ಯೆಶಾಯ 25:9 - ಪರಿಶುದ್ದ ಬೈಬಲ್9 ಆ ಸಮಯದಲ್ಲಿ ಜನರು, “ನಮ್ಮ ದೇವರು ಇಲ್ಲಿದ್ದಾನೆ. ಆತನಿಗಾಗಿಯೇ ನಾವು ಕಾಯುತ್ತಿದ್ದೆವು. ಆತನು ನಮ್ಮನ್ನು ರಕ್ಷಿಸಲು ಬಂದಿದ್ದಾನೆ. ನಾವು ನಮ್ಮ ದೇವರಾದ ಯೆಹೋವನಿಗಾಗಿ ಕಾಯುತ್ತಿದ್ದೆವು. ಆತನು ನಮ್ಮನ್ನು ರಕ್ಷಿಸುವಾಗ ನಾವು ಹರ್ಷಭರಿತರಾಗಿ ಸಂತೋಷಿಸುವೆವು” ಎಂದು ಹೇಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆ ದಿನದಲ್ಲಿ ಜನರು, “ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು” ಎಂದು ಹೇಳಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇದು ನೆರವೇರಿದಾಗ ಜನರು : “ಇವರೇ ನಮ್ಮ ದೇವರು; ನಮ್ಮನ್ನು ರಕ್ಷಿಸುವರೆಂದು ಇವರನ್ನೇ ನೆಚ್ಚಿಕೊಂಡಿದ್ದೆವು ಇವರೇ ಸರ್ವೇಶ್ವರ; ಇವರನ್ನೇ ನೆಚ್ಚಿಕೊಂಡಿದ್ದೆವು. ಇವರು ನೀಡುವ ರಕ್ಷಣೆಯಲ್ಲಿ ಆನಂದಿಸೋಣ !” ಎಂದು ಹೇಳಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆ ದಿನದಲ್ಲಿ ಜನರು - ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನೇ ಯೆಹೋವನು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ, ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು ಎಂದು ಹೇಳಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆ ದಿನದಲ್ಲಿ ಜನರು, “ಇಗೋ, ಇವರೇ ನಮ್ಮ ದೇವರು, ನಾವು ಇವರನ್ನೇ ನಂಬಿದ್ದೇವೆ. ಇವರೇ ನಮ್ಮನ್ನು ರಕ್ಷಿಸುವರು. ಇವರೇ ಯೆಹೋವ ದೇವರು, ನಾವು ಇವರನ್ನೇ ನಂಬಿದ್ದೇವೆ, ನಾವು ಇವರ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷಪಡುವೆವು,” ಎಂದು ಹೇಳುವರು. ಅಧ್ಯಾಯವನ್ನು ನೋಡಿ |
ಅದೇ ರೀತಿಯಲ್ಲಿ ಯೆಹೋವನು ಚೀಯೋನನ್ನು ಮತ್ತು ನಿರ್ಜನವಾದ ಅದರ ಸ್ಥಳಗಳನ್ನು ಆದರಿಸುವನು; ಅವರಿಗಾಗಿ ಮಹಾದೊಡ್ಡ ಕಾರ್ಯವನ್ನು ಮಾಡುವನು. ಯೆಹೋವನು ಮರುಭೂಮಿಯನ್ನು ಏದೆನ್ ಉದ್ಯಾನವನದಂತೆ ಮಾಡುವನು. ಆ ದೇಶವು ಬರಿದಾಗಿತ್ತು. ಆದರೆ ಅದು ಯೆಹೋವನ ಉದ್ಯಾನವನವಾಗುವದು. ಅದರೊಳಗಿರುವ ಜನರು ಸಂತೋಷಭರಿತರಾಗುವರು. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವರು. ಅವರು ಕೃತಜ್ಞತಾಸ್ತುತಿ ಮಾಡುವರು, ಜಯಗೀತೆಯನ್ನು ಹಾಡುವರು.
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.