ಯೆಶಾಯ 24:6 - ಪರಿಶುದ್ದ ಬೈಬಲ್6 ಆ ದೇಶದಲ್ಲಿ ವಾಸಿಸುವ ಜನರು ದೇವರಿಗೆ ವಿರುದ್ಧವಾಗಿ ನಡೆದರು. ಆದ್ದರಿಂದ ದೇವರು ಈ ದೇಶವನ್ನು ನಾಶಮಾಡಲು ತೀರ್ಮಾನಿಸಿದನು. ಜನರು ಶಿಕ್ಷಿಸಲ್ಪಡುವರು. ಕೆಲವೇ ಮಂದಿ ಮಾತ್ರ ಉಳಿಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ. ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇದಕಾರಣ ಕಬಳಿಸಿದೆ ಜಗವನು ಶಾಪ, ತಟ್ಟಿದೆ ಆ ಜನರಿಗೆ ದಂಡನೆಯ ತಾಪ. ಸುಟ್ಟಮೇಲೆ ಉಳಿದಿಹರು ಅವರಲಿ ಕೆಲವರು ಮಾತ್ರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ; ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ. ಅದರಲ್ಲಿ ವಾಸವಾಗಿರುವವರು ದಂಡನೆಗೆ ಒಳಗಾಗಿದ್ದಾರೆ. ಆದ್ದರಿಂದ ಭೂನಿವಾಸಿಗಳು ಸುಟ್ಟು ಹೋಗಿ, ಕೆಲವರು ಮಾತ್ರ ಉಳಿದಿದ್ದಾರೆ. ಅಧ್ಯಾಯವನ್ನು ನೋಡಿ |
ಆದ್ದರಿಂದ ಅವರಿಗೆ ಕೇಡುಗಳಾಗುವವು. ಅವರ ಸಂತತಿಯವರು ತರಗೆಲೆಯೂ ಹುಲ್ಲೂ ಬೆಂಕಿಯಲ್ಲಿ ಸುಟ್ಟುಹೋಗುವಂತೆ ನಾಶವಾಗುವರು. ಅವರ ಸಂತತಿಯವರು ಸತ್ತು ಧೂಳಾಗುವ ಬೇರಿನಂತೆ ನಾಶವಾಗುವರು. ಬೆಂಕಿಯಲ್ಲಿ ಸುಟ್ಟುಹೋದ ಹೂವಿನ ಬೂದಿಯು ಗಾಳಿಯಲ್ಲಿ ಹಾರಿಹೋಗುವಂತೆ ಅವರ ಸಂತತಿಯವರು ನಾಶವಾಗುವರು. ಅವರು ಸರ್ವಶಕ್ತನಾದ ಯೆಹೋವನ ಬೋಧನೆಗಳನ್ನು ಅನುಸರಿಸಲು ನಿರಾಕರಿಸಿದ್ದಾರೆ. ಇಸ್ರೇಲಿನ ಪರಿಶುದ್ಧನ ವಾಕ್ಯವನ್ನು ಅವರು ದ್ವೇಷಿಸುತ್ತಾರೆ.