ಯೆಶಾಯ 23:4 - ಪರಿಶುದ್ದ ಬೈಬಲ್4 ಚೀದೋನೇ, ನೀನು ತುಂಬಾ ದುಃಖದಿಂದಿರಬೇಕು. ಯಾಕೆಂದರೆ ಸಮುದ್ರವೂ ಸಮುದ್ರದ ಕೋಟೆಯೂ ಹೇಳುವುದೇನೆಂದರೆ, “ನನಗೆ ಮಕ್ಕಳಿಲ್ಲ, ನಾನು ಪ್ರಸವವೇದನೆ ಅನುಭವಿಸಲಿಲ್ಲ. ನಾನು ಮಕ್ಕಳನ್ನು ಹೆರಲಿಲ್ಲ. ನಾನು ಗಂಡುಮಕ್ಕಳನ್ನಾಗಲಿ ಹೆಣ್ಣುಮಕ್ಕಳನ್ನಾಗಲಿ ಬೆಳೆಸಲಿಲ್ಲ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಚೀದೋನೇ, ನಾಚಿಕೆಪಡು. ಏಕೆಂದರೆ ಸಮುದ್ರವೂ, ಸಮುದ್ರದ ದುರ್ಗವೂ, “ನಾವು ವೇದನೆ ಪಡಲಿಲ್ಲ, ಪ್ರಸವಿಸಲಿಲ್ಲ, ಯುವತಿ ಯುವಕರನ್ನು ಸಾಕಿ ಸಲಹಲಿಲ್ಲ” ಎಂದು ನುಡಿದಿದೆಯಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸಿದೋನ್ ನಗರವೇ, ನಿನಗೆ ನಾಚಿಕೆಗೇಡು ! ಸಮುದ್ರವೂ ಸಮುದ್ರ ತಳವೂ ನಿನ್ನನ್ನು ನಿರಾಕರಿಸುತ್ತಾ; “ನಾನು ಗರ್ಭಧರಿಸಲಿಲ್ಲ, ಪ್ರಸವಿಸಲಿಲ್ಲ, ಪುತ್ರಪುತ್ರಿಯರನ್ನು ಸಾಕಿ ಸಲಹಲಿಲ್ಲ,” ಎಂದು ನುಡಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಚೀದೋನೇ, ನಾಚಿಕೆಪಡು; ಸಮುದ್ರವು, ಸಮುದ್ರದುರ್ಗವು - ನಾವು ವೇದನೆಪಡಲಿಲ್ಲ, ಪ್ರಸವಿಸಲಿಲ್ಲ, ಯುವತಿಯುವಕರನ್ನು ಸಾಕಿ ಸಲಹಲಿಲ್ಲ ಎಂದು ನುಡಿದಿದೆಯಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಸೀದೋನೇ ಮತ್ತು ಸಮುದ್ರದ ಕೋಟೆಯೇ ನಾಚಿಕೆಪಡಿರಿ. ಏಕೆಂದರೆ ಇದೇ ಸಮುದ್ರದ ಘೋಷಣೆಯಾಗಿದೆ: “ನಾವು ಪ್ರಸವವೇದನೆ ಪಡುವುದಿಲ್ಲ, ಹೆರುವುದಿಲ್ಲ, ಇಲ್ಲವೆ ಪುತ್ರಪುತ್ರಿಯರನ್ನು ಸಾಕಿ ಸಲಹುವುದಿಲ್ಲ,” ಅಧ್ಯಾಯವನ್ನು ನೋಡಿ |