Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 23:8 - ಪರಿಶುದ್ದ ಬೈಬಲ್‌

8 ತೂರ್ ಪಟ್ಟಣವು ಅನೇಕ ಗಣ್ಯವ್ಯಕ್ತಿಗಳನ್ನು ಕೊಟ್ಟಿರುತ್ತದೆ. ಅಲ್ಲಿಯ ವರ್ತಕರಿಗೆ ಪ್ರಪಂಚದ ಎಲ್ಲಾ ಕಡೆಯೂ ಗೌರವವಿದೆ. ಆದ್ದರಿಂದ ಇಂಥ ತೂರ್ ವಿರುದ್ಧ ಯೋಜನೆ ಮಾಡಿದವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದು ಕಿರೀಟದಾಯಕವಾದ ಪಟ್ಟಣವು. ಅದರ ವರ್ತಕರು ಪ್ರಭುಗಳು, ಅದರ ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಸಂಕಲ್ಪವನ್ನು ಮಾಡಿದವನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇದರ ವ್ಯಾಪಾರಿಗಳು ವಿಶ್ವವಿಖ್ಯಾತರು. ಇಂಥ ಟೈರ್ ಪಟ್ಟಣಕ್ಕೆ ನಾಶವೊದಗಿದುದನ್ನು ಯೋಚಿಸಿದವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅದು ಕಿರೀಟದಾಯಕವು; ಅದರ ವರ್ತಕರು ಪ್ರಭುಗಳು, ಅದರ ವ್ಯಾಪಾರಿಗಳು ಲೋಕಮಾನ್ಯರು; ಇಂಥ ತೂರಿಗೆ ವಿರುದ್ಧವಾಗಿ ಈ ಸಂಕಲ್ಪವನ್ನು ಮಾಡಿದವನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅದು ಕಿರೀಟದಾಯಕವಾದ ಪಟ್ಟಣವು. ಅದರ ವರ್ತಕರಾದ ಪ್ರಭುಗಳು, ಅದರ ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ಟೈರಿಗೆ ವಿರುದ್ಧವಾಗಿ ಈ ಆಲೋಚನೆ ಮಾಡಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 23:8
11 ತಿಳಿವುಗಳ ಹೋಲಿಕೆ  

ಆದ್ದರಿಂದ ಅವಳಿಗೆ ಮರಣ, ಗೋಳಾಟ, ಭೀಕರ ಕ್ಷಾಮ ಎಂಬ ಉಪದ್ರವಗಳು ಒಂದೇ ದಿನದಲ್ಲಿ ಬರುತ್ತವೆ. ಅವಳಿಗೆ ತೀರ್ಪು ನೀಡಿದ ದೇವರಾಗಿರುವ ಪ್ರಭುವು ಬಲಿಷ್ಠನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುತ್ತಾಳೆ.”


ಹೀಗಿದ್ದರೂ ನನ್ನ ಒಡೆಯನ ಸೈನ್ಯಾಧಿಕಾರಿಗಳಲ್ಲಿ ಕನಿಷ್ಠನಾದವನನ್ನು ಸೋಲಿಸಲು ನಿಮ್ಮಿಂದಾಗದು. ಆದ್ದರಿಂದ ನೀವು ಈಜಿಪ್ಟಿನವರ ಅಶ್ವದಳದ ಮೇಲೆ ಯಾಕೆ ಭರವಸವಿಡುತ್ತೀರಿ?


ಅಶ್ಶೂರವು ಹೀಗೆ ಹೇಳುತ್ತದೆ: ‘ನನ್ನ ನಾಯಕರೆಲ್ಲಾ ರಾಜರಂತಿರುತ್ತಾರೆ.


ದೀಪದ ಬೆಳಕು ಇನ್ನೆಂದಿಗೂ ನಿನ್ನಲ್ಲಿ ಪ್ರಕಾಶಿಸುವುದಿಲ್ಲ. ವಧೂವರರ ಧ್ವನಿಯು ಇನ್ನೆಂದಿಗೂ ನಿನ್ನಲ್ಲಿ ಕೇಳಿಬರುವುದಿಲ್ಲ. ನಿನ್ನ ವರ್ತಕರು ಪ್ರಪಂಚದ ಮಹಾಪುರುಷರಾಗಿದ್ದರು. ನಿನ್ನ ಮಾಟದಿಂದ ಎಲ್ಲಾ ಜನಾಂಗಗಳೂ ಮರುಳಾದರು.


ನೆಬೂಕದ್ನೆಚ್ಚರನ ಸೈನ್ಯವು ನಿನ್ನ ಐಶ್ವರ್ಯವನ್ನು ದೋಚಿಕೊಳ್ಳುವದು. ನೀನು ಮಾರಬೇಕೆಂದಿದ್ದ ವಸ್ತುಗಳನ್ನು ಅವರು ದೋಚಿಕೊಳ್ಳುವರು. ನಿನ್ನ ಗೋಡೆಗಳನ್ನು ಒಡೆದು ಅಂದವಾದ ನಿನ್ನ ಮನೆಗಳನ್ನು ಹಾಳು ಮಾಡುವರು. ನಿನ್ನ ಮರದಿಂದ ಮತ್ತು ಕಲ್ಲುಗಳಿಂದ ಮಾಡಿದ ಮನೆಗಳನ್ನು ಕಸದಂತೆ ಸಮುದ್ರಕ್ಕೆ ಎಸೆಯುವರು.


ನಿನ್ನಲ್ಲಿ ಅನೇಕ ವ್ಯಾಪಾರಸ್ಥರು ಊರೂರಿಗೆ ತಿರುಗಿ ವ್ಯಾಪಾರ ಮಾಡುವವರಿದ್ದಾರೆ. ಅವರು ಆಕಾಶದಲ್ಲಿರುವ ನಕ್ಷತ್ರಗಳಷ್ಟು ಇದ್ದಾರೆ. ಅವರು ಮಿಡತೆಗಳಂತೆ ಬಂದು, ಎಲ್ಲವನ್ನು ತಿಂದು ಮುಗಿಸಿದ ಬಳಿಕ ಹೋಗುವಂಥವರಾಗಿದ್ದಾರೆ.


ತೂರ್ ಒಂದು ಕೋಟೆಯಂತೆ ಕಟ್ಟಲ್ಪಟ್ಟಿದೆ. ಅಲ್ಲಿರುವ ಜನರು ಬೆಳ್ಳಿಯನ್ನು ಧೂಳಿನಂತೆ ಸಂಗ್ರಹಿಸಿರುತ್ತಾರೆ. ಬಂಗಾರವಂತೂ ಮಣ್ಣಿನ ತರಹ ಸಾಮಾನ್ಯವಾಗಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು