Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 22:7 - ಪರಿಶುದ್ದ ಬೈಬಲ್‌

7 ಸೈನ್ಯಗಳು ನಿಮ್ಮ ವಿಶೇಷವಾದ ಕಣಿವೆಯಲ್ಲಿ ಎದುರುಬದುರಾಗಿ ಭೇಟಿಯಾಗುವರು. ಕಣಿವೆಯು ರಥಗಳಿಂದ ತುಂಬಿಹೋಗುವದು. ಅಶ್ವದಳದವರನ್ನು ದ್ವಾರದ ಮುಂದೆ ನಿಲ್ಲಿಸಲಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿಮ್ಮ ಪ್ರಿಯವಾದ ಕಣಿವೆಗಳಲ್ಲಿ ರಥಗಳು ತುಂಬಿದವು, ರಾಹುತರು ಬಾಗಿಲಿನ ಹತ್ತಿರ ವ್ಯೂಹಕಟ್ಟಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿಮ್ಮ ಫಲವತ್ತಾದ ತಗ್ಗುಪ್ರದೇಶಗಳು ರಥಗಳಿಂದ ತುಂಬಿರುವುವು. ಅಶ್ವದಳಗಳು ಪುರದ್ವಾರದ ಬಳಿ ಕಾವಲು ನಿಂತಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿಮ್ಮ ಪ್ರಿಯವಾದ ತಗ್ಗುಗಳಲ್ಲಿ ರಥಗಳು ತುಂಬಿದವು, ರಾಹುತರು ಬಾಗಿಲೆದುರಿಗೆ ವ್ಯೂಹಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ಪ್ರಿಯವಾದ ಕಣಿವೆಗಳಲ್ಲಿ ರಥಗಳು ತುಂಬಿರುವುವು. ರಾಹುತರು ಪಟ್ಟಣದ ಬಾಗಿಲಿನ ಹತ್ತಿರ ಸಿದ್ಧಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 22:7
9 ತಿಳಿವುಗಳ ಹೋಲಿಕೆ  

ಅವನು ಬಂದ ದಾರಿಯಿಂದಲೇ ಹಿಂದಕ್ಕೆ ಹೋಗುವನು. ಅವನು ಈ ಪಟ್ಟಣದೊಳಗೆ ಬರುವದಿಲ್ಲ. ಇದು ಯೆಹೋವನ ನುಡಿ.


ಏಲಾಮಿನ ಅಶ್ವಸೈನಿಕರು ತಮ್ಮ ಬತ್ತಳಿಕೆಯನ್ನು ತೆಗೆದುಕೊಂಡು ರಣರಂಗಕ್ಕೆ ಹೊರಡುವರು. ಕೀರ್ ಸ್ಥಳದ ಜನರು ತಮ್ಮ ಗುರಾಣಿಗಳಿಂದ ಶಬ್ದಮಾಡುವರು.


ಆ ಸಮಯದಲ್ಲಿ ಯೆಹೂದದ ಜನರು ತಾವು ಕಾಡಿನ ಅರಮನೆಯಲ್ಲಿಟ್ಟಿದ್ದ ಆಯುಧಗಳನ್ನು ಉಪಯೋಗಿಸುವುದಕ್ಕೆ ಮನಸ್ಸು ಮಾಡುವರು. ಯೆಹೂದವನ್ನು ರಕ್ಷಿಸುವ ಗೋಡೆಗಳನ್ನು ಶತ್ರುಗಳು ಕೆಡವಿಹಾಕುವರು.


ಸ್ವಲ್ಪ ಸಮಯದಲ್ಲಿಯೇ ನಾನು ಉತ್ತರ ರಾಜ್ಯಗಳ ಎಲ್ಲಾ ಜನರನ್ನು ಕರೆಯುತ್ತೇನೆ” ಎಂದನು. ಮತ್ತೆ ಯೆಹೋವನು ಹೀಗೆ ಹೇಳಿದನು: “ಆ ದೇಶಗಳ ರಾಜರು ಬರುವರು. ಅವರು ಜೆರುಸಲೇಮಿನ ಹೆಬ್ಬಾಗಿಲಿನ ಹತ್ತಿರ ತಮ್ಮ ಆಸನಗಳನ್ನು ಹಾಕುವರು. ಅವರು ಜೆರುಸಲೇಮಿನ ಎಲ್ಲಾ ಕೋಟೆಗೋಡೆಗಳಿಗೆ ಮುತ್ತಿಗೆಹಾಕುವರು. ಅವರು ಯೆಹೂದ ಪ್ರದೇಶದ ಎಲ್ಲಾ ನಗರಗಳ ಮೇಲೆ ಧಾಳಿ ಮಾಡುವರು.


ಆಮೇಲೆ, ನೀನೇ ಒಂದು ಸೈನ್ಯದೊಂದಿಗೆ ಆ ನಗರವನ್ನು ಮುತ್ತಿಗೆ ಹಾಕಿದವನಂತೆ ನಟನೆ ಮಾಡು. ನಗರದ ಸುತ್ತಲೂ ಮಣ್ಣಿನ ದಿಬ್ಬಗಳನ್ನು ಮಾಡಿ ನೀನು ಅದಕ್ಕೆ ಧಾಳಿ ಮಾಡಲು ಸಹಾಯವಾಗುವಂತೆ ಮಾಡು. ನಗರದ ಪೌಳಿಗೋಡೆಯ ತನಕ ಒಂದು ರಸ್ತೆಯನ್ನು ತಯಾರಿಸು. ಒಂದು ಭಿತ್ತಿಭೇದಕ ಯಂತ್ರವನ್ನು ತಂದು ಸೈನ್ಯದ ಪಾಳೆಯಗಳನ್ನು ನಗರದ ಸುತ್ತಲೂ ನಿರ್ಮಿಸು.


ಆ ಬಳಿಕ ಒಂದು ಕಬ್ಬಿಣದ ರೊಟ್ಟಿ ಕಲ್ಲನ್ನು ನಿನಗೂ ನಗರಕ್ಕೂ ಮಧ್ಯೆ ಇಡು. ಅದು ನಿನಗೂ ನಗರಕ್ಕೂ ನಡುವೆ ಇರುವ ಕಬ್ಬಿಣದ ಗೋಡೆಯಂತಿರುವುದು. ಈ ರೀತಿಯಾಗಿ ನೀನು ಆ ನಗರಕ್ಕೆ ವಿರುದ್ಧವಾಗಿರುವಂತೆ ಕಂಡುಬರುವೆ. ನೀನು ಆ ನಗರಕ್ಕೆ ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧ ಮಾಡುವಿ. ಯಾಕೆಂದರೆ, ಶೀಬ್ರದಲ್ಲೇ ಏನು ಸಂಭವಿಸುತ್ತದೆ ಎಂಬುದಕ್ಕೆ ಇಸ್ರೇಲ್ ಜನರಿಗೆ ಇದು ಸೂಚನೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು