Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 23:18 - ಪರಿಶುದ್ದ ಬೈಬಲ್‌

18 ಆದರೆ ಆಕೆ ತಾನು ಗಳಿಸಿದ ಹಣವನ್ನು ತನ್ನಲ್ಲಿ ಇಟ್ಟುಕೊಳ್ಳುವದಿಲ್ಲ. ತೂರ್ ತನ್ನ ವ್ಯಾಪಾರದಲ್ಲಿ ಗಳಿಸಿದ ಲಾಭವನ್ನು ಯೆಹೋವನಿಗಾಗಿ ಶೇಖರಿಸಿಟ್ಟಿದ್ದಾಳೆ. ಯೆಹೋವನನ್ನು ಸೇವಿಸುವವರಿಗೆ ಆ ಲಾಭವನ್ನು ಮೀಸಲಾಗಿಟ್ಟಿದ್ದಾಳೆ. ಹೀಗೆ ಯೆಹೋವನ ಸೇವಕರು ಹೊಟ್ಟೆತುಂಬ ಊಟಮಾಡುವರು, ಒಳ್ಳೆಯ ಬಟ್ಟೆ ಧರಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಅವಳಿಗೆ ನಿಧಿನಿಕ್ಷೇಪವಾಗದೆ ಯೆಹೋವನಿಗೇ ಮೀಸಲಾಗುವುದು. ಆ ವ್ಯಾಪಾರವು ಯೆಹೋವನ ಸನ್ನಿಧಾನದಲ್ಲಿ ವಾಸಿಸುವವರಿಗೆ ಬೇಕಾದಷ್ಟು ಅನ್ನವನ್ನೂ, ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವಳ ವ್ಯಾಪಾರದಿಂದ ಬಂದ ಆದಾಯ ಅವಳಿಗೆ ನಿಧಿನಿಕ್ಷೇಪವಾಗದೆ ಸರ್ವೇಶ್ವರ ಸ್ವಾಮಿಗೆ ಮೀಸಲಾಗುವುದು. ಅದು ಸರ್ವೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ ವಾಸಮಾಡುವವರಿಗೆ ಬೇಕಾದಷ್ಟು ಆಹಾರವನ್ನೂ ಅತ್ಯುತ್ತಮವಾದ ಉಡುಪನ್ನೂ ಒದಗಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವಳ ವ್ಯಾಪಾರವೂ ಆದಾಯವೂ ಅವಳಿಗೆ ನಿಧಿನಿಕ್ಷೇಪವಾಗದೆ ಯೆಹೋವನಿಗೇ ಮೀಸಲಾಗುವದು; ಆ ವ್ಯಾಪಾರವು ಯೆಹೋವನ ಸನ್ನಿಧಾನದಲ್ಲಿ ವಾಸಿಸುವವರಿಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಯೆಹೋವ ದೇವರಿಗೆ ಪರಿಶುದ್ಧವಾಗುವುದು. ಅವಳ ಆದಾಯವು ಯೆಹೋವ ದೇವರ ಸನ್ನಿಧಾನದಲ್ಲಿ ವಾಸಿಸುವವರೆಗೆ ಬೇಕಾದಷ್ಟು ಅನ್ನವನ್ನೂ, ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 23:18
31 ತಿಳಿವುಗಳ ಹೋಲಿಕೆ  

ತಾರ್ಷೀಷಿನ ರಾಜರುಗಳೂ ಬಹುದೂರದ ದೇಶಗಳವರೂ ಅವನಿಗೆ ಉಡುಗೊರೆಗಳನ್ನು ಕೊಡಲಿ. ಶೆಬಾ ಮತ್ತು ಸೆಬಾ ಪ್ರಾಂತ್ಯಗಳ ರಾಜರುಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಕೊಡಲಿ.


ದೇವರ ವಾಕ್ಯವನ್ನು ಕಲಿತುಕೊಳ್ಳುವವನು, (ತನಗೆ) ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಒಳ್ಳೆತನಗಳಲ್ಲಿ ಪಾಲು ಕೊಡತಕ್ಕದ್ದು.


“ಶುದ್ಧಬಂಗಾರದ ಪಟ್ಟಿಯನ್ನು ಮಾಡಿಸಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ “ಯೆಹೋವನಿಗೆ ಮೀಸಲು” ಎಂಬ ಮಾತುಗಳನ್ನು ಚಿನ್ನದಲ್ಲಿ ಕೆತ್ತಿಸಬೇಕು.


ಪೇತ್ರನು ಸಿದ್ಧನಾಗಿ ಅವರೊಂದಿಗೆ ಹೋದನು. ಅವನು ಅಲ್ಲಿಗೆ ತಲುಪಿದಾಗ, ಅವರು ಅವನನ್ನು ಮೇಲ್ಮಾಳಿಗೆಯ ಕೋಣೆಗೆ ಕರೆದುಕೊಂಡು ಹೋದರು. ವಿಧವೆಯರೆಲ್ಲ ಅಳುತ್ತಾ ಪೇತ್ರನನ್ನು ಸುತ್ತುವರಿದರು. ದೊರ್ಕಳು ಜೀವಂತವಾಗಿದ್ದಾಗ ತಮಗಾಗಿ ತಯಾರಿಸಿ ಕೊಟ್ಟ ಮೇಲಂಗಿಗಳನ್ನು ಮತ್ತು ಬಟ್ಟೆಗಳನ್ನು ಅವರು ಪೇತ್ರನಿಗೆ ತೋರಿಸಿದರು.


ನಿಮ್ಮಲ್ಲಿರುವ ಆಸ್ತಿಯನ್ನು ಮಾರಿ, ಬಂದ ಹಣವನ್ನು ಕೊರತೆಯಲ್ಲಿರುವ ಜನರಿಗೆ ಕೊಡಿರಿ. ಈ ಲೋಕದ ಐಶ್ವರ್ಯ ಶಾಶ್ವತವಲ್ಲ. ಆದ್ದರಿಂದ ಶಾಶ್ವತವಾದ ಐಶ್ವರ್ಯವನ್ನು ಗಳಿಸಿಕೊಳ್ಳಿರಿ. ಲಯವಾಗದ ಸಂಪತ್ತನ್ನು ಪರಲೋಕದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಆ ಭಂಡಾರವನ್ನು ಕಳ್ಳರು ಕದಿಯಲಾಗುವುದಿಲ್ಲ ಮತ್ತು ಹುಳಗಳು ನಾಶಮಾಡಲಾಗುವುದಿಲ್ಲ.


ಇದಲ್ಲದೆ ಕೂಜನ (ಹೆರೋದನ ಸಹಾಯಕ) ಹೆಂಡತಿಯಾದ ಯೋಹಾನಳು, ಸುಸನ್ನಳು ಮತ್ತು ಬೇರೆ ಅನೇಕ ಸ್ತ್ರೀಯರು ಇದ್ದರು. ಈ ಸ್ತ್ರೀಯರು ಯೇಸುವಿಗೂ ಆತನ ಅಪೊಸ್ತಲರಿಗೂ ತಮ್ಮ ಸ್ವಂತ ಹಣದಿಂದ ಸಹಾಯ ಮಾಡುತ್ತಿದ್ದರು.


ಅನೇಕಾನೇಕ ಜನರು ಜುದೇಯದಿಂದ, ಜೆರುಸಲೇಮಿನಿಂದ, ಇದೂಮಾಯದಿಂದ, ಜೋರ್ಡನ್ ನದಿಯ ಆಚೆಗಿರುವ ಪ್ರದೇಶದಿಂದ ಮತ್ತು ಟೈರ್, ಸೀದೋನ್‌ಗಳ ಸುತ್ತಲಿನ ಪ್ರದೇಶಗಳಿಂದ ಬಂದರು. ಯೇಸುವು ಮಾಡುತ್ತಿದ್ದ ಕಾರ್ಯಗಳ ಬಗ್ಗೆ ಅವರು ಕೇಳಿ ಬಂದಿದ್ದರು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ಈ ಪರೀಕ್ಷೆ ಮಾಡಿನೋಡಿ. ನಿಮ್ಮ ವಸ್ತುಗಳ ಹತ್ತನೇ ಒಂದು ಅಂಶವನ್ನು ನನಗೆ ತೆಗೆದುಕೊಂಡು ಬನ್ನಿರಿ. ಅವುಗಳನ್ನು ಆಲಯದ ಬಂಡಾರದೊಳಗೆ ಹಾಕಿರಿ. ನನ್ನ ಮನೆಗೆ ನೀವು ಆಹಾರ ವಸ್ತುಗಳನ್ನು ತನ್ನಿರಿ. ನನ್ನನ್ನು ಪರೀಕ್ಷಿಸಿರಿ. ನೀವು ಹೀಗೆ ಮಾಡುವುದಾದರೆ ಖಂಡಿತವಾಗಿಯೂ ನಾನು ನಿಮ್ಮನ್ನು ಆಶೀರ್ವದಿಸುವೆನು. ಆಕಾಶದಿಂದ ಮಳೆ ಸುರಿಯುವ ಹಾಗೆ ನಿಮಗೆ ಶುಭವು ಸುರಿಯುವವು. ನಿಮ್ಮ ಮನೆಯಲ್ಲಿ ಬೇಕಾಗಿರುವದಕ್ಕಿಂತ ಹೆಚ್ಚು ಯಾವಾಗಲೂ ಇರುವದು.


“ಚೀಯೋನ್ ಕುಮಾರಿಯೇ ಎದ್ದೇಳು, ಆ ಜನರನ್ನು ಪುಡಿಮಾಡು! ನಾನು ನಿನ್ನನ್ನು ಬಲಶಾಲಿಯನ್ನಾಗಿ ಮಾಡುವೆನು. ಕಬ್ಬಿಣದ ಕೊಂಬುಗಳಿರುವಂತೆ, ತಾಮ್ರದ ಗೊರಸುಗಳಿರುವಂತೆ ನಿನ್ನನ್ನು ಮಾಡುವೆನು. ಎಷ್ಟೋ ಜನರನ್ನು ನೀನು ತುಂಡುತುಂಡು ಮಾಡುವೆ. ಅವರ ಐಶ್ವರ್ಯವನ್ನು ನೀನು ಯೆಹೋವನಿಗೆ ಕೊಡುವೆ. ಅವರ ನಿಕ್ಷೇಪಗಳನ್ನು ಇಡೀ ಭೂಮಿಗೆ ಒಡೆಯನಾಗಿರುವ ಯೆಹೋವನಿಗೆ ಅರ್ಪಿಸುವೆ.”


ದೇವರು ತಾನು ಮೆಚ್ಚಿಕೊಂಡವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ಕೊಡುವನು. ಪಾಪಿಗಾದರೋ ಪ್ರಯಾಸದಿಂದ ಸಂಪಾದಿಸುವ ಮತ್ತು ಕೂಡಿಸಿಡುವ ಕೆಲಸವನ್ನು ಕೊಡುವನು. ಅವನು ಕೂಡಿಸಿಟ್ಟವುಗಳನ್ನು ದೇವರು ತನ್ನ ಮೆಚ್ಚಿಕೆಗೆ ಪಾತ್ರನಾದವನಿಗೆ ಕೊಡುವನು. ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ಬಡವರಿಗೆ ಮೋಸಮಾಡಿ ಗಳಿಸಿದ ಐಶ್ವರ್ಯ ಕಳೆದುಹೋಗುವುದು; ಬಡವರಿಗೆ ದಯೆ ತೋರುವವನಿಗೆ ಅದು ದೊರೆಯುವುದು.


ಒಳ್ಳೆಯವನಲ್ಲಿ ತನ್ನ ಮಕ್ಕಳಿಗೂ ಮೊಮ್ಮಕ್ಕಳಿಗೂ ಕೊಡಲು ಐಶ್ವರ್ಯವಿರುವುದು. ಕಟ್ಟಕಡೆಯಲ್ಲಿ, ಕೆಡುಕರು ಹೊಂದಿರುವದೆಲ್ಲಾ ಒಳ್ಳೆಯವರ ಪಾಲಾಗುವುದು.


ತೂರ್ ಪಟ್ಟಣದ ಶ್ರೀಮಂತರು ನಿನ್ನನ್ನು ಸಂಧಿಸಲು ನಿನಗಾಗಿ ಉಡುಗೊರೆಗಳನ್ನು ತರುವರು.


ಅರಸರುಗಳೆಲ್ಲಾ ನಮ್ಮ ರಾಜನಿಗೆ ಅಡ್ಡಬೀಳಲಿ. ಜನಾಂಗಗಳೆಲ್ಲಾ ಅವನ ಸೇವೆಮಾಡಲಿ.


ನೆಬೂಕದ್ನೆಚ್ಚರನ ಸೈನ್ಯವು ನಿನ್ನ ಐಶ್ವರ್ಯವನ್ನು ದೋಚಿಕೊಳ್ಳುವದು. ನೀನು ಮಾರಬೇಕೆಂದಿದ್ದ ವಸ್ತುಗಳನ್ನು ಅವರು ದೋಚಿಕೊಳ್ಳುವರು. ನಿನ್ನ ಗೋಡೆಗಳನ್ನು ಒಡೆದು ಅಂದವಾದ ನಿನ್ನ ಮನೆಗಳನ್ನು ಹಾಳು ಮಾಡುವರು. ನಿನ್ನ ಮರದಿಂದ ಮತ್ತು ಕಲ್ಲುಗಳಿಂದ ಮಾಡಿದ ಮನೆಗಳನ್ನು ಕಸದಂತೆ ಸಮುದ್ರಕ್ಕೆ ಎಸೆಯುವರು.


ಐದು ತಲಾಂತು ತೆಗೆದುಕೊಂಡ ಸೇವಕನು ತಕ್ಷಣವೇ ಹೋಗಿ ಆ ಹಣವನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಸಂಪಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು