Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 25:12 - ಪರಿಶುದ್ದ ಬೈಬಲ್‌

12 ಯೆಹೋವನು ಜನರ ಉನ್ನತವಾದ ಗೋಡೆಗಳನ್ನೂ ಸುರಕ್ಷಿತ ಸ್ಥಳಗಳನ್ನೂ ನಾಶಮಾಡುವನು. ಯೆಹೋವನು ಅವುಗಳನ್ನೆಲ್ಲಾ ನೆಲಸಮಮಾಡಿ ಧೂಳಿಗೇ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದುರ್ಗಮವಾಗಿಯೂ, ಎತ್ತರವಾಗಿಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲ ಸಮಮಾಡಿ ಧೂಳಿಗೆ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ದುರ್ಗದಂತೆ ಎತ್ತರವಾಗಿರುವ ಅದರ ಕೋಟೆಕೊತ್ತಲಗಳನ್ನು ಕೆಳಕ್ಕೆ ಕೆಡವಿ ನೆಲಸಮಮಾಡುವರು. ಅದು ಧೂಳು ಪಾಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದುರ್ಗಮವಾಗಿಯೂ ಎತ್ತರವಾಗಿಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ ತಗ್ಗಿಸಿ ನೆಲಸಮಮಾಡಿ ದೂಳಿಗೇ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದುರ್ಗದಂತೆ ಎತ್ತರವಾಗಿರುವ ನಿನ್ನ ಕೋಟೆಗಳನ್ನು ಕೆಡವಿ, ತಗ್ಗಿಸಿ, ನೆಲಸಮಮಾಡುವರು, ಅದು ಧೂಳುಪಾಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 25:12
14 ತಿಳಿವುಗಳ ಹೋಲಿಕೆ  

ನಂತರ ಬಲಿಷ್ಠನಾದ ದೇವದೂತನೊಬ್ಬನು ಒಂದು ದೊಡ್ಡ ಬಂಡೆಯನ್ನು ಎತ್ತಿಕೊಂಡನು. ಆ ಬಂಡೆಯು ಒಂದು ದೊಡ್ಡ ಬೀಸುವ ಕಲ್ಲಿನಂತಿತ್ತು. ದೇವದೂತನು ಆ ಬಂಡೆಯನ್ನು ಸಮುದ್ರದಲ್ಲಿ ಎಸೆದು ಹೀಗೆ ಹೇಳಿದನು: “ಮಹಾನಗರಿಯಾದ ಬಾಬಿಲೋನ್ ಹೀಗೆಯೇ ಕೆಳಕ್ಕೆ ಎಸೆಯಲ್ಪಡುವುದು. ಆ ನಗರಿಯು ಮತ್ತೆಂದಿಗೂ ಕಾಣಿಸುವುದಿಲ್ಲ.


ಆದರೆ ಯೆಹೋವನು ಗರ್ವದ ನಗರವನ್ನು ನಾಶಮಾಡುವನು. ಅಲ್ಲಿ ವಾಸಿಸುವವರನ್ನು ಆತನು ಶಿಕ್ಷಿಸುತ್ತಾನೆ. ಯೆಹೋವನು ಆ ಉನ್ನತವಾದ ನಗರವನ್ನು ಧೂಳಿಗೆ ಹಾಕಿಬಿಡುವನು.


ದೇವಜನರ ನಂಬಿಕೆಯಿಂದಲೇ ಜೆರಿಕೊ ಪಟ್ಟಣದ ಗೋಡೆಗಳ ಸುತ್ತಲೂ ಏಳು ದಿನಗಳವರೆಗೆ ಸುತ್ತಿದಾಗ ಅವು ಬಿದ್ದುಹೋದವು.


ಆಮೇಲೆ ‘ಇದೇ ರೀತಿಯಲ್ಲಿ ಬಾಬಿಲೋನ್ ಕೂಡ ಮುಳುಗಿಹೋಗುವುದು. ಬಾಬಿಲೋನ್ ಎಂದಿಗೂ ಮೇಲಕ್ಕೆ ಏಳುವದಿಲ್ಲ. ಅಲ್ಲಿ ನಾನು ಬರಮಾಡುವ ಅನೇಕ ವಿಪತ್ತುಗಳಿಂದಾಗಿ ಬಾಬಿಲೋನ್ ಮುಳುಗಿಹೋಗುವುದು’” ಎಂದು ಹೇಳು. ಯೆರೆಮೀಯನ ಸಂದೇಶ ಇಲ್ಲಿಗೆ ಮುಗಿಯುತ್ತದೆ.


ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಬಾಬಿಲೋನಿನ ಅಗಲವಾದ ಮತ್ತು ಸುಭದ್ರವಾದ ಗೋಡೆಯನ್ನು ಬೀಳಿಸಲಾಗುವುದು. ಅದರ ಎತ್ತರವಾದ ಬಾಗಿಲುಗಳನ್ನು ಸುಟ್ಟುಹಾಕಲಾಗುವುದು. ಬಾಬಿಲೋನಿನ ಜನರು ನಗರವನ್ನು ರಕ್ಷಿಸಲು ಬಹಳ ಕಷ್ಟಪಡುವರು. ಆದರೆ ಅದು ನಿಷ್ಪ್ರಯೋಜಕವಾಗುವುದು. ನಗರವನ್ನು ರಕ್ಷಿಸುವ ಪ್ರಯತ್ನದಲ್ಲಿ ಅವರು ತುಂಬಾ ಶ್ರಮವಹಿಸುವರು. ಆದರೆ ಅವರು ಕೇವಲ ಅಗ್ನಿಗೆ ಆಹುತಿಯಾಗುವರು.”


ಇದು ಮೋವಾಬನ್ನು ಕುರಿತ ದುಃಖಕರವಾದ ಸಂದೇಶ: ಒಂದು ರಾತ್ರಿ ಮೋವಾಬಿನ ಆರ್ ಪಟ್ಟಣದಿಂದ ಸಂಪತ್ತನ್ನು ಸೈನ್ಯವು ಸೂರೆ ಮಾಡಿತು. ಆ ರಾತ್ರಿ ನಗರವು ನಾಶಮಾಡಲ್ಪಟ್ಟಿತು. ಒಂದು ರಾತ್ರಿ ಸೈನ್ಯವು ಮೋವಾಬಿನ ಕೀರ್ ಪಟ್ಟಣದಿಂದ ಸಂಪತ್ತನ್ನು ಸೂರೆ ಮಾಡಿತು. ಆ ರಾತ್ರಿ ಪಟ್ಟಣವು ಕೆಡವಲ್ಪಟ್ಟಿತು.


ಯೆಹೋವನು ಹೇಳುವುದೇನೆಂದರೆ: “ನಾನು ಬಾಬಿಲೋನನ್ನು ಪ್ರಾಣಿಗಳ ವಾಸಸ್ಥಳವನ್ನಾಗಿ ಬದಲಾಯಿಸುವೆನು. ಆ ಸ್ಥಳವು ಜವುಗು ನೆಲವಾಗಿರುವುದು. ‘ನಾಶನವೆಂಬ ಪೊರಕೆಯಿಂದ’ ಅದನ್ನು ಗುಡಿಸುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಅವರು ಎತ್ತರವಾದ ಬುರುಜುಗಳಂತೆಯೂ ಬಲಿಷ್ಠವಾದ ಕೋಟೆಗೋಡೆಯಂತೆಯೂ ಇರುವರು. ಆದರೆ ದೇವರು ಅವರನ್ನು ಶಿಕ್ಷಿಸುವನು.


ನೀನು ವಿದೇಶದ ಪಟ್ಟಣವನ್ನು ಕೆಡವಿಹಾಕಿರುವೆ. ಆ ಪಟ್ಟಣವು ಮಹಾಗೋಡೆಗಳಿಂದ ಸಂರಕ್ಷಿಸಲ್ಪಟ್ಟದ್ದಾಗಿತ್ತು. ಆದರೆ ಈಗ ಅದು ಕೇವಲ ಕಲ್ಲುಗಳ ರಾಶಿ. ಅರಮನೆಯು ಕೆಡವಲ್ಪಟ್ಟಿದೆ. ಅದನ್ನು ತಿರುಗಿ ಕಟ್ಟಲು ಸಾಧ್ಯವೇ ಇಲ್ಲ.


ಯೆಹೋವನು ಯಾಕೋಬನ ಮನೆಗಳನ್ನು ನಾಶಪಡಿಸಿದನು. ಆತನು ಕನಿಕರವಿಲ್ಲದೆ ಅವುಗಳನ್ನು ನುಂಗಿಬಿಟ್ಟನು. ತನ್ನ ಕೋಪದಲ್ಲಿ ಆತನು ಯೆಹೂದದ ಮಗಳ ಕೋಟೆಗಳನ್ನು ನಾಶಪಡಿಸಿದನು. ಯೆಹೋವನು ಯೆಹೂದ ರಾಜ್ಯವನ್ನೂ ಮತ್ತು ಅದರ ಅಧಿಪತಿಗಳನ್ನೂ ನೆಲಕ್ಕೆ ಅಪ್ಪಳಿಸಿದನು. ಆತನು ಯೆಹೂದ ರಾಜ್ಯಕ್ಕೆ ಅವಮಾನ ಮಾಡಿದ್ದಾನೆ.


ಈ ಸಂದೇಶವು ಮೋವಾಬ್ ದೇಶವನ್ನು ಕುರಿತದ್ದು. ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: “ನೆಬೋ ಪರ್ವತಕ್ಕೆ ದುರ್ಗತಿ ಬರುವುದು. ನೆಬೋ ಪರ್ವತ ಪ್ರದೇಶವು ಹಾಳಾಗುವುದು. ಕಿರ್ಯಾತಯಿಮ್ ಪಟ್ಟಣವು ಸೋಲುವುದು. ಅದನ್ನು ವಶಪಡಿಸಿಕೊಳ್ಳಲಾಗುವುದು. ಭದ್ರವಾದ ಸ್ಥಳವನ್ನು ಸೋಲಿಸಿ ಧ್ವಂಸ ಮಾಡಲಾಗುವುದು.


ನಿನ್ನ ಸೌಂದರ್ಯವು ನಿನಗೆ ಹೆಮ್ಮೆ ಏರುವಂತೆ ಮಾಡಿತು. ನಿನ್ನ ಘನತೆಯು ನಿನ್ನ ಜ್ಞಾನವನ್ನು ಕೆಡಿಸಿತು. ಆದ್ದರಿಂದ ನಿನ್ನನ್ನು ನೆಲಕ್ಕೆ ದಬ್ಬಿದೆ. ಈಗ ಬೇರೆ ರಾಜರುಗಳು ನಿನ್ನನ್ನೆ ಎವೆಯಿಕ್ಕದೆ ನೋಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು