Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 23:3 - ಪರಿಶುದ್ದ ಬೈಬಲ್‌

3 ಅವರು ಸಮುದ್ರ ಪ್ರಯಾಣ ಮಾಡುತ್ತಾ ಧಾನ್ಯಕ್ಕಾಗಿ ಹುಡುಕುತ್ತಿದ್ದಾರೆ. ತೂರಿನ ಜನರು ನೈಲ್ ನದಿಯ ಬದಿಗಳಲ್ಲಿ ಬೆಳೆಸುವ ಧಾನ್ಯವನ್ನು ಕೊಂಡುಕೊಂಡು ಇತರ ದೇಶಗಳಿಗೆ ಮಾರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ವಿಶಾಲವಾದ ಸಾಗರದ ಮೇಲೆ ತಂದ ಶೀಹೋರಿನ ಧಾನ್ಯದಿಂದಲೂ, ನೈಲ್ ನದಿಯ ಬೆಳೆಯಿಂದಲೂ ಆದಾಯಹೊಂದಿದ ನಿಮ್ಮ ನಗರವು ಅನೇಕ ಜನಾಂಗಗಳಿಗೆ ವ್ಯಾಪಾರ ಸ್ಥಳವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಶೀಹೋರಿನ ಧಾನ್ಯದಿಂದಲೂ ನೈಲಿನ ಬೆಳೆಯಿಂದಲೂ ಆದಾಯ ಪಡೆದಿರಿ, ನಿಮ್ಮ ನಗರ ಹಲವಾರು ನಾಡುಗಳಿಗೆ ಮಾರುಕಟ್ಟೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ವಿಶಾಲವಾದ ಸಾಗರದ ಮೇಲೆ ತಂದ ಶೀಹೋರಿನ ಧಾನ್ಯದಿಂದಲೂ ನೈಲಿನ ಬೆಳೆಯಿಂದಲೂ ಆದಾಯ ಹೊಂದಿದ [ನಿಮ್ಮ ನಗರಿಯು] ಅನೇಕ ಜನಾಂಗಗಳಿಗೆ ಲಾಭಕರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಪ್ರವಾಹದಿಂದ ಶೀಹೋರಿನ ಧಾನ್ಯವೂ, ನೈಲ್ ನದಿಯ ಸುಗ್ಗಿಯೂ ಅದಕ್ಕೆ ಆದಾಯವಾಗಿತ್ತು. ಅನೇಕ ಜನಾಂಗಗಳಿಗೆ ವ್ಯಾಪಾರ ಸ್ಥಳವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 23:3
12 ತಿಳಿವುಗಳ ಹೋಲಿಕೆ  

ಯೆಹೂದದ ಜನರೇ, ಅದರ ಬಗ್ಗೆ ಯೋಚಿಸಿರಿ. ಇದರಿಂದ ನಿಮಗೆ ಈಜಿಪ್ಟಿಗೆ ಹೋಗಲು ಸಹಾಯವಾಯಿತೇ? ನೈಲ್ ನದಿಯ ನೀರನ್ನು ಕುಡಿಯಲು ಈಜಿಪ್ಟಿಗೆ ಹೋಗುವುದೇಕೆ? ಅವರ ನದಿಯ ನೀರನ್ನು ಕುಡಿಯಲು ಅಸ್ಸೀರಿಯಕ್ಕೆ ಹೋಗುವುದೇಕೆ?


ಆಗ ದಾವೀದನು ಈಜಿಪ್ಟಿನ ಶೀಹೋರ್ ನದಿಯಿಂದ ಹಿಡಿದು ಲೆಬೊಹಮಾತ್ ಪಟ್ಟಣದ ತನಕ ಇದ್ದ ಇಸ್ರೇಲರನ್ನೆಲ್ಲಾ ಒಟ್ಟು ಸೇರಿಸಿದನು; ಅವರೆಲ್ಲರೂ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಕಿರ್ಯತ್ಯಾರೀಮಿನಿಂದ ತರಲು ಹೊರಟರು.


ನೀವು ನನ್ನ ಬೆಳ್ಳಿಬಂಗಾರವನ್ನು ಕದ್ದುಕೊಂಡು ಹೋದಿರಿ. ನನ್ನ ಅಮೂಲ್ಯವಾದ ಸಂಪತ್ತನ್ನು ಕೊಂಡು ಹೋಗಿ ನಿಮ್ಮ ಪೂಜಾಸ್ಥಳಗಳಲ್ಲಿ ಇಟ್ಟಿರಿ.


ನಿನ್ನ ಜ್ಞಾನ ಮತ್ತು ತಿಳುವಳಿಕೆಯಿಂದ ನೀನು ಐಶ್ವರ್ಯವನ್ನು ಕೂಡಿಹಾಕಿದ್ದೀ. ನಿನ್ನ ಖಜಾನೆಯಲ್ಲಿ ಬೆಳ್ಳಿಬಂಗಾರವನ್ನು ಶೇಖರಿಸಿದ್ದೀ.


ನಿನ್ನ ವ್ಯಾಪಾರಿಗಳು ಸಮುದ್ರದಾಚೆ ಹೋದರು; ನೀನು ಅನೇಕರನ್ನು ತೃಪ್ತಿಗೊಳಿಸಿದಿ. ನಿನ್ನ ಐಶ್ವರ್ಯದಿಂದಲೂ ನೀನು ಮಾರಿದ ಸರಕುಗಳಿಂದಲೂ ನೀನು ಲೋಕದ ರಾಜರನ್ನು ಐಶ್ವರ್ಯವಂತರನ್ನಾಗಿ ಮಾಡಿದಿ.


ನಿಮ್ಮಲ್ಲಿ ಕೆಲವರು ಪ್ರತಿಯೊಂದು ನೀರಿನ ತೊರೆಗಳ ಬಳಿಯಲ್ಲಿ ಬೀಜ ಬಿತ್ತುವರು. ಅದರ ಸುತ್ತಲೂ ಹೋಗಿ ಯಾವ ಆತಂಕವಿಲ್ಲದೆ ತಿನ್ನಲು ನೀವು ನಿಮ್ಮ ಪಶುಗಳನ್ನು ಬಿಡುವಿರಿ; ಸಂತಸದಿಂದ ಇರುವಿರಿ.


ತೂರ್ ಪಟ್ಟಣವು ಅನೇಕ ಗಣ್ಯವ್ಯಕ್ತಿಗಳನ್ನು ಕೊಟ್ಟಿರುತ್ತದೆ. ಅಲ್ಲಿಯ ವರ್ತಕರಿಗೆ ಪ್ರಪಂಚದ ಎಲ್ಲಾ ಕಡೆಯೂ ಗೌರವವಿದೆ. ಆದ್ದರಿಂದ ಇಂಥ ತೂರ್ ವಿರುದ್ಧ ಯೋಜನೆ ಮಾಡಿದವರಾರು?


ನದಿಯ ದಡದಲ್ಲಿರುವ ಮರಗಳೆಲ್ಲಾ ಒಣಗಿಹೋಗಿ ಗಾಳಿಯಲ್ಲಿ ಹಾರಿಹೋಗುವವು. ನದಿಯ ತೀರದಲ್ಲಿರುವ ಮರಗಳೂ ಒಣಗಿಹೋಗುವವು.


ನಿಮಗೆ ದೊರಕಲಿರುವ ದೇಶವು ನೀವು ಹೊರಟುಬಂದ ಈಜಿಪ್ಟ್ ದೇಶದಂತಿಲ್ಲ. ಈಜಿಪ್ಟಿನಲ್ಲಿ ನೀವು ಬಿತ್ತನೆ ಮಾಡಿದ ಮೇಲೆ ನೀರನ್ನು ಹಾಯಿಸಲು ನಿಮ್ಮ ಕಾಲುಗಳನ್ನು ಬಳಸುತ್ತಿದ್ದಿರಿ. ನಿಮ್ಮ ತರಕಾರಿ ತೋಟಗಳಿಗೆ ನೀರು ಹಾಯಿಸುವಂತೆಯೇ ನಿಮ್ಮ ಗದ್ದೆಗಳಿಗೂ ನೀರನ್ನು ಹಾಯಿಸುತ್ತಿದ್ದಿರಿ.


ಈಜಿಪ್ಟಿನ ಶೀಹೋರ್ ನದಿಯಿಂದ ಉತ್ತರದ ಎಕ್ರೋನ್ ಸೀಮೆಯವರೆಗೂ ಚಾಚಿಕೊಂಡಿರುವ ಭೂಮಿಯನ್ನು ನೀನು ವಶಪಡಿಸಿಕೊಂಡಿಲ್ಲ. ಆ ಭೂಮಿಯು ಇನ್ನೂ ಕಾನಾನ್ಯರ ಅಧೀನದಲ್ಲಿದೆ. ನೀನು ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು ಮತ್ತು ಎಕ್ರೋನಿನ ಎಂಬ ಐದು ಮಂದಿ ಫಿಲಿಷ್ಟಿಯರ ನಾಯಕರನ್ನು ಇನ್ನೂ ಸೋಲಿಸಬೇಕಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು