ಯೆಶಾಯ 24:17 - ಪರಿಶುದ್ದ ಬೈಬಲ್17 ಈ ದೇಶದಲ್ಲಿ ವಾಸಿಸುವ ಜನರಿಗೆ ಅಪಾಯವು ಕಾದಿದೆ ಎಂದು ನನಗೆ ತೋರುತ್ತಿದೆ. ಅವರಿಗೆ ಭಯ, ಉರುಲು, ಗುಂಡಿಗಳು ಕಾದಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಭೂನಿವಾಸಿಗಳೇ, ಭಯವೂ, ಗುಂಡಿಯೂ, ಬಲೆಯೂ ನಿಮಗೆ ಕಾದಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಎಲೈ ಭೂನಿವಾಸಿಗಳೇ, ಕೇಳಿರೆಲ್ಲರು, ಕಾದಿದೆ ನಿಮಗೆ ಭಯಭೀತಿ, ಕುಳಿ ಮತ್ತು ಬಲೆಯು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಭೂನಿವಾಸಿಯೇ, ಭಯವೂ ಗುಂಡಿಯೂ ಬಲೆಯೂ ನಿನಗೆ ಕಾದಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಭೂಮಿಯ ನಿವಾಸಿಗಳೇ, ಭಯವೂ, ಕುಳಿಯೂ, ಬಲೆಯೂ ನಿಮಗೆ ಕಾದಿವೆ. ಅಧ್ಯಾಯವನ್ನು ನೋಡಿ |
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.