ಯೆಶಾಯ 23:17 - ಪರಿಶುದ್ದ ಬೈಬಲ್17 ಎಪ್ಪತ್ತು ವರ್ಷಗಳ ನಂತರ ಯೆಹೋವನು ತೂರಿನ ಕುರಿತು ಮತ್ತೆ ಆಲೋಚಿಸಿ ತೀರ್ಮಾನಿಸುವನು. ತೂರಿನಲ್ಲಿ ವ್ಯಾಪಾರವು ಮತ್ತೆ ಪ್ರಾರಂಭವಾಗುವದು. ಅದು ಲೋಕದ ಎಲ್ಲಾ ರಾಜ್ಯಗಳಿಗೆ ವೇಶ್ಯೆಯಂತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಎಪ್ಪತ್ತು ವರ್ಷಗಳ ಮೇಲೆ ಯೆಹೋವನು ತೂರ್ ಪಟ್ಟಣವನ್ನು ಪರಾಂಬರಿಸುವನು. ಅವಳು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕದಲ್ಲಿರುವ ಸಕಲ ಅರಸರೊಂದಿಗೆ ಸೇರಿ ವ್ಯಾಪಾರ ಮಾಡುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಎಪ್ಪತ್ತು ವರ್ಷಗಳಾದ ಮೇಲೆ ಸರ್ವೇಶ್ವರ ಟೈರಿಗೆ ಭೇಟಿನೀಡುವರು. ಆ ನಗರಿ ತನ್ನ ಕಸುಬಿಗೆ ಹಿಂದಿರುಗುವಳು. ಜಗದ ಎಲ್ಲ ರಾಷ್ಟ್ರಗಳೊಂದಿಗೆ ವ್ಯಾಪಾರ ಗೈಯುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಎಪ್ಪತ್ತು ವರುಷಗಳ ಮೇಲೆ ಯೆಹೋವನು ತೂರ್ ಎಂಬವಳಿಗೆ ನೇವಿುಸಲು ಅವಳು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಮಂಡಲದಲ್ಲಿ ಲೋಕದ ಸಕಲ ರಾಜ್ಯಗಳೊಂದಿಗೆ ಕಲೆಯುವಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಎಪ್ಪತ್ತು ವರುಷಗಳಾದ ಮೇಲೆ ಯೆಹೋವ ದೇವರು ಟೈರನ್ನು ಪರಾಮರಿಸುವರು. ಅದು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕದವರಲ್ಲಿರುವ ಎಲ್ಲಾ ರಾಜ್ಯಗಳ ಸಂಗಡ ಭೂಮಿಯ ಮೇಲೆ ವ್ಯಾಪಾರ ಮಾಡುವುದು. ಅಧ್ಯಾಯವನ್ನು ನೋಡಿ |
ನೀವು ಜವಾಬ್ದಾರಿ ವಹಿಸಿಕೊಂಡಿರುವ ಸಭೆಯನ್ನು ಪರಿಪಾಲಿಸಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅವರು ದೇವರ ಮಂದೆ. ನೀವು ಆ ಮಂದೆಯನ್ನು ಕಾಯಿರಿ, ಏಕೆಂದರೆ ಅದು ನಿಮ್ಮ ಬಯಕೆಯಾಗಿದೆ; ಅದು ಬಲವಂತದಿಂದ ಹೊರಿಸಿದ ಹೊರೆಯಲ್ಲ. ದೇವರು ಅದನ್ನೇ ಇಷ್ಟಪಡುತ್ತಾನೆ. ನೀವು ಆ ಮಂದೆಯನ್ನು ಕಾಯುವುದು ಹಣದ ನಿಮಿತ್ತವಲ್ಲ, ದೇವರ ಸೇವೆ ಮಾಡಲು ನಿಮಗಿರುವ ಸಂತಸದ ನಿಮಿತ್ತವಾಗಿಯೇ.
ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.
ಸೂಳೆತನದಿಂದ ಗಳಿಸಿದ ಹಣವನ್ನು ನಿಮ್ಮ ದೇವರಾದ ಯೆಹೋವನ ವಿಶೇಷ ವಾಸಸ್ಥಾನಕ್ಕೆ ತೆಗೆದುಕೊಂಡು ಬರಬಾರದು. ಒಬ್ಬನು ತಾನು ಹೊತ್ತುಕೊಂಡ ಹರಕೆಯನ್ನು ಆ ಹಣದಿಂದ ಪೂರೈಸಕೂಡದು. ಯಾಕೆಂದರೆ ಲೈಂಗಿಕ ಪಾಪದಲ್ಲಿ ತಮ್ಮ ದೇಹಗಳನ್ನು ಮಾರುವವರನ್ನು ನಿಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ; ಲೈಂಗಿಕ ಪಾಪಗಳ ಆದಾಯದಿಂದ ಬಂದ ಹಣದಿಂದ ಖರೀದಿ ಮಾಡಿದ ಕಾಣಿಕೆಗಳನ್ನು ಆತನು ದ್ವೇಷಿಸುತ್ತಾನೆ.