Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 23:1 - ಪರಿಶುದ್ದ ಬೈಬಲ್‌

1 ತೂರಿನ ವಿಷಯವಾಗಿ ದುಃಖಕರವಾದ ಸಂದೇಶ: “ತಾರ್ಷೀಷಿನ ಹಡಗುಗಳೇ, ದುಃಖಿಸಿರಿ! ನಿಮ್ಮ ರೇವು ಕೆಡವಲ್ಪಟ್ಟಿದೆ.” ಕಿತ್ತಿಮಿನಿಂದ ಹೊರಟ ಹಡಗುಗಳಿಗೆ ಈ ವಾರ್ತೆಯು ತಲುಪಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಟೈರ್ ನಗರವನ್ನು ಕುರಿತ ದೈವೋಕ್ತಿ : “ಗೋಳಾಡಿರಿ ತಾರ್ಷಿಷಿನ ನಾವಿಕರೆಲ್ಲ, ಹಾಳಾಗಿವೆ ನಿಮ್ಮ ಬಂದರುಗಳೆಲ್ಲ; ಹಡಗುಗಳಿಗೆ ರೇವಿಲ್ಲ, ನೆಲೆಯಿಲ್ಲ, ಸೈಪ್ರಸ್ಸಿನಿಂದ ಬಂದ ನಾವಿಕರಿಂದ ಈ ಸುದ್ದಿ ನಿಮಗೆ ತಿಳಿಯುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಅಂಗಲಾಚಿರಿ! [ನಿಮ್ಮ ಆಶ್ರಯವು] ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. (ಕಿತ್ತೀಮ್ ದೇಶೀಯರಿಂದ ಅವುಗಳಿಗೆ ತಿಳಿಯಿತು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಟೈರಿನ ವಿಷಯವಾದ ಪ್ರವಾದನೆ: ತಾರ್ಷೀಷಿನ ಹಡಗುಗಳೇ, ಗೋಳಾಡಿರಿ, ಏಕೆಂದರೆ ಟೈರ್ ಹಾಳಾಗಿರುವುದರಿಂದ ನಿಮಗೆ ಮನೆಯಿಲ್ಲ ಮತ್ತು ಬಂದರವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 23:1
32 ತಿಳಿವುಗಳ ಹೋಲಿಕೆ  

ಯಾವಾನನ ಗಂಡುಮಕ್ಕಳು: ಎಲೀಷಾ, ತಾರ್ಷೀಸ್, ಕಿತ್ತೀಮ್ ಮತ್ತು ದೋದಾನೀಮ್.


ಎಲ್ಲಾ ಫಿಲಿಷ್ಟಿಯರ ವಿನಾಶನದ ಕಾಲ ಬಂದಿದೆ. ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಅಳಿದುಳಿದವರನ್ನೆಲ್ಲ ನಾಶಮಾಡುವ ಕಾಲ ಬಂದಿದೆ. ಯೆಹೋವನು ಬಹುಬೇಗ ಫಿಲಿಷ್ಟಿಯರನ್ನು ನಾಶಮಾಡುವನು. ಕಪ್ತೋರ್ ದಿಬಪದ ಅಳಿದುಳಿದ ಜನರನ್ನು ಆತನು ನಾಶಮಾಡುವನು.


ತೂರಿನ ಮತ್ತು ಚೀದೋನಿನ ಎಲ್ಲಾ ರಾಜರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ಬಹಳ ದೂರದೇಶದ ರಾಜರು ಸಹ ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ.


ಆ ಅಹಂಕಾರಿಗಳು ತಾರ್ಷೀಷಿನ ದೊಡ್ಡ ಹಡಗುಗಳಂತಿದ್ದಾರೆ. ಈ ಹಡಗುಗಳಲ್ಲಿ ಶ್ರೇಷ್ಠವಾದ ವಸ್ತುಗಳು ತುಂಬಿವೆ. ಆದರೆ ದೇವರು ಆ ಅಹಂಕಾರಿಗಳನ್ನು ಶಿಕ್ಷಿಸುವನು.


ಸಮುದ್ರದ ಆಚೆಗಿದ್ದ ಕಿತ್ತೀಮ್ ದಿಬಪಗಳಿಗೆ ಹೋಗಿ ನೋಡಿರಿ. ಸೂಕ್ಷ್ಮವಾಗಿ ಪರಿಶೀಲಿಸಲು ಯಾರನ್ನಾದರೂ ಕೇದಾರಿಗೆ ಕಳುಹಿಸಿರಿ. ಯಾರಾದರೂ ಎಂದಾದರೂ ಇಂಥ ಕೆಲಸ ಮಾಡಿರುವರೇ, ನೋಡಿರಿ.


ಯೆಹೋವನು ಹೇಳುವುದೇನೆಂದರೆ, “ಚೀದೋನ್ ಕುಮಾರಿಯೇ, ನೀನು ನಾಶವಾಗುವೆ; ಎಂದಿಗೂ ನೀನು ಹರ್ಷಿಸುವದಿಲ್ಲ. ತೂರಿನ ಜನರು, ‘ನಮಗೆ ಸೈಪ್ರಸ್‌ನವರು ಸಹಾಯ ಮಾಡುತ್ತಾರೆ’ ಎಂದು ಹೇಳುತ್ತಾರೆ. ಆದರೆ ನೀನು ಸಮುದ್ರ ಮಾರ್ಗವಾಗಿ ಸೈಪ್ರಸ್‌ಗೆ ಹೋದರೆ ಅಲ್ಲಿ ನಿನಗೆ ವಿಶ್ರಮಿಸಲು ಸ್ಥಳ ದೊರಕುವದಿಲ್ಲ.”


ರಾಜನಾದ ಯೆಹೋಷಾಫಾಟನು ಸರಕು ಸಾಗಿಸುವ ಹಡಗುಗಳನ್ನು ತಯಾರಿಸಿದನು. ಯೆಹೋಷಾಫಾಟನು ಓಫೀರ್ ದೇಶದಿಂದ ಬಂಗಾರವನ್ನು ತರುವುದಕ್ಕಾಗಿ ಈ ಹಡಗುಗಳನ್ನು ಕಳುಹಿಸಿದನು. ಆದರೆ ಆ ಹಡಗುಗಳು ತಮ್ಮ ಸ್ವಂತ ಬಂದರಾದ ಎಚ್ಯೋನ್ಗೆಬೆರಿನಲ್ಲಿ ನಾಶವಾದವು. ಅವು ಓಫೀರ್ ದೇಶವನ್ನು ಮುಟ್ಟಲೇ ಇಲ್ಲ.


ರಾಜನಾದ ಸೊಲೊಮೋನನ ಹತ್ತಿರ ಅನೇಕ ಸರಕು ಸಾಗಣಿಕೆಯ ಹಡಗುಗಳಿದ್ದವು. ಅವನು ಅವುಗಳನ್ನು ಇತರ ದೇಶಗಳಲ್ಲಿನ ವ್ಯಾಪಾರಕ್ಕಾಗಿ ಕಳುಹಿಸುತ್ತಿದ್ದನು. ಇವು ಹೀರಾಮನ ಹಡಗುಗಳು. ಈ ಹಡಗುಗಳು ಬಂಗಾರ, ಬೆಳ್ಳಿ, ದಂತ ಮತ್ತು ಪ್ರಾಣಿಗಳನ್ನು ಹೊಸದಾಗಿ ತುಂಬಿಕೊಂಡು ಮೂರು ವರ್ಷಕ್ಕೊಮ್ಮೆ ಹಿಂದಿರುಗುತ್ತಿದ್ದವು.


ಕಿತ್ತೀಮಿನ ಹಡಗುಗಳು ಬಂದು ಉತ್ತರದ ರಾಜನೊಂದಿಗೆ ಯುದ್ಧ ಮಾಡುವವು. ಆ ಹಡಗುಗಳು ಬರುವದನ್ನು ಅವನು ನೋಡಿ ಹೆದರಿಕೊಳ್ಳುವನು. ಅವನು ಪರಿಶುದ್ಧ ನಿಬಂಧನೆಯ ಮೇಲೆ ಕೋಪಿಸಿಕೊಂಡು ಹಿಂತಿರುಗುವನು. ಅವನು ಹಿಂತಿರುಗಿದ ಮೇಲೆ ಪರಿಶುದ್ಧ ನಿಬಂಧನೆಯನ್ನು ತೊರೆದವರಿಗೆ ಸಹಾಯ ಮಾಡುವನು.


ದೇಶ ಭ್ರಷ್ಟರಾಗಿದ್ದ ಹನ್ನೊಂದನೇ ವರ್ಷದ ತಿಂಗಳ ಮೊದಲನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಬಂತು. ಆತನು ಹೇಳಿದ್ದೇನೆಂದರೆ,


ಇಸ್ರೇಲಿನ ದೇವರಾದ ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಈ ಪಾನಪಾತ್ರೆಯನ್ನು ನನ್ನ ಕೈಯಿಂದ ತೆಗೆದುಕೋ. ಇದು ಕೋಪದ ದ್ರಾಕ್ಷಾರಸ. ನಾನು ನಿನ್ನನ್ನು ವಿವಿಧ ಜನಾಂಗಗಳಲ್ಲಿಗೆ ಕಳುಹಿಸುತ್ತಿದ್ದೇನೆ. ಆ ಜನಾಂಗಗಳಿಗೆಲ್ಲಾ ಈ ಪಾತ್ರೆಯ ದ್ರಾಕ್ಷಾರಸವನ್ನು ಕುಡಿಸು.


ದೂರ ಪ್ರಾಂತ್ಯಗಳು ನನಗಾಗಿ ಕಾದಿವೆ. ದೊಡ್ಡ ಸರಕು ಸಾಗಿಸುವ ಹಡಗುಗಳು ಹೊರಡಲು ತಯಾರಾಗಿವೆ. ಈ ಹಡಗುಗಳು ದೂರ ಪ್ರಾಂತ್ಯದಲ್ಲಿರುವ ನಿನ್ನ ಮಕ್ಕಳನ್ನು ಕರೆತರಲು ತಯಾರಾಗಿವೆ. ಅವರು ಬೆಳ್ಳಿಬಂಗಾರಗಳನ್ನು ತಮ್ಮೊಂದಿಗೆ ತಂದು ಇಸ್ರೇಲಿನ ಪರಿಶುದ್ಧನಾದ ಯೆಹೋವನನ್ನು ಘನಪಡಿಸುವರು. ಯೆಹೋವನು ನಿನಗೆ ಆಶ್ಚರ್ಯಕರವಾದ ಸಂಗತಿಗಳನ್ನು ಮಾಡುವನು.


ಈ ನಗರಕ್ಕೆ “ಪೂರ್ಣ ಗಲಿಬಿಲಿ” ಎಂಬುದೇ ತಕ್ಕ ಹೆಸರು. ನಗರವು ಕೆಡವಲ್ಪಟ್ಟಿತು. ಜನರು ಮನೆಗಳಿಗೆ ಪ್ರವೇಶಿಸಲಿಕ್ಕಾಗದು. ಕದಗಳನ್ನು ತೆರೆಯಲು ಸಾಧ್ಯವಾಗದು.


ಮೋವಾಬ್ ದೇಶದಲ್ಲೆಲ್ಲಾ ಅಳುವ ಸದ್ದು ಕೇಳಿಸುತ್ತದೆ. ದೂರದಲ್ಲಿರುವ ಎಗ್ಲಯಿಮಿನಲ್ಲೂ ಜನರು ಅಳುತ್ತಿದ್ದಾರೆ. ಬೆಯೇರ್ ಏಲೀಮ್ ಪಟ್ಟಣದಲ್ಲೂ ಜನರು ರೋಧಿಸುತ್ತಾರೆ.


ಪೂರ್ವದ ಬಿರುಗಾಳಿಯಿಂದ ಒಡೆದುಹೋದ ಹಡಗುಗಳಂತೆ ನೀನು ಅವರನ್ನು ನಾಶಮಾಡಿದೆ.


ರಾಜನಾದ ಸೊಲೊಮೋನನ ಬಳಿಯಲ್ಲಿ ತಾರ್ಷೀಷಿಗೆ ಹೋಗಲು ಹಡಗುಗಳಿದ್ದವು. ಹೂರಾಮನ ನಾವಿಕರು ಅವುಗಳನ್ನು ನಡಿಸಿದರು. ಮೂರು ವರ್ಷಕ್ಕೊಮ್ಮೆ ಹಡಗುಗಳು ತಾರ್ಷೀಷಿನಿಂದ ಹಿಂದಿರುಗುತ್ತಿದ್ದವು. ಅವು ಚಿನ್ನ, ಬೆಳ್ಳಿ, ದಂತ, ಕೋತಿ ಮತ್ತು ನವಿಲುಗಳನ್ನು ಸೊಲೊಮೋನನಿಗೆ ತರುತ್ತಿದ್ದವು.


ಹೀರಾಮನು ತೂರಿನ ರಾಜನಾಗಿದ್ದನು. ಹೀರಾಮನು ಯಾವಾಗಲೂ ದಾವೀದನ ಸ್ನೇಹಿತನಾಗಿದ್ದನು. ದಾವೀದನ ನಂತರ ಸೊಲೊಮೋನನು ನೂತನ ರಾಜನಾದನೆಂದು ಹೀರಾಮನು ಕೇಳಿ, ತನ್ನ ಸೇವಕರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು.


ಅಲ್ಲಿಂದ ಆ ಸೀಮೆಯು ದಕ್ಷಿಣದಿಕ್ಕಿಗೆ ಹಿಂತಿರುಗಿ ರಾಮಾವನ್ನು ತಲುಪಿ, ಅಲ್ಲಿಂದ ಸುಭದ್ರ ನಗರವಾದ ತೂರ್‌ಗೆ ಮುಂದುವರೆದು ಅಲ್ಲಿಂದ ತಿರುಗಿಕೊಂಡು ಹೋಸಾಕ್ಕೆ ತಲುಪುತ್ತದೆ. ಅಲ್ಲಿಂದ ಅಕ್ಜೀಬ್,


ಸೈಪ್ರಸ್‌ನ ತೀರಗಳಿಂದ ಹಡಗುಗಳು ಬರುವವು. ಅವರು ಅಶ್ಶೂರ್ಯವನ್ನೂ ಏಬೆರವನ್ನೂ ಸೋಲಿಸುವರು; ಆದರೆ ಅವರು ಸಹ ನಾಶವಾಗುವರು.”


“ಕೊರಾಜಿನೇ, ಬೆತ್ಸಾಯಿದವೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮಲ್ಲಿ ನಾನು ಅನೇಕ ಸೂಚಕಕಾರ್ಯಗಳನ್ನು ಮಾಡಿದೆನು. ಅದೇ ಸೂಚಕ ಕಾರ್ಯಗಳು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅವುಗಳ ಜನರು ಬಹಳ ಹಿಂದೆಯೇ, ತಮ್ಮ ಜೀವಿತಗಳನ್ನು ಮಾರ್ಪಡಿಸಿಕೊಂಡು, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು, ಗೋಣಿತಟ್ಟನ್ನು ಧರಿಸಿಕೊಂಡು, ಬೂದಿಯನ್ನು ಬಳಿದುಕೊಳ್ಳುತ್ತಿದ್ದರು.


ಹಡಗುಗಳೇ, ನೀವು ತಾರ್ಷೀಷಿಗೆ ಹಿಂದಿರುಗಿರಿ! ಸಮುದ್ರ ತೀರದಲ್ಲಿ ವಾಸಿಸುವವರಾದ ನೀವು ದುಃಖಿಸಬೇಕು!


“ನರಪುತ್ರನೇ, ಜೆರುಸಲೇಮ್ ಬಗ್ಗೆ ತೂರ್ ಕೆಟ್ಟ ಮಾತುಗಳನ್ನಾಡಿದೆ. ‘ಜನರನ್ನು ಸುರಕ್ಷಿತವಾಗಿರಿಸುವ ನಗರದ್ವಾರವು ಕೆಡವಲ್ಪಟ್ಟು ದ್ವಾರವೇ ಇಲ್ಲದಂತಾಗಿದೆ. ನಗರವು ಹಾಳಾಗಿರುವುದರಿಂದ ಕೊಳ್ಳೆ ಹೊಡೆಯಲು ಸುಲಭವಾಯಿತು’ ಎಂದು ಅದು ಅಂದುಕೊಂಡಿದೆ.”


ಬಾಷಾನಿನ ಅಲ್ಲೋನ್ ಮರಗಳಿಂದ ಹುಟ್ಟುಗಳನ್ನು ತಯಾರಿಸಿದರು. ನಿನ್ನ ಮೇಲ್ಮಾಳಿಗೆಯನ್ನು ಕಿತ್ತೀಮ್ ದ್ವೀಪದ ತಿಲಕದ ಮರಗಳಿಂದ ಮಾಡಿದರು. ಅದನ್ನು ದಂತಗಳಿಂದ ಶೃಂಗರಿಸಿದರು.


ನಿನಗೋಸ್ಕರ ಅವರು ದುಃಖಿಸುತ್ತಾ ಅಳುವರು; ತಲೆಯ ಮೇಲೆ ಧೂಳನ್ನು ತೂರಿಕೊಂಡು ಬೂದಿರಾಶಿಯ ಮೇಲೆ ಹೊರಳಾಡುವರು.


ಯೆಹೋವನಿಗೆ ವಿಧೇಯನಾಗಲು ಯೋನನು ಇಷ್ಟಪಡದೆ ಆತನಿಂದ ತಪ್ಪಿಸಿಕೊಂಡು ಓಡಿಹೋಗಲು ಪ್ರಯತ್ನಿಸಿ ಯೊಪ್ಪಕ್ಕೆ ಹೋದನು. ಅಲ್ಲಿ ಬಹುದೂರದ ಪಟ್ಟಣವಾದ ತಾರ್ಷೀಷಿಗೆ ಹೋಗುವ ಹಡಗು ಹೊರಡಲು ಸಿದ್ಧವಾಗಿತ್ತು. ಅವನು ಪ್ರಯಾಣದರವನ್ನು ಕೊಟ್ಟು ಹಡಗನ್ನು ಹತ್ತಿದನು. ಆ ಜನರೊಂದಿಗೆ ತಾರ್ಷೀಷಿಗೆ ಪ್ರಯಾಣಮಾಡಿ ಯೆಹೋವನಿಂದ ದೂರಹೋಗಬೇಕೆಂಬುದೇ ಅವನ ಬಯಕೆಯಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು