ಯೆಶಾಯ 23:9 - ಪರಿಶುದ್ದ ಬೈಬಲ್9 ಸರ್ವಶಕ್ತನಾದ ಯೆಹೋವನೇ. ಅದು ಪ್ರಾಮುಖ್ಯವಾಗದಂತೆ ಆತನೇ ತೀರ್ಮಾನಿಸಿದ್ದಾನೆ. ಆತನು ಗೌರವಿಸಲ್ಪಡುವ ಜನರನ್ನು ಅವಮಾನಪಡಿಸಬೇಕೆಂತಲೂ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ, ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇದು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಸಂಕಲ್ಪವೇ ಸರಿ. ಗರ್ವಿಗಳ ಸಕಲ ದರ್ಪವನ್ನು ದಮನಮಾಡಲು, ವಿಶ್ವವಿಖ್ಯಾತರನ್ನು ಅವಮಾನಗೊಳಿಸಲು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಯೋಜನೆಯಿದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಗರ್ವದ ಸಕಲ ವೈಭವವನ್ನು ಹೊಲಸುಮಾಡಬೇಕೆಂತಲೂ ಲೋಕಮಾನ್ಯರೆಲ್ಲರನ್ನು ಅವಮಾನ ಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ, ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರ ಯೆಹೋವ ದೇವರೇ ಹೀಗೆ ಸಂಕಲ್ಪಿಸಿದ್ದಾರೆ. ಅಧ್ಯಾಯವನ್ನು ನೋಡಿ |