Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 24:18 - ಪರಿಶುದ್ದ ಬೈಬಲ್‌

18 ಜನರು ಅಪಾಯದ ವಿಷಯ ಕೇಳಿ ಭಯಗ್ರಸ್ಥರಾಗುವರು. ಕೆಲವರು ಓಡಿಹೋಗುವರು. ಆದರೆ ಅವರು ಗುಂಡಿಯೊಳಗೆ ಬಿದ್ದು ಸಿಕ್ಕಿಕೊಳ್ಳುವರು. ಅವರಲ್ಲಿ ಕೆಲವರು ಗುಂಡಿಯಿಂದ ಹೊರಬರುವರು, ಆದರೆ ಅವರು ಇನ್ನೊಂದು ಉರುಲಿನೊಳಗೆ ಸಿಕ್ಕಿಹಾಕಿಕೊಳ್ಳುವರು. ಆಕಾಶದಲ್ಲಿರುವ ಪ್ರವಾಹದ ದ್ವಾರಗಳು ತೆರೆಯಲ್ಪಡುವವು. ಪ್ರವಾಹವು ತುಂಬುವದು; ಭೂಮಿಯ ಅಸ್ತಿವಾರಗಳು ಕದಲುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಭಯದ ಸಪ್ಪಳದಿಂದ ಓಡಿ ಹೋಗುವವನು ಗುಂಡಿಯಲ್ಲಿ ಬೀಳುವನು, ಗುಂಡಿಯನ್ನು ಹತ್ತಿ ಬರುವವನು ಬಲೆಗೆ ಸಿಕ್ಕುವನು. ನೋಡು, ಆಕಾಶದ ದ್ವಾರಗಳು ತೆರೆದಿವೆ, ಭೂಮಿಯ ಅಸ್ತಿವಾರಗಳು ಕಂಪಿಸುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಬೀಳುವನು ಕುಳಿಯಲ್ಲಿ, ಭಯಭೀತಿಯ ಸಪ್ಪಳಕ್ಕೆ ಓಡಿಹೋಗುವವನು, ಸಿಕ್ಕಿಬೀಳುವನು ಬಲೆಯಲ್ಲಿ ಕುಳಿಯ ಹತ್ತಿ ಬರುವವನು. ತೆರೆದಿವೆ ನೋಡಿ, ಆಕಾಶದ ದ್ವಾರಗಳು, ಕಂಪಿಸುತ್ತಿವೆ ಬುವಿಯ ಅಸ್ತಿವಾರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಭಯದ ಸಪ್ಪಳದಿಂದ ಓಡಿಹೋಗುವವನು ಗುಂಡಿಯಲ್ಲಿ ಬೀಳುವನು, ಗುಂಡಿಯನ್ನು ಹತ್ತಿಬರುವವನು ಬಲೆಗೆ ಸಿಕ್ಕುವನು. ನೋಡು, ಆಕಾಶದ ದ್ವಾರಗಳು ತೆರೆದಿವೆ, ಭೂವಿುಯ ಅಸ್ತಿವಾರಗಳು ಕಂಪಿಸುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಭಯದ ಶಬ್ದಕ್ಕೆ ಓಡಿಹೋಗುವವನು ಗುಂಡಿಯೊಳಗೆ ಬೀಳುವನು. ಗುಂಡಿಯೊಳಗಿಂದ ಏರಿಬರುವವನು ಬಲೆಗೆ ಸಿಕ್ಕಿಬೀಳುವನು. ಆಕಾಶದ ದ್ವಾರಗಳು ತೆರೆದಿವೆ. ಭೂಮಿಯ ಅಸ್ತಿವಾರಗಳು ಕಂಪಿಸುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 24:18
26 ತಿಳಿವುಗಳ ಹೋಲಿಕೆ  

ಆಗ ಆತನಿಗೆ ಸಿಟ್ಟೇರಿದ್ದರಿಂದ ಭೂಮಿಯು ಗಡಗಡನೆ ನಡುಗಿತು; ಪರ್ವತಗಳ ಬುನಾದಿಗಳು ಕಂಪಿಸಿದವು.


ಎರಡನೆ ತಿಂಗಳಿನ ಹದಿನೇಳನೆಯ ದಿನದಂದು ಭೂಮಿಯ ಕೆಳಗಿರುವ ಸಾಗರದ ಸೆಲೆಗಳು ಒಡೆದು ಭೂಮಿಯೊಳಗಿಂದ ನೀರು ಮೇಲೇರತೊಡಗಿತು; ಭೂಮಿಯ ಮೇಲೆ ಭಾರಿಮಳೆ ಸುರಿಯತೊಡಗಿತು. ಆಕಾಶದ ಕಿಟಕಿ ತೆರೆದಿದೆಯೋ ಎಂಬಂತೆ ನಲವತ್ತು ದಿವಸ ಹಗಲಿರುಳು ಮಳೆ ಸುರಿಯಿತು. ಆ ದಿನದಂದು ನೋಹ ಮತ್ತು ಅವನ ಹೆಂಡತಿ, ಅವನ ಗಂಡುಮಕ್ಕಳಾದ ಶೇಮ್, ಹಾಮ್, ಯೆಫೆತ್ ಮತ್ತು ಅವನ ಸೊಸೆಯಂದಿರು ನಾವೆಯೊಳಗೆ ಹೋದರು. ಆಗ ನೋಹನು ಆರುನೂರು ವರ್ಷವಾಗಿತ್ತು.


ಆಗ ನೀವು ಸಿಂಹದ ಬಾಯಿಂದ ತಪ್ಪಿಸಿಕೊಂಡು ಕರಡಿಯ ಬಾಯಿಗೆ ಬೀಳುವ ಮನುಷ್ಯನಂತಿರುವಿರಿ. ಆಗ ನೀವು ನಿಮ್ಮ ಮನೆಯ ಆಶ್ರಯಕ್ಕೆ ಓಡಿಹೋಗಿ ಗೋಡೆಗೆ ಒರಗಿ ನಿಂತಾಗ ಒಂದು ಹಾವಿನಿಂದ ಕಚ್ಚಿಸಿಕೊಂಡವರಂತೆ ಇರುವಿರಿ.


ಯೆಹೋವನೇ, ನೀನು ಆಜ್ಞಾಪಿಸಿದಾಗ ಬಿರುಗಾಳಿಯು ಬೀಸತೊಡಗಿ ನೀರನ್ನು ನೂಕಲು ಸಮುದ್ರದ ತಳವೇ ಕಾಣಿಸಿತು. ಭೂಮಿಯ ಅಸ್ತಿವಾರಗಳೂ ಕಾಣಿಸಿದವು.


ದುಷ್ಟನು ಕಬ್ಬಿಣದ ಖಡ್ಗದಿಂದ ಓಡಿಹೋಗುವನು; ಆದರೆ ತಾಮ್ರದ ಬಾಣವು ಅವನನ್ನು ಹೊಡೆದುರುಳಿಸುವುದು.


ಆಗ ರಾಜನಿಗೆ ಆಪ್ತನಾಗಿದ್ದ ಅಧಿಕಾರಿಯು ದೇವಮನುಷ್ಯನಿಗೆ, “ಯೆಹೋವನು ಪರಲೋಕಕ್ಕೆ ಕಿಟಕಿಗಳನ್ನು ಮಾಡಿಸಿದರೂ ಇದು ಸಂಭವಿಸುವುದಿಲ್ಲ!” ಎಂದು ಉತ್ತರಿಸಿದನು. ಎಲೀಷನು, “ನೀನು ನಿನ್ನ ಸ್ವಂತ ಕಣ್ಣುಗಳಿಂದಲೇ ಇದನ್ನು ನೋಡುವೆ. ಆದರೆ ಆ ಆಹಾರದಲ್ಲಿ ಯಾವುದನ್ನೂ ನೀನು ತಿನ್ನುವುದಿಲ್ಲ” ಎಂದನು.


ಆಗ ಯೆಹೋವನು ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಮೇಲೆ ಆಕಾಶದಿಂದ ಉರಿಯುವ ಗಂಧಕದ ಮಳೆಯನ್ನು ಸುರಿಸಿದನು.


ಮನುಷ್ಯನಿಗೆ ಮುಂದೆ ಏನಾಗುವುದೋ ತಿಳಿಯದು. ಬಲೆಯಲ್ಲಿ ಸಿಕ್ಕಿಕೊಂಡಿರುವ ಮೀನಿನಂತೆಯೂ ಬೋನಿನಲ್ಲಿ ಸಿಕ್ಕಿಕೊಂಡ ಪಕ್ಷಿಯಂತೆಯೂ ಮನುಷ್ಯನು ತನಗೆ ಸಂಭವಿಸುವ ಕೇಡುಗಳಿಗೆ ಗುರಿಯಾಗುವನು.


ಜನರು ಬಂಡೆಗಳ ಸಂದುಗಳಲ್ಲಿಯೂ ನೆಲದ ಬಿರುಕುಗಳಲ್ಲಿಯೂ ಅಡಗಿಕೊಳ್ಳುವರು. ಜನರು ಯೆಹೋವನಿಗೂ ಆತನ ಪರಾಕ್ರಮಕ್ಕೂ ಭಯಪಡುವರು. ಯೆಹೋವನು ಎದ್ದು ಈ ಪ್ರಪಂಚವನ್ನು ಅಲುಗಾಡಿಸುವಾಗ ಇವೆಲ್ಲಾ ಸಂಭವಿಸುವವು.


ಜನರು ಬಿಸಾಡಿ, ಸಂದುಗೊಂದುಗಳಲ್ಲಿ ಅಡಗಿಕೊಳ್ಳುವರು. ಯೆಹೋವನಿಗೂ ಆತನ ಮಹಾಶಕ್ತಿಗೂ ಹೆದರಿ ಅವರು ಹಾಗೆ ಮಾಡುವರು. ಯೆಹೋವನು ಎದ್ದು ಭೂಮಿಯನ್ನು ಅಲುಗಾಡಿಸುವ ಸಮಯದಲ್ಲಿ ಇವೆಲ್ಲಾ ಸಂಭವಿಸುವವು.


ನೀನು ಯೆಹೋವನನ್ನು ಪರಿಶುದ್ಧನೆಂದು ಪರಿಗಣಿಸಿ ಗೌರವಿಸಿದರೆ, ಆತನು ನಿನಗೆ ಆಶ್ರಯನಾಗುವನು. ಆದರೆ ನೀನು ಆತನನ್ನು ಸನ್ಮಾನಿಸದೆ ಹೋದರೆ ಆತನು ನಿನಗೆ ಮುಗ್ಗರಿಸುವ ಕಲ್ಲಾಗಿ ಪರಿಣಮಿಸುವನು. ಆತನು ಇಸ್ರೇಲಿನ ಎರಡು ಕುಟುಂಬಗಳವರಿಗೆ ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿರುವನು. ಯೆಹೋವನು ಜೆರುಸಲೇಮಿನ ಎಲ್ಲಾ ಜನರನ್ನು ಹಿಡಿಯುವ ಬಲೆಯಾಗಿರುವನು.


ನನ್ನ ಕೋಪದಿಂದ ಆಕಾಶಮಂಡಲವನ್ನು ನಡುಗಿಸುವೆನು. ಭೂಮಿಯನ್ನು ಅದರ ಸ್ಥಳದಿಂದ ಕದಲಿಸುವೆನು.” ಸರ್ವಶಕ್ತನಾದ ಯೆಹೋವನು ತನ್ನ ಮಹಾಕೋಪವನ್ನು ಪ್ರದರ್ಶಿಸುವ ದಿನದಲ್ಲಿ ಅದು ನೆರವೇರುವುದು.


ಆದರೆ, ಜನರನ್ನು ನೋಡಿರಿ. ಅವರನ್ನು ಬೇರೆಯವರು ಸೋಲಿಸಿದ್ದಾರೆ. ಅವರಿಂದ ವಸ್ತುಗಳನ್ನು ದೋಚಿದ್ದಾರೆ. ತರುಣರೆಲ್ಲರೂ ಭಯಪಟ್ಟಿದ್ದಾರೆ; ಅವರನ್ನು ಸೆರೆಮನೆಯಲ್ಲಿ ಬಂಧಿಸಿದ್ದಾರೆ. ಅವರಿಂದ ಹಣವನ್ನು ಜನರು ಕಿತ್ತುಕೊಂಡಿದ್ದಾರೆ. ಅವರನ್ನು ರಕ್ಷಿಸಲು ಯಾರೂ ಇಲ್ಲ. ಅವರಲ್ಲಿ ಹಣವನ್ನು “ಹಿಂದಕ್ಕೆ ಕೊಡು” ಎಂದು ಹೇಳುವವರೇ ಇಲ್ಲ.


ಯೆಹೋವನು ಹೀಗೆ ಹೇಳಿದನು: “ಮೋವಾಬಿನ ಜನರೇ, ಭಯವೂ ಆಳವಾದ ಗುಂಡಿಗಳೂ ಬಲೆಗಳೂ ನಿಮಗಾಗಿ ಕಾದುಕೊಂಡಿವೆ.


ಜನರು ಅಂಜಿ ಓಡಿಹೋಗುವರು; ಆಳವಾದ ಗುಂಡಿಗಳಲ್ಲಿ ಬೀಳುವರು. ಯಾರಾದರೂ ಆ ಆಳವಾದ ಗುಂಡಿಗಳಿಂದ ಮೇಲಕ್ಕೆ ಹತ್ತಿ ಬಂದರೆ ಅವರನ್ನು ಬಲೆಯಲ್ಲಿ ಹಿಡಿಯಲಾಗುವುದು. ನಾನು ಮೋವಾಬಿಗೆ ದಂಡನೆಯ ವರ್ಷವನ್ನು ತರುವೆನು” ಎಂದು ಯೆಹೋವನು ನುಡಿದನು.


ನಾವು ಭಯಗೊಂಡಿದ್ದೇವೆ. ನಾವು ಗುಂಡಿಯೊಳಗೆ ಬಿದ್ದಿದ್ದೇವೆ. ನಮಗೆ ಬಹಳವಾಗಿ ನೋವಾಗಿದೆ! ನಾವು ಮುರಿದುಹೋದವರಾಗಿದ್ದೇವೆ!”


ನೀನು ಖಡ್ಗಕ್ಕೆ ಭಯಪಡುವವನಾದರೂ ನಾನು ನಿನ್ನ ಮೇಲೆ ಖಡ್ಗವನ್ನು ತರುವೆನು. ನಮ್ಮ ಒಡೆಯನಾದ ಯೆಹೋವನು ಈ ಮಾತುಗಳನ್ನು ನುಡಿದಿರುವದರಿಂದ ಇದು ನಡೆಯುವುದು.’”


ಅವನು ತಪ್ಪಿಸಿಕೊಳ್ಳಲು ಪ್ರಯತ್ನ ಮಾಡುವನು. ಆದರೆ, ನಾನು (ಯೆಹೋವನು) ಅವನನ್ನು ಹಿಡಿಯುವೆನು. ಅವನು ನನ್ನ ಬಲೆಯೊಳಗೆ ಬೀಳುವನು. ನಾನು ಅವನನ್ನು ಕಸ್ದೀಯರ ದೇಶವಾದ ಬಾಬಿಲೋನಿಗೆ ತರುವೆನು. ಅವನು ಆ ದೇಶವನ್ನು ನೋಡುವುದಿಲ್ಲ; ಅಲ್ಲದೆ ಅವನು ಅಲ್ಲಿ ಸಾಯುವನು.


“ನಾನು ಅವರನ್ನು ದಂಡಿಸುವೆನು. ಅವರು ಒಂದು ಬೆಂಕಿಯಿಂದ ತಪ್ಪಿಸಿಕೊಂಡರೂ ಮತ್ತೊಂದು ಬೆಂಕಿಯಿಂದ ಸುಟ್ಟುಹೋಗುವರು. ನಾನು ಅವರನ್ನು ದಂಡಿಸಿದಾಗ, ನಾನೇ ಯೆಹೋವನೆಂದು ನೀನು ತಿಳಿದುಕೊಳ್ಳುವೆ.


ಆತನ ಮೂಗಿನಿಂದ ಹೊಗೆಯು ಬಂದಿತು; ಆತನ ಬಾಯಿಂದ ಅಗ್ನಿಜ್ವಾಲೆಯೂ ಬೆಂಕಿಯ ಕಿಡಿಗಳೂ ಬಂದವು.


ನಿಮ್ಮಲ್ಲಿ ಕೆಲವರಿಗೆ ಯೆಹೋವನ ನ್ಯಾಯತೀರ್ಪಿನ ದಿನವನ್ನು ನೋಡುವ ಮನಸ್ಸಿದೆ. ಆ ದಿವಸವನ್ನು ಯಾಕೆ ನೀವು ನೋಡಬೇಕು? ಯೆಹೋವನ ನ್ಯಾಯಾತೀರ್ಪಿನ ದಿನವು ಬೆಳಕನ್ನಲ್ಲ, ಕತ್ತಲನ್ನು ತರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು