ಯೆಶಾಯ 25:5 - ಪರಿಶುದ್ದ ಬೈಬಲ್5 ವೈರಿಯು ಆರ್ಭಟಿಸುತ್ತಾ ಗದ್ದಲ ಮಾಡುತ್ತಾನೆ. ಆ ಭಯಂಕರ ಶತ್ರುವು ಯುದ್ಧಕ್ಕೆ ಬಾ ಎಂದು ಸವಾಲು ಹಾಕುತ್ತಾನೆ. ಆದರೆ ದೇವರೇ, ನೀನು ಅವನನ್ನು ತಡೆಯುವೆ. ಬೇಸಿಗೆ ಕಾಲದಲ್ಲಿ ಮರುಭೂಮಿಯಲ್ಲಿರುವ ಸಸಿಗಳು ಬಾಡಿಹೋಗಿ ನೆಲದ ಮೇಲೆ ಬಿದ್ದುಹೋಗುವವು. ಅದೇ ರೀತಿಯಲ್ಲಿ ನೀನು ವೈರಿಯನ್ನು ಸೋಲಿಸಿ ಅವನು ಮೊಣಕಾಲೂರುವಂತೆ ಮಾಡುವೆ. ಕಾರ್ಮುಗಿಲು ಬೇಸಿಗೆಯ ತಾಪವನ್ನು ನಿವಾರಿಸುವದು. ಅದೇ ರೀತಿಯಲ್ಲಿ ನೀನು ಶತ್ರುವಿನ ಆರ್ಭಟವನ್ನು ನಿಲ್ಲಿಸುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮೋಡಗಳು ಒಣನೆಲದ ಕಾವನ್ನು ತಂಪಾಗಿಸುವಂತೆ ನೀನು ಅನ್ಯರ ಗದ್ದಲವನ್ನು ತಗ್ಗಿಸುವಿ; ಮೋಡದ ನೆರಳಿನಿಂದ ಬಿಸಿಲು ಹೇಗೆ ಕಡಿಮೆಯಾಗುವುದೋ ಹಾಗೆ ನಿನ್ನಿಂದ ಭೀಕರರ ಉತ್ಸಾಹ ಗಾನವು ಕ್ರಮೇಣ ನಿಂತುಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅನ್ಯರ ಆರ್ಭಟವನು ನೀ ಅಡಗಿಸುವೆ, ಸುಡುವ ಒಣ ನೆಲವನು ಮೇಘ ತಣಿಸುವಂತೆ. ಕ್ರೂರಿಗಳ ಹರ್ಷೋದ್ಗಾರವನು ನಿಲ್ಲಿಸುವೆ, ಬಿಸಿಲನು ತಡೆಯುವ ಮೋಡದ ನೆರಳಿನಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 [ಮೇಘವು] ಒಣನೆಲದ ಕಾವನ್ನು ಆರಿಸುವಂತೆ ನೀನು ಅನ್ಯರ ಗದ್ದಲವನ್ನು ಅಣಗಿಸುವಿ; ಮೋಡದ ನೆರಳಿನಿಂದ ಬಿಸಿಲು ಹೇಗೋ ಹಾಗೆಯೇ ನಿನ್ನಿಂದ ಭೀಕರರ ಉತ್ಸಾಹಗಾನವು ನಿಂತುಹೋಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಮೇಘವು ಒಣನೆಲದ ಕಾವನ್ನು ಆರಿಸುವ ಹಾಗೆ, ನೀವು ವಿದೇಶಿಯರ ಗದ್ದಲವನ್ನು ಅಡಗಿಸುವಿರಿ; ಮೋಡದ ನೆರಳಿನಿಂದ ಬಿಸಿಲು ತಡೆಯುವ ಹಾಗೆಯೇ, ನೀವು ಕ್ರೂರಿಗಳ ಉತ್ಸಾಹಗಾನವನ್ನು ನಿಲ್ಲಿಸಿಬಿಡುವಿರಿ. ಅಧ್ಯಾಯವನ್ನು ನೋಡಿ |