲ್ಲಿ ನಾನೊಬ್ಬನೇ ತುಳಿದೆನು. ಯಾರೂ ನನಗೆ ಸಹಾಯ ಮಾಡಲಿಲ್ಲ. ನಾನು ಕೋಪಗೊಂಡು ದ್ರಾಕ್ಷಿಹಣ್ಣಿನ ಮೇಲೆ ತುಳಿದೆನು. ಅದರ ರಸ ನನ್ನ ಬಟ್ಟೆಯ ಮೇಲೆ ಹಾರಿತು. ಆದ್ದರಿಂದ ನನ್ನ ಬಟ್ಟೆಗಳು ಮಲಿನವಾದವು.


ನಾನು ಕೋಪಗೊಂಡಾಗ ಜನಾಂಗಗಳ ಮೇಲೆ ತುಳಿದಾಡಿದೆನು. ನಾನು ಸಿಟ್ಟುಗೊಂಡಾಗ ಅವರನ್ನು ಶಿಕ್ಷಿಸಿದೆನು. ಅವರ ರಕ್ತವನ್ನು ನೆಲದ ಮೇಲೆ ಚೆಲ್ಲಿದೆನು.”


ಇಸ್ರೇಲ್ ದೇಶದಲ್ಲಿ ವಾಸಿಸುವ ಜನರೇ, ನಿಮಗೆ ಆಪತ್ತು ಬರುವುದು, ಸಮಯವು ಬರುತ್ತಿದೆ. ದಿನವು ಸಮೀಪಿಸಿದೆ. ಬೆಟ್ಟಗಳ ಮೇಲೆ ಆನಂದ ಬೋಷಗಳ ಬದಲು ಯುದ್ಧದ ಕೂಗಾಟಗಳು ಇರುತ್ತವೆ.


ಯೆಹೋವನು ತನ್ನ ಕೋಪವನ್ನು ಆ ದಿವಸದಲ್ಲಿ ತೋರಿಸುವನು. ಆ ದಿವಸಗಳಲ್ಲಿ ಮಹಾ ಸಂಕಟಗಳಿರುವವು. ಅವು ನಾಶನದ ದಿವಸಗಳಾಗಿರುವವು. ಆ ದಿವಸವು ಕತ್ತಲು, ಕಾರ್ಮುಗಿಲು ಕವಿದ ಬಿರುಗಾಳಿಯ ದಿವಸವಾಗಿರುವುದು.


ಯೆಹೋವನು ಚೀಯೋನ್ ಕುಮಾರಿಯ ಪೌಳಿಗೋಡೆಯನ್ನು ನಾಶಮಾಡಬೇಕೆಂದು ಯೋಚಿಸಿದ್ದಾನೆ. ಆತನು ಅಳತೆದಾರದಿಂದ ಒಡೆಯಬೇಕಾದ ಗೋಡೆಗೆ ಗುರುತು ಮಾಡಿದ್ದಾನೆ. ಆತನು ತಾನು ಮಾಡುತ್ತಿದ್ದ ನಾಶನವನ್ನು ನಿಲ್ಲಿಸಲಿಲ್ಲ. ಪೌಳಿಗೋಡೆಗಳು ಮತ್ತು ಗೋಪುರಗಳು ದುಃಖದಿಂದ ಗೋಳಾಡುವಂತೆ ಆತನು ಮಾಡಿದ್ದಾನೆ. ಅವೆರಡೂ ಕುಸಿದುಹೋಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು