Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 24:23 - ಪರಿಶುದ್ದ ಬೈಬಲ್‌

23 ಯೆಹೋವನು ಜೆರುಸಲೇಮಿನ ಚೀಯೋನ್ ಪರ್ವತದಿಂದ ರಾಜ್ಯವನ್ನಾಳುವನು. ಆತನ ಮಹಿಮೆಯು ಹಿರಿಯರ ಮುಂದಿರುವದು. ಆತನ ಮಹಿಮೆಯ ಪ್ರಕಾಶಕ್ಕೆ ಚಂದ್ರನು ನಾಚಿಕೊಳ್ಳುವನು; ಸೂರ್ಯನು ಲಜ್ಜೆಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಮೇಲೆ ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇಮನ್ನು ಆಳುವನು. ಆತನ ಪರಿವಾರದ ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಾಚುವನು ಚಂದ್ರ, ಹೇಸುವನು ಸೂರ್ಯ, ಏಕೆನೆ ಆಳುವರು ಸೇನಾಧೀಶ್ವರ ಸರ್ವೇಶ್ವರ ಸಿಯೋನ್ ಪರ್ವತದೊಳು, ಜೆರುಸಲೇಮ್ ನಗರದೊಳು. ಪ್ರತ್ಯಕ್ಷವಾಗುವುದಾತನ ಮಹಿಮಾಪ್ರಭಾವವು, ಅಲ್ಲಿನ ಜನನಾಯಕರ ಸಮ್ಮುಖದೊಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮತ್ತು ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇವಿುನೊಳಗೆ ಆಳುವನಷ್ಟೆ. ಆತನ [ಪರಿವಾರದ] ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಮೇಲೆ ಸೇನಾಧೀಶ್ವರ ಯೆಹೋವ ದೇವರು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಹಿರಿಯರ ಮುಂದೆ ಮಹಿಮೆಯಿಂದ ಆಳುವಾಗ, ಚಂದ್ರನಿಗೆ ಅವಮಾನವಾಗುವುದು, ಸೂರ್ಯನು ನಾಚಿಕೆ ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 24:23
36 ತಿಳಿವುಗಳ ಹೋಲಿಕೆ  

“ಇನ್ನು ಮುಂದೆ ಹಗಲು ಹೊತ್ತಿನಲ್ಲಿ ಸೂರ್ಯನು ನಿನಗೆ ಬೆಳಕಾಗಿರುವದಿಲ್ಲ; ರಾತ್ರಿಕಾಲದಲ್ಲಿ ಚಂದ್ರನ ಪ್ರಕಾಶವು ನಿನಗೆ ಬೆಳಕಾಗಿರುವದಿಲ್ಲ. ಯಾಕೆಂದರೆ ಯೆಹೋವನೇ ನಿನ್ನ ನಿತ್ಯಕಾಲದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಮಹಿಮೆಯಾಗಿರುವನು.


ನಗರದ ಮೇಲೆ ಸೂರ್ಯನಾಗಲಿ ಚಂದ್ರನಾಗಲಿ ಪ್ರಕಾಶಿಸುವ ಅಗತ್ಯವಿರಲಿಲ್ಲ. ದೇವರ ಪ್ರಭಾವವೇ ಆ ನಗರಕ್ಕೆ ಬೆಳಕನ್ನು ನೀಡುತ್ತಿತ್ತು. ಕುರಿಮರಿಯಾದಾತನು ನಗರಕ್ಕೆ ದೀಪವಾಗಿದ್ದನು.


ಆಕಾಶವು ಕತ್ತಲಾಗುವದು; ಸೂರ್ಯ, ಚಂದ್ರ, ನಕ್ಷತ್ರಾದಿಗಳು ಪ್ರಕಾಶವನ್ನು ಕಳೆದುಕೊಳ್ಳುವವು.


ಅಲ್ಲಿ ರಾತ್ರಿಯೆಂಬುದೇ ಇರುವುದಿಲ್ಲ. ಜನರಿಗೆ ದೀಪದ ಬೆಳಕಾಗಲಿ ಸೂರ್ಯನ ಬೆಳಕಾಗಲಿ ಬೇಕಾಗುವುದಿಲ್ಲ. ಪ್ರಭುವಾದ ದೇವರೇ ಅವರಿಗೆ ಬೆಳಕನ್ನು ನೀಡುತ್ತಾನೆ. ಅವರು ಯುಗಯುಗಾಂತರಗಳಲ್ಲಿ ರಾಜರುಗಳಂತೆ ಆಳುತ್ತಾರೆ.


ಆದರೆ ನೀವು ಅಂಥ ಸ್ಥಳಕ್ಕೆ ಬಂದಿಲ್ಲ. ನೀವು ಬಂದಿರುವ ಹೊಸ ಸ್ಥಳ ಚೀಯೋನ್ ಬೆಟ್ಟ, ಜೀವಸ್ವರೂಪನಾದ ದೇವರು ವಾಸವಾಗಿರುವ ಪರಲೋಕದ ಜೆರುಸಲೇಮಿಗೂ ಸಹಸ್ರಾರು ದೇವದೂತರು ಸಂತೋಷದಿಂದ ಒಟ್ಟುಗೂಡಿರುವ ಸ್ಥಳಕ್ಕೂ ಬಂದಿರುವಿರಿ.


“ಆ ‘ಕುಂಟು’ ನಗರದ ಜನರೇ ಅಳಿದುಳಿದ ಜನರಾಗುವರು. ಆ ಪಟ್ಟಣದ ಜನರನ್ನು ಬಲವಂತದಿಂದ ಓಡಿಸಲಾಯಿತು. ಆದರೆ ನಾನು ಅವರನ್ನು ಬಲಶಾಲಿಯಾದ ಜನಾಂಗವನ್ನಾಗಿ ಮಾಡುವೆನು.” ಯೆಹೋವನು ಅವರ ಅರಸನಾಗುವನು. ಆತನು ಚೀಯೋನ್ ಪರ್ವತದಿಂದ ನಿತ್ಯಕಾಲಕ್ಕೂ ಆಳುವನು.


ಆ ಸಮಯದಲ್ಲಿ ಚಂದ್ರನ ಪ್ರಕಾಶವು ಸೂರ್ಯನಂತಿರುವದು. ಸೂರ್ಯನ ಪ್ರಕಾಶವು ಈಗ ಇರುವದಕ್ಕಿಂತ ಏಳರಷ್ಟು ಹೆಚ್ಚಾಗಿರುವದು. ಸೂರ್ಯನ ಒಂದು ದಿವಸದ ಬೆಳಕು ಒಂದು ವಾರದ ಬೆಳಕಿನಷ್ಟಿರುವದು. ಯೆಹೋವನು ತನ್ನ ಮುರಿದುಹೋದ ಜನರಿಗೆ ಆದ ಗಾಯದ ಪೆಟ್ಟುಗಳನ್ನು ಗುಣಪಡಿಸುವಾಗ ಇವೆಲ್ಲಾ ಸಂಭವಿಸುತ್ತವೆ.


ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದ್ದರಿಂದ ಹರ್ಷಿಸಿರಿ.


ನಂತರ ಅನೇಕಾನೇಕ ಜನರ ಮಹಾಶಬ್ದದಂತಿದ್ದ ಧ್ವನಿಯೊಂದು ನನಗೆ ಕೇಳಿಸಿತು. ಅದು ಪ್ರವಾಹದ ನೀರಿನ ಘೋಷದಂತೆಯೂ ಗಟ್ಟಿಯಾದ ಗುಡುಗಿನ ಶಬ್ದದಂತೆಯೂ ಇತ್ತು. ಆ ಜನರು ಹೀಗೆ ಹೇಳುತ್ತಿದ್ದರು: “ಹಲ್ಲೆಲೂಯಾ! ನಮ್ಮ ದೇವರಾದ ಪ್ರಭುವು ಆಳಲಾರಂಭಿಸಿದ್ದಾನೆ. ಆತನು ಸರ್ವಶಕ್ತನಾಗಿದ್ದಾನೆ.


ನಂತರ ಇಪ್ಪತ್ತನಾಲ್ಕು ಮಂದಿ ಹಿರಿಯರು ಮತ್ತು ನಾಲ್ಕು ಜೀವಿಗಳು ಮೊಣಕಾಲೂರಿ ನಮಸ್ಕರಿಸಿದರು. ಸಿಂಹಾಸನದ ಮೇಲೆ ಕುಳಿತಿರುವ ದೇವರನ್ನು ಆರಾಧಿಸಿದರು. ಅವರು, “ಆಮೆನ್! ಹಲ್ಲೆಲೂಯಾ!” ಎಂದು ಹೇಳಿದರು.


ನಂತರ ನಾನು ನೋಡಿದಾಗ, ನನ್ನ ಎದುರಿನಲ್ಲಿಯೇ ಕುರಿಮರಿಯಾದಾತನು ಇದ್ದನು. ಆತನು ಚೀಯೋನ್ ಪರ್ವತದ ಮೇಲೆ ನಿಂತಿದ್ದನು. ಆತನ ಜೊತೆಯಲ್ಲಿ 1,44,000 ಜನರಿದ್ದರು. ಅವರ ಹಣೆಗಳ ಮೇಲೆ ಆತನ ಹೆಸರನ್ನು ಮತ್ತು ಆತನ ತಂದೆಯ ಹೆಸರನ್ನು ಬರೆಯಲಾಗಿತ್ತು.


ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗಯುಗಾಂತರಗಳಲ್ಲಿಯೂ ಆಳುವನು.”


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ಸೂರ್ಯಚಂದ್ರರು ಕತ್ತಲಾಗುವರು, ನಕ್ಷತ್ರಗಳು ಹೊಳೆಯುವುದಿಲ್ಲ.


ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತದಂತಾಗುವನು. ಆಗ ಯೆಹೋವನ ಭಯಂಕರ ದಿನವು ಬರುವುದು.


ಆಗ ದೇವಭಕ್ತರು ರಾಜ್ಯವನ್ನು ಆಳುವರು. ಅವರು ಸಮಸ್ತ ಭೂಮಂಡಲದ ರಾಜ್ಯಗಳ ಮೇಲೆ ಆಳ್ವಿಕೆ ಮಾಡುವರು. ಈ ಸಾಮ್ರಾಜ್ಯವು ಕೊನೆಯವರೆಗೂ ಉಳಿಯುವುದು. ಮಿಕ್ಕ ಎಲ್ಲ ರಾಜ್ಯಗಳ ಜನರು ಅವರನ್ನು ಗೌರವಿಸುವರು ಮತ್ತು ಸೇವಿಸುವರು.’


ಆದರೆ ದೇವರ ವಿಶೇಷ ಜನರಿಗೆ ಆ ಸಾಮ್ರಾಜ್ಯಗಳು ದೊರೆಯುವವು. ಅವರು ಆ ಸಾಮ್ರಾಜ್ಯವನ್ನು ಶಾಶ್ವತವಾಗಿ ಅನುಭವಿಸುವರು’ ಎಂದು ಹೇಳಿದನು.


ಒಬ್ಬ ಸಂದೇಶವಾಹಕನು ಬೆಟ್ಟದ ಮೇಲಿನಿಂದ ಒಳ್ಳೆಯ ಸಮಾಚಾರವನ್ನು ತರುವದು ಎಷ್ಟೋ ಅಂದವಾಗಿದೆ. ಸಂದೇಶಕಾರನು, “ನಮಗೆ ಸಮಾಧಾನವಿದೆ, ನಾವು ರಕ್ಷಿಸಲ್ಪಟ್ಟಿದ್ದೇವೆ. ಚೀಯೋನೇ, ನಿನ್ನ ದೇವರು ಅರಸನಾಗಿದ್ದಾನೆ!” ಎಂಬ ಸಂದೇಶವನ್ನು ಕೇಳುವದು ಎಷ್ಟೋ ಸಂತೋಷ ಕೊಡುವದಾಗಿದೆ.


ಯೆಹೋವನು ಆಳುತ್ತಿರುವನು! ಭೂಮಿಯು ಸಂತೋಷಿಸಲಿ. ದೂರ ದೇಶಗಳೆಲ್ಲಾ ಹರ್ಷಿಸಲಿ.


ಮಿರ್ಯಾಮಳು ಅವರ ಹಾಡಿಗೆ ಹೀಗೆ ಪಲ್ಲವಿ ಹಾಡಿದಳು: “ಯೆಹೋವನಿಗೆ ಗಾನಮಾಡಿರಿ; ಆತನು ಮಹಾಜಯಶಾಲಿಯಾದನು. ಕುದುರೆಗಳನ್ನೂ ರಾಹುತರನ್ನೂ ಸಮುದ್ರದೊಳಗೆ ಮುಳುಗಿಸಿ ನಾಶಮಾಡಿದನು…”


ನಿನ್ನ ರಾಜ್ಯ ಬರಲಿ. ನಿನ್ನ ಚಿತ್ತ ಪರಲೋಕದಲ್ಲಿ ನೆರವೇರುವಂತೆ ಭೂಲೋಕದಲ್ಲಿಯೂ ನೆರವೇರಲಿ.


ನಮ್ಮನ್ನು ಶೋಧನೆಗೆ ಒಳಪಡಿಸದೆ ಕೆಡುಕನಿಂದ (ಸೈತಾನನಿಂದ) ನಮ್ಮನ್ನು ರಕ್ಷಿಸು.’


“ಆ ದಿನಗಳ ಸಂಕಟವು ತೀರಿದ ಕೂಡಲೇ, ‘ಸೂರ್ಯನು ಕತ್ತಲಾಗುವನು. ಚಂದ್ರನು ಕಾಂತಿಹೀನನಾಗುವನು. ನಕ್ಷತ್ರಗಳು ಆಕಾಶದಿಂದ ಕಳಚಿಬೀಳುವವು. ಆಕಾಶಮಂಡಲವು ಕಂಪಿಸುವುದು.’


ನಿಮ್ಮ ಕಣ್ಣುಗಳು ಸೌಂದರ್ಯ ಪ್ರಭಾವಗಳಿಂದ ತುಂಬಿದ ರಾಜನನ್ನು (ದೇವರನ್ನು) ನೋಡುವವು. ನೀವು ಮಹಾ ದೊಡ್ಡ ದೇಶವನ್ನು ನೋಡುವಿರಿ.


“ಜೆರುಸಲೇಮೇ, ಏಳು, ಪ್ರಕಾಶಿಸು! ನಿನ್ನ ಪ್ರಕಾಶವೆಂಬಾತನು ಬರುತ್ತಾನೆ. ಯೆಹೋವನ ಮಹಿಮೆಯು ನಿನ್ನ ಮೇಲೆ ಪ್ರಕಾಶಿಸುವುದು.


ನಿನ್ನ ಸೂರ್ಯನು ಮತ್ತೆ ಅಸ್ತಮಾನವಾಗುವದಿಲ್ಲ. ನಿನ್ನ ಚಂದ್ರನು ಮತ್ತೆಂದಿಗೂ ಕಪ್ಪಾಗುವದಿಲ್ಲ. ಯಾಕೆಂದರೆ ಯೆಹೋವನು ನಿನ್ನ ನಿರಂತರದ ಬೆಳಕಾಗಿರುವನು. ನಿನ್ನ ದುಃಖದ ಕಾಲವು ಅಂತ್ಯವಾಗುವದು.


“ನಗರದ ಸುತ್ತಳತೆಯು ಹದಿನೆಂಟು ಸಾವಿರ ಮೊಳ. ಇಂದಿನಿಂದ ಈ ನಗರದ ಹೆಸರು ‘ಯೆಹೋವನು ಅಲ್ಲಿದ್ದಾನೆ.’”


ಅದು ಒಂದು ಮಹಾ ವಿಶೇಷ ದಿವಸವಾಗಿರುವದು. ಆ ದಿವಸದಲ್ಲಿ ಬೆಳಕಾಗಲಿ ಚಳಿಯಾಗಲಿ ಹಿಮವಾಗಲಿ ಇರುವದಿಲ್ಲ. ಇದು ಹೇಗೆ ಎಂದು ಯೆಹೋವನಿಗೆ ಮಾತ್ರ ಗೊತ್ತು. ರಾತ್ರಿ ಬರಬೇಕಾದ ವೇಳೆಯಲ್ಲಿ ಹಗಲು ಇನ್ನೂ ಇರುವದು.


ವಿಜಯಿಗಳು ಚೀಯೋನ್ ಬೆಟ್ಟವನ್ನೇರಿ ಏಸಾವಿನ ಪರ್ವತಗಳಲ್ಲಿ ವಾಸಿಸುವ ಜನರನ್ನಾಳುವರು. ಆಗ ಸಾಮ್ರಾಜ್ಯವು ಯೆಹೋವನಿಗೆ ಸೇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು