Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 24:20 - ಪರಿಶುದ್ದ ಬೈಬಲ್‌

20 ಲೋಕದ ಪಾಪವು ತುಂಬಾ ಭಾರವಾಗಿದೆ. ಆ ಭಾರದಿಂದಾಗಿ ಭೂಮಿಯು ಬೀಳುವದು. ಒಂದು ಹಳೆಯ ಮನೆಯಂತೆ ಭೂಮಿಯು ಅಲುಗಾಡುವದು. ಕುಡಿದು ಮತ್ತನಾಗಿ ನೆಲಕ್ಕೆ ಬೀಳುವವನಂತೆ ಭೂಮಿಯು ಇರುವದು. ಭೂಮಿಗೆ ಮುಂದುವರಿಯಲು ಆಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಭೂಮಿಯು ಅಮಲೇರಿದವನ ಹಾಗೆ ಓಲಾಡುತ್ತದೆ, ಗುಡಿಸಲಂತೆ ತೂಗಾಡುತ್ತದೆ; ಅದರ ದ್ರೋಹವು ಅದಕ್ಕೆ ಭಾರವಾಗಿದೆ, ಅದು ಬಿದ್ದು ಹೋಗುತ್ತಿದೆ, ತಿರುಗಿ ಏಳುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಓಲಾಡುವುದು ಭೂಮಿ ಅಮಲೇರಿದವನಂತೆ, ತೂಗಾಡುವುದು ಬಿರುಗಾಳಿಗೆ ಸಿಕ್ಕಿದ ಗುಡಿಸಲಂತೆ, ಕುಸಿದು ಬೀಳುವುದು ದ್ರೋಹದ ಭಾರಕೆ, ಮರಳಿ ಏಳದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಭೂವಿುಯು ಅಮಲೇರಿದವನ ಹಾಗೆ ಓಲಾಡುತ್ತದೆ, ಮಂಚಿಕೆಯಂತೆ ತೂಗಾಡುತ್ತದೆ; ಅದರ ದ್ರೋಹವು ಅದಕ್ಕೆ ಭಾರವಾಗಿದೆ, ಅದು ಬಿದ್ದು ಹೋಗುತ್ತಿದೆ, ತಿರಿಗಿ ಏಳುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಭೂಮಿಯು ಕುಡುಕನ ಹಾಗೆ ಓಲಾಡುತ್ತದೆ, ಗಾಳಿಗೆ ಸಿಕ್ಕಿದ ಗುಡಿಸಲಿನ ಹಾಗೆ ತೂಗಾಡುತ್ತದೆ, ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ, ಅದು ಬಿದ್ದು ಹೋಗುತ್ತದೆ, ತಿರುಗಿ ಏಳುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 24:20
26 ತಿಳಿವುಗಳ ಹೋಲಿಕೆ  

ಯೆಹೋವನು ಆ ನಾಯಕರನ್ನು ಗಲಿಬಿಲಿಪಡಿಸಿದನು. ಅವರು ಈಜಿಪ್ಟನ್ನು ತಪ್ಪಾದ ದಾರಿಯಲ್ಲಿ ನಡೆಸಿದರು. ಅವರು ಮಾಡುವ ಪ್ರತಿಯೊಂದು ಕಾರ್ಯವೂ ತಪ್ಪಾದದ್ದೇ. ಅವರು ಕುಡಿದು ಮತ್ತರಾದವರಂತೆ ನೆಲದ ಮೇಲೆ ಬಿದ್ದು ಹೊರಳಾಡುತ್ತಾರೆ.


ಆ ಜನರು ಸಮಾರ್ಯದ ಪಾಪದ ಮೇಲೆ ಆಣೆಯಿಡುವರು, ‘ದಾನೇ, ನಿನ್ನ ದೇವರಾಣೆ ….’ ‘ಬೇರ್ಷೆಬದ ದೇವರಾಣೆ ….’ ಎಂಬುದಾಗಿ ಹೇಳುವರು. ಆದರೆ ಆ ಜನರು ಬಿದ್ದುಹೋಗುವರು. ಅಲ್ಲಿಂದ ತಿರುಗಿ ಏಳುವದೇ ಇಲ್ಲ.”


“ಅದಾದ ಮೇಲೆ ಉತ್ತರದ ರಾಜನು ತನ್ನ ದೇಶದ ಭದ್ರವಾದ ಕೋಟೆಗಳಿಗೆ ಹಿಂದಿರುಗುವನು. ಆದರೆ ಅವನು ದುರ್ಬಲನಾಗಿ ಬಿದ್ದುಹೋಗುವನು; ಕೊನೆಗೊಳ್ಳುವನು.


ಆಶ್ಚರ್ಯಪಡಿರಿ! ಬೆರಗಾಗಿರಿ! ನೀವು ಮತ್ತರಾಗಿರುವಿರಿ! ಆದರೆ ದ್ರಾಕ್ಷಾರಸದಿಂದಲ್ಲ. ನೋಡಿ, ಆಶ್ಚರ್ಯಪಡಿರಿ! ನೀವು ಮುಗ್ಗರಿಸಿಬೀಳುವಿರಿ, ಆದರೆ ಮದ್ಯಪಾನದಿಂದಲ್ಲ.


ನಂತರ ಬಲಿಷ್ಠನಾದ ದೇವದೂತನೊಬ್ಬನು ಒಂದು ದೊಡ್ಡ ಬಂಡೆಯನ್ನು ಎತ್ತಿಕೊಂಡನು. ಆ ಬಂಡೆಯು ಒಂದು ದೊಡ್ಡ ಬೀಸುವ ಕಲ್ಲಿನಂತಿತ್ತು. ದೇವದೂತನು ಆ ಬಂಡೆಯನ್ನು ಸಮುದ್ರದಲ್ಲಿ ಎಸೆದು ಹೀಗೆ ಹೇಳಿದನು: “ಮಹಾನಗರಿಯಾದ ಬಾಬಿಲೋನ್ ಹೀಗೆಯೇ ಕೆಳಕ್ಕೆ ಎಸೆಯಲ್ಪಡುವುದು. ಆ ನಗರಿಯು ಮತ್ತೆಂದಿಗೂ ಕಾಣಿಸುವುದಿಲ್ಲ.


“ನನ್ನ ಪಾಪಗಳನ್ನೆಲ್ಲ ಒಟ್ಟುಗೂಡಿಸಿ ನೊಗದಂತೆ ಕಟ್ಟಲಾಗಿದೆ. ಯೆಹೋವನು ತನ್ನ ಕೈಗಳಿಂದ ನನ್ನ ಪಾಪಗಳನ್ನು ಒಟ್ಟಿಗೆ ಕಟ್ಟಿದ್ದಾನೆ. ಯೆಹೋವನ ಆ ನೊಗವು ನನ್ನ ಕತ್ತಿನ ಮೇಲೆ ಇದೆ. ಯೆಹೋವನು ನನ್ನನ್ನು ದುರ್ಬಲಗೊಳಿಸಿದ್ದಾನೆ. ನಾನು ಎದುರಿಸಲಾಗದ ಜನರ ಕೈಗೆ ಯೆಹೋವನು ನನ್ನನ್ನು ಒಪ್ಪಿಸಿಕೊಟ್ಟಿದ್ದಾನೆ.


“ಯೆರೆಮೀಯನೇ, ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆಂದು ಆ ಜನಾಂಗಗಳಿಗೆ ಹೇಳು: ‘ನನ್ನ ರೋಷದ ಈ ಪಾತ್ರೆಯಿಂದ ಕುಡಿಯಿರಿ, ಕುಡಿದು ಅಮಲೇರಿ ವಾಂತಿಮಾಡಿಕೊಳ್ಳಿ, ಕೆಳಗೆ ಬಿದ್ದು ಮೇಲಕ್ಕೆ ಏಳದಿರಿ, ಏಕೆಂದರೆ ನಾನು ನಿಮ್ಮನ್ನು ಕೊಲ್ಲಲು ಒಂದು ಖಡ್ಗವನ್ನು ಕಳುಹಿಸುತ್ತಿದ್ದೇನೆ.’


“ಯೆರೆಮೀಯನೇ, ಯೆಹೂದದ ಜನರಿಗೆ ಹೀಗೆ ಹೇಳು: ‘ಯೆಹೋವನು ಈ ಮಾತನ್ನು ಹೇಳುತ್ತಾನೆ. “‘ಒಬ್ಬ ಮನುಷ್ಯನು ಕೆಳಗೆ ಬಿದ್ದರೆ ಪುನಃ ಅವನು ಮೇಲಕ್ಕೆ ಏಳುತ್ತಾನೆ; ಒಬ್ಬ ಮನುಷ್ಯನು ತಪ್ಪುದಾರಿ ಹಿಡಿದರೆ ಅವನು ಹಿಂತಿರುಗಿ ಬರುತ್ತಾನೆಂಬುದು ನಿಮಗೆ ಗೊತ್ತು.


ನಿನ್ನ ಮೊದಲನೆ ತಂದೆಯು ಪಾಪದಲ್ಲಿ ಬಿದ್ದನು. ನಿನ್ನ ವಕೀಲರು ನನಗೆ ವಿರುದ್ಧವಾಗಿ ಕಾರ್ಯ ಮಾಡಿದರು.


ನನ್ನ ಮನೆಯು ಅಂದರೆ ನನ್ನ ಕುರುಬನ ಗುಡಾರವು ಕೀಳಲ್ಪಟ್ಟು ನನ್ನಿಂದ ತೆಗೆಯಲ್ಪಡುತ್ತಿದೆ. ಒಬ್ಬನು ಮಗ್ಗದಲ್ಲಿ ಬಟ್ಟೆಯನ್ನು ಸುತ್ತಿ ಕತ್ತರಿಸಿಬಿಡುವಂತೆ ನಾನು ಕತ್ತರಿಸಲ್ಪಟ್ಟಿದ್ದೇನೆ. ನನ್ನ ಆಯುಷ್ಯವನ್ನು ಚಿಕ್ಕ ವಯಸ್ಸಿನಲ್ಲಿಯೇ ಮುಗಿಸಿಬಿಟ್ಟಿರುವೆ.


ಆದರೆ ಎಲ್ಲಾ ಕೊಲೆಗಾರರೂ ದುಷ್ಟರೂ ನಾಶಮಾಡಲ್ಪಡುವರು. ಅವರು ಯೆಹೋವನನ್ನು ಹಿಂಬಾಲಿಸುವವರಲ್ಲ.


ಚೀಯೋನ್ ನಗರಿಯು ದ್ರಾಕ್ಷಿತೋಟದಲ್ಲಿರುವ ಜನಶೂನ್ಯವಾದ ಡೇರೆಯಂತಿದೆ; ಸೌತೆಯ ಹೊಲದಲ್ಲಿ ಪಾಳುಬಿದ್ದಿರುವ ಮನೆಯಂತಿದೆ; ಶತ್ರುಗಳಿಗೆ ಸೋತುಹೋದ ನಗರದಂತಿದೆ.


ಅವರು ಅಮಲೇರಿದವರಂತೆ ಎಡವಿಬೀಳತೊಡಗಿದರು; ನಾವಿಕರಾಗಿದ್ದ ಅವರ ಕೌಶಲ್ಯವು ನಿಷ್ಪ್ರಯೋಜಕವಾಯಿತು.


ನಾನು ಅಪರಾಧಿಯಾಗಿದ್ದೇನೆ. ನನ್ನ ಅಪರಾಧಗಳು ನನ್ನ ಭುಜಗಳ ಮೇಲೆ ಭಾರವಾದ ಹೊರೆಯಂತಿವೆ.


ಅವರು ಬೆಳಕಿಲ್ಲದೆ ಕತ್ತಲೆಯಲ್ಲಿ ತಡವಾಡುವರು. ಆತನು ಅವರನ್ನು ಅಮಲೇರಿದವರಂತೆ ಅಲೆದಾಡಿಸುವನು.”


ಇಗೋ, ಯೆಹೋವನು ಈ ದೇಶವನ್ನು ನಾಶಮಾಡುವನು. ಆತನು ಅದನ್ನು ಸಂಪೂರ್ಣವಾಗಿ ನಿರ್ಮೂಲ ಮಾಡುವನು. ಜನರನ್ನು ಅತಿದೂರಕ್ಕೆ ಚದರಿಸಿಬಿಡುವನು.


ಆದರೆ ಈಗ ಆ ನಾಯಕರುಗಳು ಮತ್ತರಾಗಿದ್ದಾರೆ. ಯಾಜಕರೂ ಪ್ರವಾದಿಗಳೂ ಮದ್ಯಸೇವನೆಯಿಂದ ಮತ್ತರಾಗಿದ್ದಾರೆ. ಅವರು ಎಡವಿಬೀಳುತ್ತಾರೆ. ಪ್ರವಾದಿಗಳು ದರ್ಶನಗಳನ್ನು ಕಾಣುವಾಗ ಅಮಲೇರಿದವರಾಗಿರುತ್ತಾರೆ; ನ್ಯಾಯಾಧೀಶರು ತೀರ್ಪುಕೊಡುವಾಗ ಅಮಲೇರಿದವರಾಗಿರುತ್ತಾರೆ.


“ಅವರು ನನ್ನ ಪವಿತ್ರ ಪಟ್ಟಣದಲ್ಲಿ ವಾಸಿಸುವರು. ಅವರು ಪಟ್ಟಣದಿಂದ ಹೊರಗೆ ಹೋದರೆ ನನಗೆ ವಿರುದ್ಧವಾಗಿ ಪಾಪಮಾಡಿದವರ ಹೆಣಗಳನ್ನು ನೋಡುವರು. ಅವರ ಹೆಣಗಳೊಳಗೆ ಸಾಯದ ಹುಳಗಳಿರುವವು. ಬೆಂಕಿಯು ಆ ಹೆಣಗಳನ್ನು ಸುಟ್ಟುಬಿಡುವುದು. ಆ ಬೆಂಕಿಯು ಆರುವದೇ ಇಲ್ಲ. ಅವು ಜನರ ಮುಂದೆ ಅಸಹ್ಯವಾಗಿರುವವು.”


ಯೆಹೋವನು ಬರುತ್ತಾನೆ. ಪರ್ವತಗಳು ಭಯದಿಂದ ನಡುಗುವವು. ಬೆಟ್ಟಗಳು ಕರಗಿಹೋಗುವವು. ಯೆಹೋವನು ಬರುತ್ತಾನೆ, ಮತ್ತು ಭೂಮಿಯು ಭಯದಿಂದ ನಡುಗುವುದು. ಇಡೀ ಪ್ರಪಂಚ ಮತ್ತು ಅದರಲ್ಲಿರುವ ಜನರೆಲ್ಲಾ ಭಯದಿಂದ ನಡುಗುವರು.


ಮೊದಲಿನ ಸಮೃದ್ಧಿಯ ಗುರುತೇ ಜನರಿಗೆ ಕಾಣಸಿಗದು.


ನಾನು ಪರ್ವತಗಳ ಕಡೆಗೆ ನೋಡಿದೆ, ಅವುಗಳು ನಡುಗುತ್ತಿದ್ದವು. ಎಲ್ಲಾ ಬೆಟ್ಟಗಳು ಅದರುತ್ತಿದ್ದವು.


ನೋವಿನಿಂದಲೋ ಎಂಬಂತೆ ಭೂಮಿಯು ನಡುಗುತ್ತದೆ ಮತ್ತು ಹೊರಳಾಡುತ್ತದೆ. ಯೆಹೋವನು ತಾನು ಯೋಚಿಸಿದಂತೆ ಬಾಬಿಲೋನಿಗೆ ಮಾಡಿದಾಗ ಅದು ನಡುಗುತ್ತದೆ. ಬಾಬಿಲೋನನ್ನು ಯಾರೂ ವಾಸಮಾಡದ ಮರುಭೂಮಿಯನ್ನಾಗಿ ಮಾಡಬೇಕೆಂಬುದು ಯೆಹೋವನ ಯೋಜನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು