Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 23:10 - ಪರಿಶುದ್ದ ಬೈಬಲ್‌

10 ತಾರ್ಷೀಷಿನ ಹಡಗಿನವರೇ, ನೀವು ಊರಿಗೆ ಹಿಂತಿರುಗಿರಿ. ಸಮುದ್ರವನ್ನು ಸಣ್ಣ ನದಿಯೋ ಎಂಬಂತೆ ದಾಟಿರಿ. ಯಾರೂ ನಿಮ್ಮನ್ನು ನಿಲ್ಲಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ತಾರ್ಷೀಷ್ ನಗರಿಯೇ, ನೈಲ್ ನದಿಯಂತೆ ನಿನ್ನ ಭೂಮಿಯನ್ನು ಬಿತ್ತು. ತೂರ್ ಪಟ್ಟಣದಲ್ಲಿ ಇನ್ನು ಮುಂದೆ ವ್ಯಾಪಾರ ಸ್ಥಳವು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ತಾರ್ಷೀಷ್ ನಗರವೇ, ನೈಲ್ ನದಿಯಂತೆ ನಿನ್ನ ನಾಡನ್ನು ಕೃಷಿಮಾಡು. ನಿನಗೆ ಬಂದರು ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ತಾರ್ಷೀಷ್ ನಗರಿಯೇ, ನೈಲ್ ನದಿಯಂತೆ ನಿನ್ನ ದೇಶವನ್ನು ಆವರಿಸು; ನಡುಕಟ್ಟು [ಸಡಲಿತು], ಇನ್ನಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ತಾರ್ಷೀಷಿನ ಮಗಳೇ, ನೈಲ್ ನದಿಯಂತೆ ನಿನ್ನ ದೇಶದಲ್ಲಿ ಹಾದುಹೋಗು. ಅಲ್ಲಿ ಇನ್ನು ನಿನ್ನನ್ನು ತಡೆಯುವವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 23:10
11 ತಿಳಿವುಗಳ ಹೋಲಿಕೆ  

ಆದ್ದರಿಂದ ತಾರ್ಷೀಷಿನ ಹಡಗುಗಳವರೇ, ದುಃಖಿಸಿರಿ! ನಿಮ್ಮ ಆಶ್ರಯದ ರೇವು ನಾಶವಾಗಿದೆ.


ಆತನೇ, ನನಗೆ ಬಲವನ್ನು ಕೊಡುವನು; ಶುದ್ಧ ಜೀವನವನ್ನು ನಡೆಸಲು ನನಗೆ ಸಹಾಯಮಾಡುವನು.


ದೇವರು ಪ್ರಮುಖರಿಗೆ ಅವಮಾನ ಮಾಡುವನು; ಅಧಿಪತಿಗಳ ಶಕ್ತಿಯನ್ನು ತೆಗೆದುಹಾಕುವನು.


ಆ ಕೂಡಲೇ ಸೌಲನು ನೆಲದ ಮೇಲೆ ಕುಸಿದು ಬಿದ್ದನು. ಸಮುವೇಲನು ಹೇಳಿದ ಮಾತುಗಳನ್ನು ಕೇಳಿ ಸೌಲನು ಭಯಗೊಂಡನು. ಸೌಲನು ಅಂದು ಹಗಲು ಮತ್ತು ರಾತ್ರಿ ಏನನ್ನೂ ತಿಂದಿರಲಿಲ್ಲ; ಆದ್ದರಿಂದ ಅವನು ಬಹಳ ಬಲಹೀನನಾಗಿದ್ದನು.


ನಾವು ಬಲಹೀನರೂ ದೇವರಿಗೆ ವಿರೋಧವಾಗಿ ಜೀವಿಸುವವರೂ ಆಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲದಲ್ಲಿ ನಮಗೋಸ್ಕರ ಪ್ರಾಣಕೊಟ್ಟನು.


ನಾನು ಅನೇಕ ಅರಸರನ್ನೂ ದೇಶಗಳನ್ನೂ ಕೆಡವಿಹಾಕುವೆನು; ಆ ಅನ್ಯ ಜನರ ಬಲಿಷ್ಠ ಸಾಮ್ರಾಜ್ಯಗಳನ್ನು ನಾಶಮಾಡುವೆನು. ಅವರ ರಥಗಳನ್ನೂ ರಾಹುತರನ್ನೂ ನಾಶಮಾಡುವೆನು. ಅವರ ಯುದ್ಧದ ಕುದುರೆಗಳನ್ನೂ ಸವಾರರನ್ನೂ ಸೋಲಿಸುವೆನು. ಆ ಸೈನ್ಯಗಳವರು ಈಗ ಸ್ನೇಹಿತರಾಗಿದ್ದರೂ ಒಬ್ಬರಿಗೊಬ್ಬರು ವೈರಿಗಳಾಗಿ ಒಬ್ಬರನ್ನೊಬ್ಬರು ಖಡ್ಗಗಳಿಂದ ಕೊಲ್ಲುವರು.”


ಚೀಯೋನಿನ ಮಗಳ ಸೌಂದರ್ಯವು ಹೊರಟುಹೋಗಿದೆ. ಅವಳ ರಾಜಕುಮಾರರು ಹುಲ್ಲುಗಾವಲನ್ನು ಕಂಡುಕೊಂಡಿಲ್ಲದ ಜಿಂಕೆಯಂತಾಗಿದ್ದಾರೆ. ಅವರು ಬಲಹೀನರಾಗಿ ಓಡಿಹೋದರು. ಬೆನ್ನಟ್ಟಿ ಬಂದ ಜನರಿಗೆ ಬೆಂಗೊಟ್ಟು ಓಡಿಹೋಗಿದ್ದಾರೆ.


ನದಿಯ ದಡದಲ್ಲಿರುವ ಮರಗಳೆಲ್ಲಾ ಒಣಗಿಹೋಗಿ ಗಾಳಿಯಲ್ಲಿ ಹಾರಿಹೋಗುವವು. ನದಿಯ ತೀರದಲ್ಲಿರುವ ಮರಗಳೂ ಒಣಗಿಹೋಗುವವು.


ಸರ್ವಶಕ್ತನಾದ ಯೆಹೋವನೇ. ಅದು ಪ್ರಾಮುಖ್ಯವಾಗದಂತೆ ಆತನೇ ತೀರ್ಮಾನಿಸಿದ್ದಾನೆ. ಆತನು ಗೌರವಿಸಲ್ಪಡುವ ಜನರನ್ನು ಅವಮಾನಪಡಿಸಬೇಕೆಂತಲೂ ಮಾಡಿದ್ದಾನೆ.


ಯೆಹೋವನು ಸಮುದ್ರದ ಮೇಲೆ ತನ್ನ ಕೈಯನ್ನು ಚಾಚಿದ್ದಾನೆ. ಆತನು ತೂರಿಗೆ ವಿರುದ್ಧವಾಗಿ ಯುದ್ಧಮಾಡಲು ರಾಜ್ಯಗಳನ್ನು ಒಟ್ಟುಗೂಡಿಸುತ್ತಾನೆ. ಯೆಹೋವನು ಕಾನಾನಿಗೆ ತೂರಿನ ಆಶ್ರಯಸ್ಥಳಗಳನ್ನು ನಾಶಮಾಡಲು ಆಜ್ಞಾಪಿಸುತ್ತಾನೆ.


ನೀನು ಬಿದ್ದ ದಿವಸ ಕರಾವಳಿಯಲ್ಲಿರುವ ದೇಶಗಳೆಲ್ಲಾ ನಡುಗುವವು. ನೀನು ಕರಾವಳಿಯಲ್ಲಿ ಅನೇಕ ವಸಾಹತುಗಳನ್ನು ನಿರ್ಮಿಸಿದ್ದೀ. ನೀನು ಹೋದ ಬಳಿಕ ಅವರು ಭಯಗ್ರಸ್ತರಾಗುವರು.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು