ಯೆಶಾಯ 25:4 - ಪರಿಶುದ್ದ ಬೈಬಲ್4 ಯೆಹೋವನೇ, ನೀನೇ ನಮ್ಮ ಆಶ್ರಯವು. ಬಡವರಿಗೆ ನೀನೇ ಆಧಾರ. ಅವರ ಸಮಸ್ಯೆಗಳು ಅವರನ್ನು ಕಷ್ಟಕ್ಕೆ ಗುರಿಪಡಿಸುವವು. ಆದರೆ ನೀನು ಅವರನ್ನು ಸಂರಕ್ಷಿಸುವೆ. ಯೆಹೋವನೇ, ಒಂದು ಮನೆಯ ಜನರನ್ನು ಪ್ರವಾಹದಿಂದಲೂ, ಬಿಸಿಲಿನ ತಾಪದಿಂದಲೂ ಕಾಪಾಡುವಂತೆ ನೀನಿರುವೆ. ಮುಂದಿನ ತೊಂದರೆಗಳು ಬಿರುಗಾಳಿಯಂತೆಯೂ ಮಳೆಯಂತೆಯೂ ಇವೆ. ಮಳೆಯು ಗೋಡೆಗೆ ಬಡಿದು ಕೆಳಗೆ ಇಳಿಯುವದು. ಆದರೆ ಮನೆಯೊಳಗಿರುವವರಿಗೆ ಹಾನಿಯೇ ಆಗದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀನು ದೀನರಿಗೆ ಕೋಟೆಯು, ಇಕ್ಕಟ್ಟಿನಲ್ಲಿ ದಿಕಿಲ್ಲದವರಿಗೆ ರಕ್ಷಣಾದುರ್ಗವೂ, ಬಿಸಿಲಿಗೆ ನೆರಳೂ, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ದುರ್ಗವಾಗಿರುವೆ ನೀನು ದೀನದಲಿತರಿಗೆ, ಸುರಕ್ಷಿತ ಕೋಟೆಯಾಗಿರುವೆ ದಟ್ಟದರಿದ್ರರಿಗೆ, ನೆರಳಾಗಿರುವೆ ಬಿಸಿಲೊಳು ಬೆಂದವರಿಗೆ. ಕ್ರೂರಿಗಳ ಹೊಡೆತ ಚಳಿಗಾಲದ ಚಂಡಮಾರುತವಾಗಿರೆ, ಬಿರುಗಾಳಿಯ ಆ ಬಡಿತಕೆ ನೀನಾದೆ ಆಸರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀನು ದೀನರಿಗೆ ಕೋಟೆ, ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣದುರ್ಗ, ಬಿಸಿಲಿಗೆ ನೆರಳು, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀವು ದೀನರಿಗೆ ಕೋಟೆಯೂ, ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ, ಭೀಕರರ ಶ್ವಾಸವು ಬಿಸಿಲಿಗೆ ನೆರಳೂ, ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋಸ್ಕರ ಆಶ್ರಯವೂ ಆಗಿದ್ದೀರಿ. ಅಧ್ಯಾಯವನ್ನು ನೋಡಿ |
ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.
ನಿಮಗೆ ಸಹಾಯದ ಅವಶ್ಯಕತೆ ಬಂದಾಗ ನೀವು ಆ ಸುಳ್ಳುದೇವರುಗಳನ್ನು ಕರೆಯುವಿರಿ. ಅವುಗಳನ್ನು ನಿಮ್ಮ ಸುತ್ತಲೂ ಸೇರಿಸಿಕೊಂಡಿರುವಿರಿ. ಆದರೆ ನಾನು ಹೇಳುವುದೇನೆಂದರೆ, ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವುದು. ಅವುಗಳನ್ನೆಲ್ಲ ಉಸಿರಿನ ಗಾಳಿಯು ನಿಮ್ಮಿಂದ ದೂರಕ್ಕೆ ಕೊಂಡೊಯ್ಯುವುದು. ಆದರೆ ನನ್ನನ್ನು ಅವಲಂಬಿಸಿರುವವರು ಭೂಮಿಯನ್ನು ಪಡೆದುಕೊಳ್ಳುವರು. ನನ್ನ ಪವಿತ್ರ ಪರ್ವತವನ್ನು ಬಾಧ್ಯವಾಗಿ ಹೊಂದಿಕೊಳ್ಳುವರು.”
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.