10 ಸರ್ವೇಶ್ವರ ಸ್ವಾಮಿಯ ಅಭಯ ಹಸ್ತವು ಈ ಪರ್ವತದ ಮೇಲೆ ಶಾಶ್ವತವಾಗಿ ನೆಲಸುವುದು. ಮೋವಾಬಾದರೋ ತಿಪ್ಪೆಗುಂಡಿಯ ರೊಚ್ಚಿನಲ್ಲಿ ಒಣಹುಲ್ಲು ತುಳಿತಕ್ಕೆ ಈಡಾಗುವಂತೆ ತಾನಿದ್ದಲ್ಲೇ ತುಳಿತಕ್ಕೀಡಾಗುವುದು.
ನನ್ನ ಜೀವದಾಣೆ, ಮೋವಾಬ್ಯರೂ ಅಮ್ಮೋನ್ಯರೂ ಸೊದೋಮ್ ಗೊಮೋರದವರಂತೆ ನಾಶವಾಗುವರು. ನಾನು ಸರ್ವಶಕ್ತನಾದ ಇಸ್ರೇಲರ ದೇವರಾಗಿರುವೆನು. ನಾನು ವಾಗ್ದಾನ ಮಾಡುವದೇನೆಂದರೆ, ಆ ರಾಜ್ಯಗಳು ಸಂಪೂರ್ಣವಾಗಿ ನಾಶವಾಗುವವು. ಅವರ ಭೂಮಿಯು ಕಳೆಗಳಿಂದ ತುಂಬಿಹೋಗುವದು. ಅದು ಮೃತ್ಯುಸಮುದ್ರದ ಉಪ್ಪಿನಿಂದ ತುಂಬಿಹೋದಂತಿರುವದು. ನನ್ನ ಜನರಲ್ಲಿ ಉಳಿದವರು ಅವರ ದೇಶವನ್ನೂ ಅಲ್ಲಿ ಉಳಿದಿರುವ ವಸ್ತುಗಳನ್ನೂ ತಮ್ಮ ವಶಮಾಡಿಕೊಳ್ಳುವರು.”
ಇನ್ನು ಮುಂದೆ ಮೋವಾಬ್ ಪಟ್ಟಣವು ಹೊಗಳಿಕೆಗೆ ಪಾತ್ರವಾಗುವುದಿಲ್ಲ. ಹೆಷ್ಬೋನ್ ಪಟ್ಟಣದ ಜನರು ಮೋವಾಬನ್ನು ಸೋಲಿಸುವ ಯುಕ್ತಿ ಮಾಡುವರು. ಅವರು ಆ ಜನಾಂಗವನ್ನು ನಾಶಮಾಡುವ ಆಲೋಚನೆ ಮಾಡುವರು. ಮದ್ಮೆನೆ ಪಟ್ಟಣವೇ, ನೀನೂ ಸಹ ಸುಮ್ಮನಾಗುವೆ. ಖಡ್ಗವು ನಿನ್ನನ್ನು ಬೆನ್ನಟ್ಟುವದು.
“ಚೀಯೋನ್ ಕುಮಾರಿಯೇ ಎದ್ದೇಳು, ಆ ಜನರನ್ನು ಪುಡಿಮಾಡು! ನಾನು ನಿನ್ನನ್ನು ಬಲಶಾಲಿಯನ್ನಾಗಿ ಮಾಡುವೆನು. ಕಬ್ಬಿಣದ ಕೊಂಬುಗಳಿರುವಂತೆ, ತಾಮ್ರದ ಗೊರಸುಗಳಿರುವಂತೆ ನಿನ್ನನ್ನು ಮಾಡುವೆನು. ಎಷ್ಟೋ ಜನರನ್ನು ನೀನು ತುಂಡುತುಂಡು ಮಾಡುವೆ. ಅವರ ಐಶ್ವರ್ಯವನ್ನು ನೀನು ಯೆಹೋವನಿಗೆ ಕೊಡುವೆ. ಅವರ ನಿಕ್ಷೇಪಗಳನ್ನು ಇಡೀ ಭೂಮಿಗೆ ಒಡೆಯನಾಗಿರುವ ಯೆಹೋವನಿಗೆ ಅರ್ಪಿಸುವೆ.”
ನನ್ನ ಶೂರ ಸೈನಿಕರನ್ನೆಲ್ಲಾ ಯೆಹೋವನು ತಿರಸ್ಕರಿಸಿದ್ದಾನೆ. ಆ ಸೈನಿಕರು ನಗರದ ಒಳಭಾಗದಲ್ಲಿದ್ದರು. ಆಗ ಯೆಹೋವನು ನನ್ನ ವಿರುದ್ಧ ಒಂದು ಜನರ ಗುಂಪನ್ನು ತಂದನು. ಆತನು ನನ್ನ ತರುಣ ಸೈನಿಕರನ್ನು ಕೊಲ್ಲುವ ಸಲುವಾಗಿ ಆ ಜನರನ್ನು ತಂದನು. ಯೆಹೋವನು ದ್ರಾಕ್ಷಿಯನ್ನು ಆಲೆಯಲ್ಲಿ ತುಳಿದಿದ್ದಾನೆ. ಆ ದ್ರಾಕ್ಷಿಆಲೆಯು ಜೆರುಸಲೇಮ್ ಕನ್ನಿಕೆಗೆ ಸೇರಿದ್ದು.
ಯೆಹೋವನು ಹೀಗೆನ್ನುತ್ತಾನೆ: “ನನಗಾಗಿ ಸಿದ್ಧಪಡಿಸಲ್ಪಟ್ಟ ಸ್ಥಳದಲ್ಲಿ ಮೌನವಾಗಿದ್ದು ಇವುಗಳನ್ನೆಲ್ಲಾ ವೀಕ್ಷಿಸುವೆನು. ಬೇಸಿಗೆಯ ಮಧ್ಯಾಹ್ನದ ಹೊತ್ತಿನಲ್ಲಿ ಜನರು ವಿಶ್ರಮಿಸುತ್ತಿರುವರು. ಅದು ಬೇಸಿಗೆಯ ಸುಗ್ಗಿಕಾಲವಾಗಿರುವದು; ಮಳೆ ಇರುವದಿಲ್ಲ, ಕೇವಲ ಮುಂಜಾನೆಯ ಇಬ್ಬನಿ ಇರುವದು.
ಆದರೆ ದುಷ್ಟ ಅರಸನಾದ ನೀನು ನಿನ್ನ ಸಮಾಧಿಯಿಂದ ತೆಗೆದುಹಾಕಲ್ಪಟ್ಟಿರುವೆ. ಮರದಿಂದ ಬೇರ್ಪಡಿಸಿದ ಕೊಂಬೆಯಂತೆ ನೀನಿರುವೆ. ಯುದ್ಧದಲ್ಲಿ ಸತ್ತ ಸೈನಿಕನಂತೆ ನೀನಿರುವೆ. ಬೇರೆ ಸೈನಿಕರು ಅವನ ಮೇಲೆ ನಡೆದಾಡುವರು. ಈಗ ನೀನು ಸಾಧಾರಣ ಹೆಣದಂತೆ ಇರುವೆ. ಸಮಾಧಿಯ ಬಟ್ಟೆಗಳಿಂದ ನೀನು ಸುತ್ತಲ್ಪಟ್ಟಿರುವೆ.
ಆದರೆ ಎಫ್ರಾಯೀಮ್ಯರು ಮತ್ತು ಯೆಹೂದ್ಯರು ಒಟ್ಟುಸೇರಿ ಫಿಲಿಷ್ಟಿಯರನ್ನು ಎದುರಿಸುವರು. ನೆಲದ ಮೇಲೆ ಇರುವ ಸಣ್ಣ ಪ್ರಾಣಿಯನ್ನು ಹಿಡಿಯಲು ಆಕಾಶದಿಂದ ಬರುವ ಹಕ್ಕಿಗಳಂತೆ ಈ ಎರಡು ರಾಷ್ಟ್ರಗಳಿರುವವು. ಅವರು ಒಟ್ಟಾಗಿ ಪೂರ್ವದ ಜನರ ಐಶ್ವರ್ಯವನ್ನು ಕಿತ್ತುಕೊಳ್ಳುವರು. ಎಫ್ರಾಯೀಮ್ ಮತ್ತು ಯೆಹೂದಗಳು ಏದೋಮನ್ನು, ಮೋವಾಬನ್ನು ಮತ್ತು ಅಮ್ಮೋನನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳುವವು.
ಆ ಸಮಯದಲ್ಲಿ ಇಷಯನ ವಂಶದಿಂದ ಒಬ್ಬ ವಿಶೇಷ ವ್ಯಕ್ತಿಯು ಹುಟ್ಟುವನು. ಆತನು ಒಂದು ಧ್ವಜದಂತಿರುವನು. ಎಲ್ಲಾ ಜನಾಂಗಗಳು ಆತನ ಸುತ್ತಲೂ ಸೇರಿಬರಬೇಕೆಂದು ಈ ಧ್ವಜವು ತೋರಿಸುವುದು. ಆ ಜನಾಂಗಗಳು ತಾವು ಏನು ಮಾಡಬೇಕೆಂದು ಕೇಳುವರು. ಆತನಿರುವ ಸ್ಥಳವು ಮಹಿಮೆಯಿಂದ ತುಂಬುವದು.
ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯುದ್ಧಮಾಡಲು ನಾನು ಅಶ್ಶೂರವನ್ನು ಕಳುಹಿಸುವೆನು. ನಾನು ಅವರ ಮೇಲೆ ಕೋಪಗೊಂಡಿರುವೆನು. ಅಶ್ಶೂರಕ್ಕೆ ಅವರ ಮೇಲೆ ಯುದ್ಧ ಮಾಡುವಂತೆ ಆಜ್ಞಾಪಿಸುವೆನು. ಅಶ್ಶೂರವು ಅವರನ್ನು ಸೋಲಿಸಿ ಅವರ ಐಶ್ವರ್ಯವನ್ನೆಲ್ಲಾ ಸೂರೆಮಾಡುವದು. ಇಸ್ರೇಲು ಅಶ್ಶೂರದವರಿಗೆ ಬೀದಿಯ ಧೂಳಿನಂತಾಗುವದು.
ಆದ್ದರಿಂದ ಯೆಹೋವನು ತನ್ನ ಜನರ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ. ಯೆಹೋವನು ತನ್ನ ಕೈಗಳನ್ನೆತ್ತಿ ಅವರನ್ನು ಶಿಕ್ಷಿಸುವನು. ಆಗ ಪರ್ವತಗಳೂ ಹೆದರಿಕೊಳ್ಳುವವು; ಹೆಣಗಳು ಕಸದಂತೆ ರಸ್ತೆಗಳಲ್ಲಿ ಬಿದ್ದುಕೊಂಡಿರುವವು. ಆದರೆ ದೇವರು ಅವರ ಮೇಲೆ ಕೋಪಿಸಿಕೊಂಡೇ ಇರುವನು. ಜನರನ್ನು ಶಿಕ್ಷಿಸಲು ಆತನ ಕೈಗಳು ಮೇಲೆತ್ತಲ್ಪಟ್ಟಿರುವವು.
“ಬರುತ್ತಿರುವ ಒಬ್ಬನನ್ನು ನೋಡುತ್ತಿದ್ದೇನೆ. ಆದರೆ ಈಗಲ್ಲ. ಬರುತ್ತಿರುವ ಒಬ್ಬನನ್ನು ನೋಡುತ್ತಿದ್ದೇನೆ, ಆದರೆ ಬೇಗನೆ ಅಲ್ಲ. ಯಾಕೋಬನ ವಂಶದಿಂದ ನಕ್ಷತ್ರವೊಂದು ಬರುವುದು. ಇಸ್ರೇಲರಿಂದ ಅರಸನೊಬ್ಬನು ಬರುವನು. ಅವನು ಮೋವಾಬ್ಯರ ತಲೆಯನ್ನು ಜಜ್ಜುವನು. ಆ ಅರಸನು ಶೇತನ ಪುತ್ರರೆಲ್ಲರ ತಲೆಗಳನ್ನು ಜಜ್ಜುವನು.
ಈಗ ಯೆಹೋವನು ಹೇಳುವುದೇನೆಂದರೆ: “ಇನ್ನು ಮೂರು ವರ್ಷದೊಳಗೆ ಕೂಲಿಗಾರನು ತನ್ನ ಸಮಯವನ್ನು ಲೆಕ್ಕಿಸುವಂತೆ ಎಲ್ಲಾ ಜನರು ಮತ್ತು ಅವರು ಹೆಮ್ಮೆಪಡುವ ವಸ್ತುಗಳು ಹೋಗಿಬಿಡುತ್ತವೆ. ಕೇವಲ ಸ್ವಲ್ಪ ಮಂದಿ ಮಾತ್ರ ಉಳಿಯುವರು. ದೇಶದಲ್ಲಿ ಹೆಚ್ಚುಮಂದಿ ಉಳಿಯರು.”
ಈ ಸಂದೇಶವು ಮೋವಾಬ್ ದೇಶವನ್ನು ಕುರಿತದ್ದು. ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: “ನೆಬೋ ಪರ್ವತಕ್ಕೆ ದುರ್ಗತಿ ಬರುವುದು. ನೆಬೋ ಪರ್ವತ ಪ್ರದೇಶವು ಹಾಳಾಗುವುದು. ಕಿರ್ಯಾತಯಿಮ್ ಪಟ್ಟಣವು ಸೋಲುವುದು. ಅದನ್ನು ವಶಪಡಿಸಿಕೊಳ್ಳಲಾಗುವುದು. ಭದ್ರವಾದ ಸ್ಥಳವನ್ನು ಸೋಲಿಸಿ ಧ್ವಂಸ ಮಾಡಲಾಗುವುದು.